ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಭಾರತೀಯ ಕಿರಿಯರ ತಂಡ.

ಒಂದೆಡೆ ಭಾರತೀಯ ಕ್ರಿಕೆಟ್ ನ ಹಿರಿಯರ ತಂಡ ದಕ್ಷಿಣ ಆಫ್ರಿಕಾದ ವಿರುದ್ಧ ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಸೋಲು ಕಂಡು ನಿರಾಸೆ ಮೂಡಿಸುತ್ತಿದ್ದರೆ, ಇನ್ನೊಂದೆಡೆ 19 ವರ್ಷದೊಳಗಿನವರ ಭಾರತೀಯ ತಂಡ ಭರ್ಜರಿ ಪ್ರದರ್ಶನ ತೋರುತ್ತಿದೆ.

19 ವರ್ಷದೊಳಗಿನವರ ವಿಶ್ವಕಪ್ ನಲ್ಲಿ ಈಗ ಭಾರತೀಯ ತಂಡ ಭರ್ಜರಿ ಗೆಲುವಿನೊಂದಿಗೆ ಕ್ವಾರ್ಟರ್ ಫೈನಲ್ ಪ್ರವೇಶ ಮಾಡಿದೆ.

ಅಲ್ಲದೇ, ಕಳೆದ ಬಾರಿಯ ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಇದೆ.

ಕಳೆದ ಬಾರಿಯ ಚಾಂಪಿಯನ್ ಆಗಿರುವ ಬಾಂಗ್ಲಾದೇಶದ ವಿರುದ್ಧ ಕ್ವಾರ್ಟರ್ ಫೈನಲ್ ನಲ್ಲಿ ಸೆಣಸಾಟ ನಡೆಸಲಿದೆ. ಬಿ ಗುಂಪಿನಲ್ಲಿದ್ದ ಭಾರತೀಯ ತಂಡವು ಭರ್ಜರಿ ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಭಾರತದೊಂದಿಗೆ ಕ್ವಾರ್ಟರ್ ಫೈನಲ್ ಗೆ ಆಸ್ಟ್ರೇಲಿಯಾ, ಅಪ್ಘಾನಿಸ್ತಾನ್, ಶ್ರೀಲಂಕಾ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಹಾಗೂ ಪಾಕಿಸ್ತಾನ್ ತಂಡಗಳು ಲಗ್ಗೆಯಿಟ್ಟಿವೆ.

ಬಾಂಗ್ಲಾದೇಶದ ವಿರುದ್ಧ ಭಾರತೀಯ ತಂಡವು ಜ. 29ರಂದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೆಣಸಾಟ ನಡೆಸಲಿದೆ. ಈ ಬಾರಿಯ ವಿಶ್ವಕಪ್ ನಲ್ಲಿ ನಾಲ್ಕು ಗುಂಪುಗಳಾಗಿ ಪ್ರತಿಯೊಂದು ಗುಂಪಿನಲ್ಲಿ ತಲಾ ನಾಲ್ಕು ತಂಡಗಳನ್ನು ಆಯ್ಕೆ ಮಾಡಲಾಗಿತ್ತು. ಈ ಗುಂಪಿನಲ್ಲಿ ಮೊದಲೆರಡು ಸ್ಥಾನ ಗಳಿಸಿರುವ ಎರಡು ತಂಡಗಳು ಕ್ವಾರ್ಟರ್ ಫೈನಲ್ ಪ್ರವೇಶ ಮಾಡಿವೆ.

ಭಾರತ ತಂಡವು ಗುಂಪು ಹಂತದಲ್ಲಿ ದಕ್ಷಿಣ ಆಫ್ರಿಕಾ, ಐರ್ಲೆಂಡ್ ಹಾಗೂ ಉಗಾಂಡ ತಂಡಗಳನ್ನು ಸೋಲಿಸಿ ಅಗ್ರ ಸ್ಥಾನದೊಂದಿಗೆ ಫೈನಲ್ ಪ್ರವೇಶ ಮಾಡಿದೆ. ಭಾರತೀಯ ಕಿರಿಯರ ತಂಡದಲ್ಲಿ ಐವರು ಆಟಗಾರರಿಗೆ ಸೋಂಕು ಕಾಣಿಸಿಕೊಂಡಿತ್ತು. ಇದರ ಮಧ್ಯೆಯೇ ಭಾರತೀಯ ಕಿರಿಯರ ತಂಡ ಭರ್ಜರಿ ಪ್ರದರ್ಶನ ತೋರಿಸುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೊಟ್ಟೆಯಲ್ಲಿದೆ ʼಆರೋಗ್ಯʼದ ಗುಟ್ಟು...!Helth Benifits|

Mon Jan 24 , 2022
  ಮೊಟ್ಟೆ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದೇನೋ ನಿಜ. ಅದರೆ ಅದನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸುವುದು ಅಷ್ಟೇ ಮುಖ್ಯ. ಇದರಿಂದ ನಮ್ಮ ದೇಹದಲ್ಲಿ ಪೌಷ್ಟಿಕಾಂಶವೂ ಹೆಚ್ಚುತ್ತದೆ. ಮೊಟ್ಟೆಯ ಹಳದಿ ಭಾಗದಲ್ಲಿ ಮಾತ್ರ ಕೊಲೆಸ್ಟ್ರಾಲ್ ಇರುತ್ತದೆ. ಬಿಳಿ ಭಾಗ ಕೊಲೆಸ್ಟ್ರಾಲ್ ಮುಕ್ತವಾಗಿದೆ. ಐಸಿಎಂಅರ್ ಮತ್ತು ಎನ್ ಐಎನ್ ಮಾರ್ಗಸೂಚಿಗಳ ಪ್ರಕಾರ ದಿನ್ಕಕೆ 300 ಗ್ರಾಂ ಕೊಲೆಸ್ಟ್ರಾಲ್ ಸೇವಿಸಬಹುದು. ಅಂದರೆ ದಿನಕ್ಕೊಂದು ಮೊಟ್ಟೆ ತಿನ್ನಬಹುದು. ಯುವಕರು ದೇಹಾರೋಗ್ಯ ಕಾಪಾಡಿಕೊಳ್ಳಲು ದಿನಕ್ಕೊಂದು ಮೊಟ್ಟೆ ಸೇವಿಸಬಹುದು. […]

Advertisement

Wordpress Social Share Plugin powered by Ultimatelysocial