ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ…!

 

ಮುಂಬೈ: ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್‌ ಕುಂದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದೆ.

ಅಶ್ಲೀಲ ಚಿತ್ರಗಳನ್ನು ನಿರ್ಮಿಸಿರುವ ಮತ್ತು ಅದನ್ನು ಕೆಲವು ಆಯಪ್‌ಗಳಲ್ಲಿ ಪ್ರಸಾರ ಮಾಡಿರುವ ಆರೋಪದಲ್ಲಿ ರಾಜ್‌ ಕುಂದ್ರಾ ಅವರನ್ನು ಕಳೆದ ವರ್ಷ ಫೆಬ್ರುವರಿಯಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದರು.

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ರಾಜ್‌ ಕುಂದ್ರಾ ಪ್ರಮುಖ ಆರೋಪಿಯಾಗಿದ್ದಾರೆ. ಸದ್ಯ ರಾಜ್‌ ಕುಂದ್ರಾ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಜ್ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ವಿಯಾನ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಸಂಸ್ಥಾಪಕರಾದ ರಾಜ್ ಕುಂದ್ರಾ ಮತ್ತು ಅವರ ಬ್ರಿಟನ್‌ನಲ್ಲಿರುವ ಸೋದರ ಸಂಬಂಧಿ, ಲಂಡನ್‌ನ ಕೆನ್ರಿನ್ ಗ್ರೂಪ್‌ನ ಅಧ್ಯಕ್ಷರಾದ ಪ್ರದೀಪ್ ಬಕ್ಷಿ ಈ ದಂಧೆಯ ಸೂತ್ರಧಾರರು ಎನ್ನಲಾಗಿದೆ.

ಕಳೆದ ಕೆಲವು ತಿಂಗಳುಗಳಿಂದ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈನ ಕ್ರೈಂ ಬ್ರ್ಯಾಂಚ್-ಸಿಐಡಿ, ಈ ಪ್ರಕರಣದಲ್ಲಿ 1,500 ಪುಟಗಳ ಮೊದಲ ಪೂರಕ ಚಾರ್ಜ್ ಶೀಟ್ ಅನ್ನು ಸಲ್ಲಿಸಿದೆ.

ರಾಜ್ ಕುಂದ್ರಾ ಮತ್ತು ಆತನ ಸಹಚರ ರಯಾನ್ ಥೋರ್ಪ್ ಅವರನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿ ಮಾಡಲಾಗಿದೆ.

ಭಾರತದಲ್ಲಿ ನಿಷೇಧಿಸಲಾಗಿರುವ ಅಶ್ಲೀಲ ಚಿತ್ರಗಳನ್ನು ತಯಾರಿಸುತ್ತಿದ್ದ ವಿಯಾನ್ ಮತ್ತು ಕೆನ್ರಿನ್ ಕಂಪನಿಗಳು ಅವುಗಳನ್ನು ಹಾಟ್‌ಶಾಟ್ಸ್ ಆಯಪ್‌ಗೆ ಅಪ್ಲೋಡ್ ಮಾಡುತ್ತಿದ್ದವು. ಚಂದಾದಾರಿಕೆ ನೀಡಿ, ಸಾಮಾಜಿಕ ಮಾಧ್ಯಮದಲ್ಲಿ ಜಾಹೀರಾತುಗಳ ಮೂಲಕ ಪ್ರಚಾರ ಮಾಡುತ್ತಿದ್ದವು ಎಂದು ಉಲ್ಲೇಖಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟಿ ಗೆಹ್ನಾ ವಶಿಷ್ಠ್ (32), ಯಾಸ್ಮಿನ್ ಖಾನ್ (40), ಮೋನು ಜೋಶಿ (28), ಪ್ರತಿಭಾ ನಲವಡೆ (33), ಅತಿಫ್ ಅಹಮದ್ (24), ದೀಪಂಕರ್ ಖಾಸ್ನವೀಸ್ (38), ಭಾನುಸೂರ್ಯ ಠಾಕೂರ್ (26) ತನ್ವೀರ್ ಹಶ್ಮಿ (40) ಮತ್ತು ಉಮೇಶ್ ಕಾಮತ್ (39) ಅವರನ್ನು ಬಂಧಿಸಲಾಗಿತ್ತು.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಮಹಿಳೆಯರ ಅಸಭ್ಯ ಪ್ರಾತಿನಿಧ್ಯ (ನಿಷೇಧ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಎಐಎಂಐಎಂ ನಾಯಕನ ಬಂಧನ...!

Thu May 19 , 2022
ಅಹಮದಾಬಾದ್: ಉತ್ತರ ಪ್ರದೇಶದ ವಾರಣಾಸಿಯಯಲ್ಲಿ ಶಿವಲಿಂಗ ಪತ್ತೆಯಾಗಿರುವ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗುಜರಾತ್‌ನ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ವಕ್ತಾರ ಡ್ಯಾನಿಶ್ ಖುರೇಷಿ ಅವರನ್ನು ಅಹಮದಾಬಾದ್ ಸೈಬರ್ ಕ್ರೈಮ್ ಬ್ರಾಂಚ್ ಬಂಧಿಸಿದೆ. ಶಿವಲಿಂಗ ಕುರಿತಾಗಿ ಮೇಲೆ ಆಕ್ಷೇಪಾರ್ಹ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಖುರೇಷಿ ವಿರುದ್ಧ ವಿಶ್ವ ಹಿಂದೂ ಪರಿಷತ್ ದೂರು ದಾಖಲಿಸಿದೆ. ವಾರಾಣಸಿ ವಿಶ್ವನಾಥ ದೇವಾಲಯದ ಬಳಿಯಿರುವ ಮಸೀದಿಯಲ್ಲಿ ಮೂರು […]

Advertisement

Wordpress Social Share Plugin powered by Ultimatelysocial