ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಆರ್.ಲತಾ ಅಧಿಕಾರ ಸ್ವೀಕಾರ!

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆಗಿದ್ದ ಆರ್.ಲತಾ ಅವರು ವರ್ಗಾವಣೆಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.

ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್ ಅವರು ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್‌ಕುಮಾರ್ , ಬಾಲಕೃಷ್ಣ KAS ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಲತಾ.ಆರ್ ಅವರು ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆಗಿಯೂ ಕಾರ್ಯ ನಿರ್ವಹಿಸಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಎಸ್ಸಿ-ಎಸ್ಟಿಗೆ ಮೀಸಲಾತಿ ಹೆಚ್ಚಿಸುತ್ತೇವೆ, ಶೀಘ್ರ ಸಿಹಿಸುದ್ದಿ ಕೊಡುತ್ತೇವೆ: ಸಚಿವ ಶ್ರೀರಾಮುಲು ಭರವಸೆ!

Tue Jul 12 , 2022
ಚಾಮರಾಜನಗರ: ಎಸ್ಸಿ ಹಾಗೂ ಎಸ್ಟಿ ಸಮುದಾಯಗಳ ಮೀಸಲಾತಿ ಹೆಚ್ಚಿಸುತ್ತೇವೆ, ಸಿಹಿ ಸುದ್ದಿ ಕೊಟ್ಟೇ ಕೊಡುತ್ತೇವೆ ಎಂದು ಸಚಿವ ಶ್ರೀರಾಮುಲು ಹೇಳಿದರು. ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ನಮ್ಮ ಸರ್ಕಾರ ಬದ್ಧತೆ ಪ್ರದರ್ಶಿಸುತ್ತದೆ, ಈಗ ಹೋರಾಟ ಮಾಡುವವರು ಕುಣಿದಾಡುವಂತೆ ಬೊಮ್ಮಾಯಿ ಸರ್ಕಾರ ಮಾಡಲಿದೆ, ಪರಿಶಿಷ್ಟ ಜಾತಿಗೆ ಶೇ. 17 ರಷ್ಟು ಪರಿಶಿಷ್ಟ ವರ್ಗಕ್ಕೆ ಶೆ.7.5 ರಷ್ಟು ಮೀಸಲಾತಿ ಕೊಡುವ ಕೆಲಸ ಆದಷ್ಟು ಶೀಘ್ರ ಆಗಲಿದೆ ಎಂದರು‌‌. ಇಷ್ಟು ವರ್ಷಗಳ ಕಾಲ ಕಾಂಗ್ರೆಸ್ […]

Advertisement

Wordpress Social Share Plugin powered by Ultimatelysocial