ಕೊರೋನಾ ವ್ಯಾಕ್ಸಿನ್ ಫಸ್ಟ್ ಡೋಸ್ ಪಡೆದ ಪುನೀತ್ ರಾಜ್‌ಕುಮಾರ್

ಕೊರೋನಾ ಹೆಚ್ಚುತ್ತಿರುವ ಸಂದರ್ಭವೇ ಸ್ಯಾಂಡಲ್‌ವುಡ್‌ ನಟ ಪುನೀತ್ ರಾಜ್‌ಕುಮಾರ್ ವ್ಯಾಕ್ಸಿನ್ ಪಡೆದಿದ್ದಾರೆ. ಕೊರೋನಾ ವ್ಯಾಕ್ಸಿನ್‌ನ ಫಸ್ಟ್ ಡೋಸ್ ಪಡೆದ ನಟ ಇದನ್ನು ಟ್ವಿಟರ್‌ನಲ್ಲಿ ಶೇರ್ ಮಾಡಿದ್ದಾರೆ.

ನಾನು ಕೊರೋನಾ ವ್ಯಾಕ್ಸಿನ್ ಮೊದಲ ಡೋಸ್ ಪಡೆದಿದ್ದೇನೆ. ನೀವೂ 45 ವರ್ಷ ಮೇಲ್ಪಟ್ಟವರಾಗಿದ್ದರೆ ವ್ಯಾಕ್ಸಿನೇಷನ್ ಪಡ್ಕೊಳ್ಳಿ ಎಂದು ಪೋಟೋ ಜೊತೆ ಕೇಳಿಕೊಂಡಿದ್ದಾರೆ ನಟ.

 

ಯುವರತ್ನ ಸಿನಿಮಾ ರಿಲೀಸ್ ಸಂದರ್ಭವೇ ಕೊರೋನಾ ಕೂಡಾ ಹೆಚ್ಚಾಗಿದ್ದು, ಸಿನಿಮಾ ಪ್ರದರ್ಶನಕ್ಕೂ ತೊಂದರೆಯಾಗಿತ್ತು. ನಟ ಸಿಎಂ ಅವರನ್ನು ಭೇಟಿಯಾಗಿ ಕಾಲಾವಕಾಶ ನೀಡುವಂತೆ ಕೇಳಿಕೊಂಡಿದ್ದರು

ಸದ್ಯ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಭಾರತದಲ್ಲಿ ಒಂದು ದಿನದ ಕೊರೋನಾ ಸಂಖ್ಯೆ 1 ಲಕ್ಷ ದಾಟಿದೆ. ಹಾಗೆಯೇ ಸಾವಿನ ಸಂಖ್ಯೆಯೂ ಹೆಚ್ಚಾಗಿರುವುದು ಆತಂಕ ಹೆಚ್ಚಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಬಿಬಿಎಂಪಿಯಿಂದ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ

Wed Apr 7 , 2021
ಕೋವಿಡ್ ಸೋಂಕಿತರ ಒಳರೋಗಿ ಚಿಕಿತ್ಸೆಗಾಗಿ ಬಿಟ್ಟು ಗಳ ಮರುಹಂಚಿಕೆ ಬಗ್ಗೆ ಅಧಿಸೂಚನೆ, ಬಿಬಿಎಂಪಿಯಿಂದ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ, ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯನ್ನು ಗಮನದಲ್ಲಿಟ್ಟುಕೊಂಡು ಕೆಪಿಎಂಇ ಕಾಯ್ದೆ ಅಡಿ ನೊಂದಾಯಿತ ಖಾಸಗಿ ಆಸ್ಪತ್ರೆಗಳು, ನರ್ಸಿಂಗ್ ಹೋಮ್ ಗಳಲ್ಲಿ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ಸುವರ್ಣ ಅರೋಗ್ಯ ಅಡಿಯಲ್ಲಿ, ಶೇಕಡ 50ರಷ್ಟು ಹಾಸಿಗೆಗಳನ್ನು ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಮತ್ತು ಇತರ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಆಯಾ ಜಿಲ್ಲಾಧಿಕಾರಿಗಳಿಂದ ಹಾಸಿಗೆ ಹಂಚಿಕೆ ಮಾಡುವ ಬಗ್ಗೆ ಸೂಚಿಸಲಾಗಿದೆ […]

Advertisement

Wordpress Social Share Plugin powered by Ultimatelysocial