EXAMINATION:ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ ಸಾಧ್ಯತೆ: ಬಿ.ಸಿ.ನಾಗೇಶ್

ಬೆಂಗಳೂರು: ಪಾಠಗಳು ಇನ್ನೂ ಪೂರ್ಣಗೊಳ್ಳದ ಕಾರಣ ಮಾರ್ಚ್‌ ತಿಂಗಳಿನಲ್ಲಿ ನಡೆಯಬೇಕಿದ್ದ ದ್ವಿತೀಯ ಪಿಯು ಪರೀಕ್ಷೆಗಳು ಏಪ್ರಿಲ್ ಕೊನೆಯ ವಾರಕ್ಕೆ ಮುಂದೂಡಿಕೆಯಾಗುವ ಸಾಧ್ಯತೆಗಳಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಏಪ್ರಿಲ್ ನಂತರ ಪರೀಕ್ಷೆಗಳು ವಿಳಂಬವಾಗುವುದಿಲ್ಲ. ಏಕೆಂದರೆ, ಪರೀಕ್ಷೆ ವಿಳಂಬವಾಗಿದ್ದೇ ಆದರೆ, ಅದು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET), ಸಾಮಾನ್ಯ ಪ್ರವೇಶ ಪರೀಕ್ಷೆ ಮತ್ತು ವಿದ್ಯಾರ್ಥಿಗಳ ಇತರ ಪ್ರವೇಶ ಪರೀಕ್ಷೆಗಳ ವೇಳಾಪಟ್ಟಿಗಳ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಪರೀಕ್ಷೆಗಳು ವಿಳಂಬವಾಗುವುದಿಲ್ಲ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಮಾರ್ಚ್‌ನಲ್ಲಿ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ ಎಂದು ಪಿಯು ಇಲಾಖೆ ಹೇಳಿಕೊಂಡಿತ್ತು. ಆದರೆ ಕೋವಿಡ್ ನಿರ್ಬಂಧಗಳಿಂದಾಗಿ ಪಠ್ಯಕ್ರಮವನ್ನು ಪೂರ್ಣಗೊಳಿಸಿಲ್ಲ ಎಂದು ಉಪನ್ಯಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಪರೀಕ್ಷೆ ಮುಂದೂಡುವ ಕುರಿತು ಚಿಂತನೆ ನಡೆಸಿದ್ದು, ಈ ಕುರಿತು ಔಪಚಾರಿಕ ಸುತ್ತೋಲೆ ಇನ್ನಷ್ಟೇ ಹೊರಬೀಳಬೇಕಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

 

Please follow and like us:

Leave a Reply

Your email address will not be published. Required fields are marked *

Next Post

ಕುರುಕ್ಷೇತ್ರದ ಯುದ್ಧದ ಫಲಿತಾಂಶದ ಬಗ್ಗೆ ಈ 7 ಜನರಿಗೆ ಮೊದಲೇ ತಿಳಿದಿತ್ತಂತೆ

Wed Dec 29 , 2021
ಭಾರತ ಸಂಸ್ಕೃತಿಗಳ ತವರು. ದೇಶದ ಐತಿಹ್ಯದಲ್ಲಿ ಕಲ್ಪನೆಗಳೂ ಬೆರೆತುಹೋಗಿ ಒಂದು ಸುಂದರ ಕಥೆಯಂತೆ ಕಾಣುತ್ತಿದೆ. ಆದ್ರಲ್ಲೂ ಹಿಂದೂ ಧರ್ಮದಲ್ಲಿ ಮಹಾಭಾರತ ಹಾಗೂ ರಾಮಾಯಣಕ್ಕೆ ಪಾವಿತ್ರತೆಯ ಸ್ಥಾನವನ್ನು ನೀಡಲಾಗಿದೆ. ಮಹಾಭಾರತ ಜೀವನದಲ್ಲಿ ಒಬ್ಬರು ಅಳವಡಿಸಿಕೊಳ್ಳಬೇಕಾದ ಹಲವು ಮಹತ್ವದ ವಿಷಯಗಳನ್ನು ಕಲಿಸಲಿದೆ.. ಹೀಗಾಗಿ ದೇಶದಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಕೂಡ ನಮ್ಮ ಹಿಂದೂ ಧರ್ಮದ ಹೆಮ್ಮೆಯ ಗ್ರಂಥ ಮಹಾಭಾರತಕ್ಕೆ ಸಾಕಷ್ಟು ಪ್ರಾಧ್ಯಾನತೆ ನೀಡಲಾಗುತ್ತಿದೆ.. ಅಲ್ಲದೆ ಮಹಾಭಾರತದಲ್ಲಿ ಬರುವ ಅದರಲ್ಲಿ ಬರುವ ಪ್ರತಿಯೊಂದು ಪಾತ್ರವನ್ನು ದೇವರೆಂದೇ […]

Advertisement

Wordpress Social Share Plugin powered by Ultimatelysocial