ಇಡಿಯಿಂದ ರಾಹುಲ್ ಗಾಂಧಿಗೆ ಮತ್ತೊಂದು ಸಮನ್ಸ್! ಖುದ್ದಾಗಿ ಹಾಜರಾಗುವಂತೆ ಸೂಚನೆ

ನವದೆಹಲಿ, ಜೂ. 3: ಕಾಂಗ್ರೆಸ್ ಪಕ್ಷವನ್ನು ಮುಜುಗರಕ್ಕೆ ಈಡು ಮಾಡುತ್ತಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಾಹುಲ್‌ ಗಾಂಧಿಗೆ  ಮತ್ತೊಂದು ಸಮನ್ಸ್   ಜಾರಿ ಮಾಡಿದೆ.
ಮೊನ್ನೆ ಅಂದರೆ ಜೂನ್ 1ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜೂನ್ 8ರಂದು ಅವರ ಪುತ್ರ ಸಂಸದ ರಾಹುಲ್ ಗಾಂಧಿ   ಅವರಿಗೆ ಜೂನ್ 8ಕ್ಕೂ ಮೊದಲೇ ಫೆಡರಲ್ ಏಜೆನ್ಸಿಯ ಮುಂದೆ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿತ್ತು.‌ ಆದರೀಗ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಸಮನ್ಸ್ ನೀಡಿ ಜೂನ್ 13ರಂದು ದೆಹಲಿಯ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.
ಕುತೂಹಲ ಮೂಡಿಸಿದ ಇಡಿ ನಡೆ
ಕಾಂಗ್ರೆಸ್ ಪಕ್ಷ, ವಿಶೇಷವಾಗಿ ಅದರ ಅಧ್ಯಕ್ಷೆಯಾದ ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್ ಗಾಂಧಿ ಅವರು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಯಂಗ್ ಇಂಡಿಯನ್ ಸಂಸ್ಥೆಯಲ್ಲಿ ಪಾಲುದಾರರಾಗಿದ್ದಾರೆ. ಯಂಗ್ ಇಂಡಿಯನ್ ಸಂಸ್ಥೆಯು ಹಣಕಾಸು ಅಕ್ರಮಗಳನ್ನು ನಡೆಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದಲ್ಲಿ ದೂರು ದಾಖಲಾಗಿದೆ‌.
ರಾಹುಲ್ ಗಾಂಧಿಗೆ ಮತ್ತೊಂದು ಸಮನ್ಸ್
ಇದೇ ಹಿನ್ನೆಲೆಯಲ್ಲಿ ಜೂನ್ 1ರಂದು ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಆದರೀಗ ರಾಹುಲ್ ಗಾಂಧಿ ಅವರಿಗೆ ಜುಲೈ 13ರಂದು ವಿಚಾರಣೆಗೆ ಬರುವಂತೆ ಹೊಸ ಸಮನ್ಸ್ ನೀಡಿರುವುದು ಕುತೂಹಲ ಮೂಡಿಸಿದೆ.
ಹೇಳಿಕೆ ದಾಖಲಿಸಿಕೊಳ್ಳಲು ಸಮನ್ಸ್
ಯಂಗ್ ಇಂಡಿಯನ್‌ನಲ್ಲಿ ನಡೆದಿರುವ ಹಣಕಾಸು ಅವ್ಯವಹಾರಗಳ ಕುರಿತು ತನಿಖೆ ನಡೆಸಲು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಾಗಿದ್ದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಜಾರಿ ನಿರ್ದೇಶನಾಲಯ ಇಬ್ಬರಿಗೂ ಸಮನ್ಸ್ ನೀಡಿದೆ.
ಖರ್ಗೆಗೂ ನೋಟಿಸ್ ನೀಡಿದ್ದ ಇಡಿ
ಇತ್ತೀಚೆಗೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ನಾಯಕರೂ ಆದ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಎಐಸಿಸಿ ಖಜಾಂಚಿ ಪವನ್ ಬನ್ಸಲ್ ಅವರಿಂದಲೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದರು.
ಸುಬ್ರಮಣಿಯನ್ ಸ್ವಾಮಿ ದಾಖಲಿದ್ದ ಪ್ರಕರಣ
2013ರಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ಖಾಸಗಿ ಕ್ರಿಮಿನಲ್ ದೂರಿನ ಆಧಾರದ ಮೇಲೆ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ವಿರುದ್ಧದ ಆದಾಯ ತೆರಿಗೆ ಇಲಾಖೆ ತನಿಖೆಯನ್ನು ಆಧರಿಸಿ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು.
ಏನಿದು ಆರೋಪ?
ಅಸೋಸಿಯೇಟ್ ಜರ್ನಲ್ಸ್ ಲಿಮಿಟೆಡ್ ಕಾಂಗ್ರೆಸ್‌ಗೆ ನೀಡಬೇಕಿದ್ದ 90.25 ಕೋಟಿ ರೂ.ಗಳನ್ನು ವಸೂಲಿ ಮಾಡುವ ಹಕ್ಕನ್ನು ಪಡೆಯಲು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಕೇವಲ 50 ಲಕ್ಷ ರೂಪಾಯಿಗಳನ್ನು ಪಾವತಿಸಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರು ವಂಚನೆ ಮತ್ತು ಹಣವನ್ನು ದುರುಪಯೋಗಪಡಿಸಿಕೊಳ್ಳಲು ಸಂಚು ರೂಪಿಸಿದ್ದಾರೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ಆರೋಪಿಸಿದ್ದರು.
ವಿಚಾರಣೆಗೆ ಹಾಜರಾಗಲಿರುವ ಸೋನಿಯಾ-ರಾಹುಲ್ ಗಾಂಧಿ
ಸೋನಿಯಾ ಗಾಂಧಿ ಅವರನ್ನು ಜೂನ್ 8 ರಂದು ಫೆಡರಲ್ ಏಜೆನ್ಸಿಯ ಮುಂದೆ ಹಾಜರಾಗುವಂತೆ ಕೇಳಲಾಗಿದ್ದು, ಸೋನಿಯಾ ಗಾಂಧಿ ಅವರಿಗೆ ಕೋವಿಡ್ ಪಾಸಿಟಿವ್ ಆಗಿರುವುದರಿಂದ ಗುಣಮುಖರಾದ ಬಳಿಕ ವಿಚಾರಣೆಗೆ ಹಾಜರಾಗಲಿದ್ದಾರೆ. ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸದಲ್ಲಿದ್ದು ದೇಶಕ್ಕೆ ವಾಪಸ್ ಆದ ಬಳಿಕ ಅವರು ಕೂಡ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ತಿಳಿಸಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

777 ಚಾರ್ಲಿ: 21 ನಗರಗಳಲ್ಲಿ ಪ್ರೀಮಿಯರ್ ಶೋ

Fri Jun 3 , 2022
  “ಕೆಜಿಎಫ್-2′ ಸಿನಿಮಾದ ಬಳಿಕ ತೆರೆಗೆ ಬರುತ್ತಿರುವ ಕನ್ನಡದ ಮತ್ತೂಂದು ಬಹುನಿರೀಕ್ಷಿತ “777 ಚಾರ್ಲಿ’ ಸಿನಿಮಾದ ಕಡೆಗೆ ಸಿನಿಮಂದಿಯ ಚಿತ್ತ ನೆಟ್ಟಿದೆ. ರಕ್ಷಿತ್‌ ಶೆಟ್ಟಿ ನಿರ್ಮಾಣ ಹಾಗೂ ನಟನೆಯ ಪ್ಯಾನ್‌ ಇಂಡಿಯಾ ಸಿನಿಮಾ “777 ಚಾರ್ಲಿ’ ಸಿನಿಮಾ ಇದೇ ಜೂನ್‌ 10ಕ್ಕೆ ದೇಶಾದ್ಯಂತ ತೆರೆಗೆ ಬರಲಿದ್ದು, ಸದ್ಯ “777 ಚಾರ್ಲಿ’ ಯ ರಿಲೀಸ್‌ ಗೆ ಕೌಂಟ್‌ಡೌನ್‌ ಶುರುವಾಗಿದೆ. ಇನ್ನು ಕನ್ನಡದ ಜೊತೆಗೆ, ತೆಲುಗು, ತಮಿಳು, ಹಿಂದಿ ಮತ್ತು ಮಲೆಯಾಳಂ ಸೇರಿದಂತೆ […]

Advertisement

Wordpress Social Share Plugin powered by Ultimatelysocial