ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ವಯಂ ಸರ್ವೇ ಮಾಡಿಕೊಳ್ಳಲು ಸರ್ಕಾರ !

ಬೆಂಗಳೂರು,ಏ.22-ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ವಯಂ ಸರ್ವೇ ಮಾಡಿಕೊಳ್ಳಲು ಸರ್ಕಾರ ಅವಕಾಶ ಮಾಡಿ ಮಾಡಿಕೊಟ್ಟಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಆಡಳಿತದಲ್ಲಿ ಸುಧಾರಣೆ ತಂದು ನಾಗರಿಕರಿಗೆ ತಮ್ಮ ಹಕ್ಕುಗಾರಿಕೆ ಮೇಲೆ ನಿಯಂತ್ರಣ ಸಾಧಿಸಲು ಅವಶ್ಯಕ ಬದಲಾವಣೆಯನ್ನು ಮಾಡಿ ಸಶಕ್ತಗೊಳಿಸುವುದು ಸರ್ಕಾರದ ಆಡಳಿತ ಸುಧಾರಣೆಯ ಉದ್ದೇಶ ಎಂದು ಹೇಳಿದ್ದಾರೆ.

ಸಾರ್ವಜನಿಕರಿಗೆ ಸ್ವಯಂ ಸೇವೆಯ ಮುಖಾಂತರ ಸರ್ಕಾರದ ಸೇವಾ ಸೌಲಭ್ಯ ಪಡೆಯಲು ವ್ಯವಸ್ಥೆ ಕಲ್ಪಿಸಲಾಗಿದೆ. ನಾಗರಿಕರು ಈ ಕೆಳಕಂಡ ಕಾರಣಗಳಿಗಾಗಿ ಭೂಮಾಪನ ಇಲಾಖೆಗೆ ಅವರ ಸ್ವಂತ ಜಮೀನಿನ ನಕ್ಷೆಗಾಗಿ ಅರ್ಜಿ ಸಲ್ಲಿಸುತ್ತಾರೆ. ಪ್ರಸ್ತುತ ಜನರಿಗೆ ತಮ್ಮ ಸ್ವಂತ ಖಾಸಗಿ ಜಮೀನುಗಳಲ್ಲಿ ಸ್ಕೆಚ್‍ಗಳಿಗಾಗಿ ಸಲ್ಲಿಸುವ ಅರ್ಜಿಗಳನ್ನು ಸರ್ಕಾರಿ ಭೂಮಾಪಕರು ಅಥವಾ ಪರವಾನಿಗೆ ಭೂಮಾಪಕರುಗಳಿಂದ ಸಿದ್ಧಪಡಿಸಲಾಗುತ್ತದೆ. ಸರ್ಕಾರಿ ಭೂಮಾಪಕರು ಮತ್ತು ಪರವಾನಿಗೆ ಭೂಮಾಪಕರ ಸಂಖ್ಯೆಯು ಸೀಮಿತವಾಗಿದೆ.

ಪ್ರತಿ ತಿಂಗಳು ಒಂದು ಲಕ್ಷಕ್ಕಿಂತ ಹೆಚ್ಚಿನ ಅರ್ಜಿಗಳು ನಾಗರಿಕರಿಂದ ಸ್ವೀಕೃತವಾಗುತ್ತವೆ. ಇದರೊಂದಿಗೆ ಹೆಚ್ಚುವರಿಯಾಗಿ ಆರು ಲಕ್ಷಕ್ಕಿಂತ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಅಳತೆಗಾಗಿ ವಿವಿಧ ಹಂತಗಳಲ್ಲಿ ಬಾಕಿ ಇರುತ್ತವೆ. ನಾಗರಿಕರು ತಮ್ಮ ಸ್ವಂತ ಜಮೀನಿನಲ್ಲಿ ಯಾವುದೇ ರೀತಿಯ ಕ್ರಯ ಮತ್ತು ವಿಭಾಗ ಮಾಡಿಸಿಕೊಳ್ಳಲು ಅಗತ್ಯವಿರುವ ಸ್ಕೆಚ್‍ಗಾಗಿ ಹಲವಾರು ತಿಂಗಳುಗಳು ಮತ್ತು ಕೆಲವೊಮ್ಮೆ ವರ್ಷದವರೆಗೆ ಕಾಯಬೇಕಾಗುತ್ತದೆ.

ಈ ಸಮಸ್ಯೆಗೆ ಪರಿಹಾರ ನೀಡಲು ನಾಗರಿಕರೇ ತಮ್ಮ ಜಮೀನಿಗೆ ಸ್ವಂತ ನಕ್ಷೆ ಮಾಡಿಕೊಳ್ಳಲು ಕಂದಾಯ ಇಲಾಖೆ ಯೋಜನೆಯೊಂದನ್ನು ರೂಪಿಸಿದೆ. 11ಇ ಸ್ಕೆಚ್, ತತ್ಕಾಲ ಪೋಡಿ ಇವುಗಳನ್ನು ಜನರು ಸ್ವಂತ ಜಮೀನಿಗೆ ತಾವೇ ಮಾಡಿಕೊಳ್ಳಲು ಅವಕಾಶ ನೀಡುತ್ತಿದ್ದೇವೆ. ಇದರಿಂದ ಸರ್ವೇ ವಿಳಂಬವಾಗಿ, ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆ ಬಗೆಹರಿಯುತ್ತದೆ ಎಂದು ಅಶೋಕ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಸೀದಿಗಳಲ್ಲಿ ಆಜಾನ್ ಕುರಿತಾಗಿ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನೀಡಿರುವ ಆದೇಶದಂತೆ ಪಾಲನೆ ಮಾಡಬೇಕು!

Fri Apr 22 , 2022
  ಕಲಬುರಗಿ,ಏ.22-ಮಸೀದಿಗಳಲ್ಲಿ ಆಜಾನ್ ಕುರಿತಾಗಿ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನೀಡಿರುವ ಆದೇಶದಂತೆ ಪ್ರತಿಯೊಬ್ಬರು ಕಾನೂನು ಪಾಲನೆ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೀದಿಗಳಲ್ಲಿ ಆಜಾನ್ ಮಾಡುವ ಮೇಲೆ ಮೈಕ್‍ಗಳಿಗೆ ಎಷ್ಟುಪ್ರಮಾಣದ ಡೆಸಿಬಲ್ ಅಳವಡಿಸಬೇಕೆಂದ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಸ್ಪಷ್ಟವಾದ ಆದೇಶ ನೀಡಿದೆ. ಇದನ್ನ ಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಜೊತೆ ಮಾತುಕತೆ ನಡೆಸಿ ಮಸೀದಿಗಳಲ್ಲಿ […]

Advertisement

Wordpress Social Share Plugin powered by Ultimatelysocial