ರಾಜ್ಯದಲ್ಲಿ 3.58 ಲಕ್ಷ ಅನರ್ಹ ಪಿಂಚಣಿದಾರರನ್ನು ಪತ್ತೆ!

ಬೆಂಗಳೂರು: ರಾಜ್ಯದಲ್ಲಿ 3.58 ಲಕ್ಷ ಅನರ್ಹ ಪಿಂಚಣಿದಾರರನ್ನು ಪತ್ತೆ ಮಾಡಲಾಗಿದ್ದು, ಸೌಲಭ್ಯ ಕಡಿತಗೊಳಿಸಲಾಗಿದೆ. ಇದರಿಂದ 430 ಕೋಟಿ ರೂಪಾಯಿ ಉಳಿತಾಯವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ರಾಜ್ಯ ಸರ್ಕಾರ 9 ಮಾಸಿಕ ಪಿಂಚಣಿಗಳನ್ನು ನೀಡುತ್ತಿದೆ.

ಅರ್ಹತೆಯಿಲ್ಲದ ಅನೇಕರು ಪಿಂಚಣಿ ಪಡೆಯುತ್ತಿದ್ದು, ಅಂಥವರನ್ನು ಗುರುತಿಸಲಾಗಿದೆ. ಅಕ್ರಮವಾಗಿ ಪಿಂಚಣಿ ಪಡೆಯುತ್ತಿದ್ದವರ ಗುರುತಿಸಿ ಸೌಲಭ್ಯ ರದ್ದು ಮಾಡಲಾಗಿದೆ. ಈ ರೀತಿ 3.58 ಲಕ್ಷ ಅನರ್ಹ ಪಿಂಚಣಿದಾರರ ಪತ್ತೆ ಮಾಡಲಾಗಿದ್ದು 430 ಕೋಟಿ ರೂಪಾಯಿ ಉಳಿತಾಯವಾಗಿದೆ ಎಂದರು.

ಕೆಲವು ಶ್ರೀಮಂತರು, ಉದ್ಯೋಗಿಗಳು ಅಕ್ರಮವಾಗಿ ಪಿಂಚಣಿ ಪಡೆಯುತ್ತಿದ್ದರು. ಮೃತಪಟ್ಟವರ ಹೆಸರಿನಲ್ಲಿಯೂ ಪಿಂಚಣಿ ಪಾವತಿಯಾಗುತ್ತಿರುವುದು ಪತ್ತೆಯಾಗಿದೆ ಎಂದು ಸಚಿವರು ಹೇಳಿದ್ದಾರೆ. ಅರ್ಹ ಫಲಾನುಭವಿಗಳಿಗೆ ನೇರವಾಗಿ ಪಿಂಚಣಿ ಮಂಜೂರು ಮಾಡಲು ಹಲೋ ಕಂದಾಯ ಸಚಿವರೇ ಸಹಾಯವಾಣಿ ಆರಂಭಿಸಲಿದ್ದು, ಅರ್ಜಿ ಸಲ್ಲಿಕೆಯಾದ 72 ಗಂಟೆಯೊಳಗೆ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶ ನೀಡಲಾಗುವುದು ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ದಾವಣಗೆರೆ: ಯುವಕನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಘಟನೆ

Sun May 1 , 2022
ಮೂರು ತಿಂಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹೊಟ್ಟೆ ನೋವು ಎಂದು ಹೇಳಿದ ಬಾಲಕಿಯನ್ನು ಪೋಷಕರು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರು ಆಕೆಯನ್ನು ಪರೀಕ್ಷಿಸಿ ಗರ್ಬಿಣಿಯಾಗಿರುವುದನ್ನು ತಿಳಿಸಿದ್ದಾರೆ. ಈ ವೇಳೆ ಬಾಲಕಿ ನಡೆದ ಘಟನೆಯ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಕೆಂಗಲಹಳ್ಳಿ ಗ್ರಾಮದ ಯುವಕನನ್ನು ಅತ್ಯಾಚಾರ ಆರೋಪದ ಮೇಲೆ ಬಂಧಿಸಲಾಗಿದೆ. ಮೂರು ತಿಂಗಳ ಹಿಂದೆ 6ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ […]

Advertisement

Wordpress Social Share Plugin powered by Ultimatelysocial