ಪುನೀತ್ ರಾಜ್ ಕುಮಾರ್ ಬಯೋಗ್ರಫಿ ‘ನೀನೇ ರಾಜಕುಮಾರ’ ಬಿಡುಗಡೆ ಮಾಡಿದ ಕಿಚ್ಚ ಸುದೀಪ್

 

ಅತೀ ನಿರೀಕ್ಷಿತ ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ ‘ನೀನೇ ರಾಜಕುಮಾರ್’ ಕೃತಿಯನ್ನು ಹೆಸರಾಂತ ನಟ ಕಿಚ್ಚ ಸುದೀಪ್ ಇಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದಿರುವ ಈ ಕೃತಿ ಈಗಾಗಲೇ ಬಿಡುಗಡೆಗೂ ಮುನ್ನ ಎರಡನೇ ಮುದ್ರಣ ಕಂಡಿದೆ.
ಕೃತಿಯ ಬಿಡುಗಡೆ ನಂತರ ಮಾತನಾಡಿದ ಸುದೀಪ್, ‘ಒಂದೊಳ್ಳೆಯ ಕೃತಿಯ ಮೂಲಕ ಶರಣು ಹುಲ್ಲೂರು ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಿದ್ದಾರೆ. ಪುನೀತ್ ಅವರದ್ದು ಪುಸ್ತಕವಾಗುವಂತಹ ವ್ಯಕ್ತಿತ್ವ. ಈ ಕೃತಿ ಅವರ ಜೀವನವನ್ನು ಸೊಗಸಾಗಿ ಹಿಡಿದಿಟ್ಟಿದೆ’ ಎಂದರು. ಅಲ್ಲದೇ ‘ಯಾವತ್ತಿಗೂ ನಾನು ಪುನೀತ್ ಅವರನ್ನು ಮೀಸ್ ಮಾಡಿಕೊಳ್ಳುತ್ತೇನೆ’ ಎಂದರು.
ಕಿಚ್ಚ ಸುದೀಪ್ ಅವರ ಪುಸ್ತಕವನ್ನು ಎರಡು ವರ್ಷಗಳ ಹಿಂದೆ ಪುನೀತ್ ರಾಜ್ ಕುಮಾರ್ ಅವರು ಬಿಡುಗಡೆ ಮಾಡಿದ್ದರು. ಪುನೀತ್ ಅವರ ಬಯೋಗ್ರಫಿಯನ್ನು ಇದೀಗ ಸುದೀಪ್ ಅವರು ರಿಲೀಸ್ ಮಾಡಿದ್ದು ಭಾವುಕತೆಗೆ ಸಾಕ್ಷಿಯಾಗಿತ್ತು.
ಈ ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ನಿರ್ಮಾಪಕರಾದ ಜಾಕ್ ಮಂಜು ಮತ್ತು ಕುಮಾರ್ ಹಾಗೂ ಸಾವಣ್ಣ ಪ್ರಕಾಶನದ ಜಮೀಲ್ ಮತ್ತು ಲೇಖಕ ಶರಣು ಹುಲ್ಲೂರು ಉಪಸ್ಥಿತರಿದ್ದರು.
ಪುನೀತ್ ಅವರ ಕುರಿತಾಗಿ ಬಂದಂತಹ ಮೊದಲ ಬಯೋಗ್ರಫಿ ಇದಾಗಿದ್ದು, 260ಕ್ಕೂ ಹೆಚ್ಚು ಪುಟಗಳನ್ನು ಹೊಂದಿದೆ. ಪುನೀತ್ ಅವರ ಹುಟ್ಟು ಹಬ್ಬದ ದಿದಂದು ಬಿಡುಗಡೆಯಾಗಿದೆ. ಪುನೀತ್ ಅವರ ಖಾಸಗಿ ಜೀವನ, ವೃತ್ತಿ ಜೀವನ, ಅಪರೂಪದ ಸಂಗತಿಗಳು ಮತ್ತು ಫೋಟೋಗಳನ್ನುಈ ಪುಸ್ತಕದಲ್ಲಿ ಸೊಗಸಾಗಿ ಹಿಡಿದಿಟ್ಟಿದ್ದಾರೆ ಲೇಖಕ ಶರಣು ಹುಲ್ಲೂರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಷ್ಟಕರವಾದ ಪಿಚ್ನಲ್ಲಿ ಶ್ರೇಯಸ್ ಅಯ್ಯರ್ ಅವರ ಪ್ರದರ್ಶನದಿಂದ `ಬಹಳ ಪ್ರಭಾವಿತರಾಗಿದ್ದ,ರೋಹಿತ್ ಶರ್ಮಾ!

Tue Mar 15 , 2022
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್‌ಗಾಗಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್‌ನಲ್ಲಿ, ಹೆಚ್ಚಾಗಿ ಬ್ಯಾಟರ್‌ಗಳು ಡಿಫೆಂಡ್‌ ಮಾಡುವ ಬದಲು ಆಗಾಗ್ಗೆ ದಾಳಿ ಮಾಡಲು ನೋಡುತ್ತಿದ್ದರು. ಶ್ರೇಯಸ್ ಅಯ್ಯರ್ ಅವರು ಶ್ರೀಲಂಕಾ ವಿರುದ್ಧದ ಪಿಂಕ್-ಬಾಲ್ ಅಫೇರ್‌ನಲ್ಲಿ ತಮ್ಮ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರದರ್ಶನದಲ್ಲಿ ಇದನ್ನು ನಿಖರವಾಗಿ ಮಾಡಿದರು. ಮೊದಲ ಇನ್ನಿಂಗ್ಸ್‌ನಲ್ಲಿ, ಅಯ್ಯರ್ 19 ಎಸೆತಗಳಲ್ಲಿ 20 ರನ್ ಗಳಿಸಿದರು, ನಂತರ 54 ಎಸೆತಗಳಲ್ಲಿ ತಮ್ಮ ಅರ್ಧಶತಕವನ್ನು ಗಳಿಸಿದರು ಮತ್ತು […]

Advertisement

Wordpress Social Share Plugin powered by Ultimatelysocial