ಎಲ್ಲಾ ಭಯಗಳಿಂದ ಮುಕ್ತಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

ನವದೆಹಲಿ: ಜನರು ಮನೆಗಳಿಂದ ಹೊರಬಂದು ಮತ ಚಲಾಯಿಸುವ ಮೂಲಕ ದೇಶವನ್ನು ಎಲ್ಲಾ ಭಯಗಳಿಂದ ಮುಕ್ತಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ.ಇಂದು (ಫೆ.10) ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ.ಈ ಹಿನ್ನೆಲೆಯಲ್ಲಿ ಮತದಾರರನ್ನುದ್ದೇಶಿಸಿ ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್, ‘ದೇಶವನ್ನು ಎಲ್ಲ ಆತಂಕಗಳಿಂದ ಮುಕ್ತಗೊಳಿಸಿ. ಹೊರಗೆ ಬಂದು ಮತ ಚಲಾಯಿಸಿ’ ಎಂದು ಮನವಿ ಮಾಡಿದ್ದಾರೆ.ರಾಜ್ಯದ ಪಶ್ಚಿಮ ಭಾಗದ 11 ಜಿಲ್ಲೆಗಳಾದ ಶಾಮ್ಲಿ, ಹಾಪುರ್, ಗೌತಮ ಬುದ್ಧ ನಗರ, ಮುಜಾಫರ್‌ನಗರ, ಮೀರತ್, ಬಾಗ್‌ಪತ್, ಗಾಜಿಯಾಬಾದ್, ಬುಲಂದ್‌ಶಹರ್, ಅಲಿಗಢ, ಮಥುರಾ ಮತ್ತು ಆಗ್ರಾದ ಒಟ್ಟು 58 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ .

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಮದ ಮದದಲ್ಲಿ ದಾರಿ ತಪ್ಪಿದ ಪತ್ನಿ, ಪರ ಸಂಗಕ್ಕೆ ಸುಪಾರಿ ಕೊಟ್ಟು ಪತಿ ಕೊಲ್ಲಿಸಿದ್ಲು

Thu Feb 10 , 2022
ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಾವಲು ಹೊಸೂರು ಗೇಟ್ ಬಳಿ ಕಳೆದ ವಾರ ನಡೆದಿದ್ದ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆಯಾದ ವ್ಯಕ್ತಿಯ ಪತ್ನಿ ಮತ್ತು ಪ್ರಿಯಕರನನ್ನು ಬಂಧಿಸಲಾಗಿದೆ. ಜನವರಿ 31 ರಂದು ಸಂಜೆ ಶಾಲೆಯಿಂದ ಮಗನನ್ನು ಕರೆದುಕೊಂಡು ಬರಲು ಬೈಕ್ ನಲ್ಲಿ ತೆರಳುತ್ತಿದ್ದ ಆನಂದಕುಮಾರ್(42) ಅವರನ್ನು ಅಪರಿಚಿತ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ನುಗ್ಗೆಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಿರಿಯ ಪೊಲೀಸ್ ಅಧಿಕಾರಿಗಳ […]

Advertisement

Wordpress Social Share Plugin powered by Ultimatelysocial