ಪುನೀತ್​ ಬದುಕು ಆದರ್ಶಪ್ರಾಯ, ಶೀಘ್ರದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ- ಸಿಎಂ ಬೊಮ್ಮಾಯಿ

ಬೆಂಗಳೂರು: ನಮ್ಮೆಲ್ಲರ ಅಚ್ಚುಮೆಚ್ಚಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬದುಕು, ಸಾರ್ವಜನಿಕವಾಗಿ ಅವರ ನಡವಳಿಕೆ, ಬಡವರಿಗೆ ಸಹಾಯ ಮಾಡಿದ ರೀತಿ ಆದರ್ಶಪ್ರಾಯ ಹಾಗೂ ಪ್ರೇರಣೆದಾಯಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪುನೀತ್ ಅಭಿನಯದ ಸಿನಿಮಾ ಜೇಮ್ಸ್ ಚಿತ್ರಕ್ಕೆ ಶುಭಾಶಯ ಕೋರಿದ ಮುಖ್ಯಮಂತ್ರಿಗಳು, ಪುನೀತ್​ ಅವರನ್ನು ಕೊಂಡಾಡಿದರು.

ಅಪ್ಪು ಸಣ್ಣ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದಾರೆ. ಅವರ ಕೆಲಸಗಳನ್ನು ನಾವೆಲ್ಲರೂ ಸ್ಮರಿಸಬೇಕು ಎಂದರು. ಅವರು ಬದುಕಿದ್ದಿದ್ದರೆ ಅವರ 47 ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡುತ್ತಿದ್ದೆವು.ಅವರನ್ನು ಕಳೆದುಕೊಂಡು ದುಃಖದಲ್ಲಿದ್ದರೂ ಕೂಡ ಅವರ ಬದುಕು ನಮಗೆ ಸ್ಫೂರ್ತಿಯಾಗಿದೆ ಎಂದರು.

ಪುನೀತ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲು ಆದಷ್ಟು ಶೀಘ್ರವಾಗಿ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ದಿನಾಂಕ ನಿಗದಿ ಮಾಡಲಾಗುವುದು. ಪುನೀತ ಹಾಗೂ ಡಾ. ರಾಜ್ ಕುಮಾರ್ ಅವರಿಗೆ ಗೌರವ ಬರುವ ರೀತಿಯಲ್ಲಿ ಕಾರ್ಯಕ್ರಮ ಏರ್ಪಡಿಸಲು ಸಮಿತಿಯನ್ನು ರಚಿಸಲಾಗುವುದು ಎಂದರು.

Koo App ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಕರ್ನಾಟಕ ರತ್ನ, ಪ್ರೀತಿಯ ಅಪ್ಪು ದಿ. ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಪ್ರೀತಿ ಪೂರ್ವಕ ನಮನಗಳು. ಅತಿ ಚಿಕ್ಕ ವಯಸ್ಸಿನಲ್ಲಿ ನೀವು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಮಾಡಿದ ಜನಸೇವೆಯನ್ನು ಬಣ್ಣಿಸಲು ಪದಗಳೇ ಸಾಲದು.ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಫಿಲ್ಮ್ ಸಿಟಿಗೆ ಪುನೀತ್ ರಾಜ್​ಕುಮಾರ್ ಹೆಸರಿಟ್ಟರೆ ಸಂತೋಷ: ನಟ ಶಿವರಾಜ್​ಕುಮಾರ್

Thu Mar 17 , 2022
ಮೈಸೂರು: ಫಿಲ್ಮ್ ಸಿಟಿಗೆ ಪುನೀತ್ ರಾಜ್​ಕುಮಾರ್ ಹೆಸರಿಟ್ಟರೆ ಸಂತೋಷ ಎಂದು ನಟ ಶಿವರಾಜ್​ಕುಮಾರ್​ ಹೇಳಿದರು.   ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೇಮ್ಸ್​ ಚಿತ್ರದ ಡಬ್ಬಿಂಗ್ ಮಾಡುವ ವೇಳೆ ನನಗೆ ತುಂಬಾ ನೋವಾಗ್ತಾ ಇತ್ತು. ಅಪ್ಪು ಇಲ್ಲದ ಹುಟ್ಟು ಹಬ್ಬ ಆಚರಣೆ ತುಂಬಾ ದುಃಖದ ವಿಚಾರವಾಗಿದೆ. ಆದರೆ, ಏನಿದೆ ಅದನ್ನು ನೋಡಿಕೊಂಡು ಮುಂದೆ ಹೋಗ್ತಾ ಇರಬೇಕು‌ ಎಂದು ಹೇಳಿದರು. ಹುಟ್ಟುಹಬ್ಬಕ್ಕೆ ಇಬ್ಬರೂ ಗಿಫ್ಟ್​ಗಳನ್ನು ಶೇರ್ ಮಾಡ್ತಾ ಇದ್ವಿ. ಅಪ್ಪುಗೆ ಬ್ರಾಂಡ್ ವಾಚ್ […]

Advertisement

Wordpress Social Share Plugin powered by Ultimatelysocial