Rahul Gandhi: ಹಮಾಲಿ ಕಾರ್ಮಿಕನಾಗಿ ಸೂಟ್ʼಕೇಸ್ ಹೊತ್ತು ಸಾಗಿದ ರಾಹುಲ್‌ ಗಾಂಧಿ..! ವಿಡಿಯೋ

ವದೆಹಲಿ: ಇಲ್ಲಿನ ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ (Anand Vidhar Railway Station) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು (Rahul Gandhi) ಇಂದು ಕೂಲಿಗಳ ಸಮಸ್ಯೆಗಳನ್ನು ಆಲಿಸಿದರು. ರೈಲ್ವೇ ನಿಲ್ದಾಣದಲ್ಲಿ ಕೂಲಿಗಳಂತೆ ಕೆಂಪು ಅಂಗಿ ಧರಿಸಿ, ಸೂಟ್ ಕೇಸ್ ತಲೆ ಮೇಲೆ ಹೊತ್ತು ನಡೆಯುತ್ತಿರುವ ವೀಡಿಯೋ ಹಾಗೂ ಫೊಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ವಯನಾಡು ಸಂಸದರೂ ಆಗಿರುವ ರಾಹುಲ್ ಗಾಂಧಿಯವರು ಟ್ರೋಲಿ ಬ್ಯಾಗ್ ಅನ್ನು ತಲೆ ಮೇಲೆ ಹೊತ್ತುಕೊಂಡು ಹೋಗುತ್ತಿರುವುದನ್ನು ಗಮನಿಸಬಹುದು. ಈ ವೇಳೆ ಅಲ್ಲಿನ ಕಾರ್ಮಿಕರು ‘ರಾಹುಲ್ ಗಾಂಧಿ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ. ಬಳಿಕ ರೈಲ್ವೇ ನಿಲ್ದಾಣದಲ್ಲಿ ರಾಹುಲ್ ಗಾಂಧಿಯವರು ಕಾರ್ಮಿಕರ ಸಮಸ್ಯೆಗಳನ್ನು ಆಲಿಸುವುದನ್ನು ಕೂಡ ನಾವು ವೀಡಿಯೋದಲ್ಲಿ ಗಮನಿಸಬಹುದಾಗಿದೆ.

ಈ ಸಂಬಂಧ ಕಾಂಗ್ರೆಸ್ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. ರಾಹುಲ್ ಗಾಂಧಿಯವರು ಇಂದು ಆನಂದ್ ವಿಹಾರ್ ರೈಲೇ ನಿಲ್ದಾಣದಲ್ಲಿ ಇಂದು ಕಾರ್ಮಿಕ ಸ್ನೇಹಿತರನ್ನು ಭೇಟಿಯಾಗಿದ್ದಾರೆ. ಅಲ್ಲಿನ ಸ್ಥಿತಿಗತಿ ಕುರಿತು ಕಾರ್ಮಿಕ ಸ್ನೇಹಿತರೊಬ್ಬರು ಈ ಹಿಂದೆ ಬೇಸರ ವ್ಯಕ್ತಪಡಿಸಿದ್ದರು. ಹೀಗಾಗಿ ಅವರನ್ನು ರಾಹುಲ್ ಭೇಟಿಯಾಗುವ ಇಂಗಿತ ವ್ಯಕ್ತಪಡಿಸಿದ್ದರು. ಈ ವೀಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

Please follow and like us:

tmadmin

Leave a Reply

Your email address will not be published. Required fields are marked *

Next Post

'ಹೊಸ ಸಂಸತ್ತಿನಲ್ಲಿ ರಾಷ್ಟ್ರಪತಿಗಳನ್ನು ನೋಡಲು ಬಯಸಿದ್ದೆ, ಏಕೆ ಆಹ್ವಾನಿಸಲಿಲ್ಲ': ರಾಹುಲ್ ಗಾಂಧಿ

Thu Sep 21 , 2023
ಮಹಿಳೆ ಮತ್ತು ಉನ್ನತ ಹುದ್ದೆ ಅಲಂಕರಿಸಿದ ಬುಡಕಟ್ಟು ಸಮುದಾಯದ ಮೊದಲ ವ್ಯಕ್ತಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನೂತನ ಸಂಸತ್ ಭವನದ ಉದ್ಘಾಟನೆಗೆ ಏಕೆ ಆಹ್ವಾನಿಸಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಪ್ರಶ್ನಿಸಿದ್ದಾರೆ. ನವದೆಹಲಿ: ಮಹಿಳೆ ಮತ್ತು ಉನ್ನತ ಹುದ್ದೆ ಅಲಂಕರಿಸಿದ ಬುಡಕಟ್ಟು ಸಮುದಾಯದ ಮೊದಲ ವ್ಯಕ್ತಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನೂತನ ಸಂಸತ್ ಭವನದ ಉದ್ಘಾಟನೆಗೆ ಏಕೆ ಆಹ್ವಾನಿಸಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ […]

Advertisement

Wordpress Social Share Plugin powered by Ultimatelysocial