ನಡುರಸ್ತೆಯಲ್ಲೇ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ

 

ನವದೆಹಲಿ, ಜುಲೈ 26: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನವದೆಹಲಿ ಹೃದಯ ಭಾಗದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ಸಂಸದರು ವಿಜಯ್ ಚೌಕ್‌ನಲ್ಲಿ ಜಮಾಯಿಸಿ ರಾಷ್ಟ್ರಪತಿ ಭವನದತ್ತ ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾದರು. ಈ ವೇಳೆ ಮಧ್ಯೆ ಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು.

ಕೇಂದ್ರ ಸರ್ಕಾರವು ಪ್ರತಿಪಕ್ಷಗಳ ವಿರುದ್ಧ ಸರ್ಕಾರದ ಏಜೆನ್ಸಿಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರು. ನಡುರಸ್ತೆಯಲ್ಲೇ ಪ್ರತಿಭಟನೆ ಕುಳಿತ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ಹಂತದಲ್ಲಿ ಬಿಗ್ ಹೈಡ್ರಾಮಾ ನಡೆಯಿತು.

ಪೊಲೀಸ್ ವಾಹನದಲ್ಲಿ ಪ್ರತಿಭಟನಾಕಾರರ ಸ್ಥಳಾಂತರನವದೆಹಲಿಯ ವಿಜಯ್ ಚೌಕ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗಲಾಯಿತು. ಆದರೆ ಅವರನ್ನು ಎಲ್ಲಿಗೆ ಕರೆದೊಯ್ಯಲಾಯಿತು ಎಂಬುದರ ಬಗ್ಗೆ ಮಾಹಿತಿಯಿಲ್ಲ. ಇದರ ಜೊತೆಗೆ ಪ್ರತಿಭಟನೆ ನಡೆಸುತ್ತಿದ್ದ ಇತರೆ ಕಾಂಗ್ರೆಸ್ ಸಂಸದರನ್ನೂ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪ್ರತ್ಯೇಕ ಪೊಲೀಸ್ ವಾಹನದಲ್ಲಿ ಕರೆದೊಯ್ಯಲಾಗಿದೆ.

ಪೊಲೀಸ್ ರಾಜ್ಯ ಎಂದು ಆರೋಪಿಸಿದ ರಾಹುಲ್ ಗಾಂಧಿ

ಭಾರತವು ಪೊಲೀಸ್ ರಾಜ್ಯವಾಗುತ್ತಿದ್ದು, ಮೋದಿ ಒಬ್ಬ ರಾಜ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡುತ್ತಿಲ್ಲ. “ನಾನು ಎಲ್ಲಿಗೂ ಹೋಗುತ್ತಿಲ್ಲ. ನಾವು ರಾಷ್ಟ್ರಪತಿ ಭವನದ ಕಡೆಗೆ ಹೋಗಬೇಕೆಂದು ಬಯಸಿದ್ದೆವು. ಆದರೆ ಪೊಲೀಸರು ನಮಗೆ ಅವಕಾಶ ನೀಡುತ್ತಿಲ್ಲ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಪ್ರತಿಭಟನೆಗೆ ಕಾರಣ

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಎರಡನೇ ಬಾರಿಗೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ಹಾಜರಾಗಿದ್ದರು. ಇನ್ನೊಂದು ಕಡೆ ಪಕ್ಷದ ಮುಖ್ಯಸ್ಥೆಯನ್ನು ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಸಂಸದರು, ಶಾಸಕರು ಮತ್ತು ನಾಯಕರು ಪ್ರತಿಭಟನೆ ನಡೆಸುವುದಕ್ಕೆ ಶುರು ಮಾಡಿದ್ದರು.

ಸೋನಿಯಾ ಗಾಂಧಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಕೇಸ್?

ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಆದಾಯ ತೆರಿಗೆ ಇಲಾಖೆಯ ತನಿಖೆಯನ್ನು ವಿಚಾರಣಾ ನ್ಯಾಯಾಲಯವು ಗಮನಕ್ಕೆ ತಂದ ನಂತರ ಇತ್ತೀಚೆಗೆ ಏಜೆನ್ಸಿ ಮನಿ ಲಾಂಡರಿಂಗ್ ಪ್ರಕರಣವನ್ನು ದಾಖಲಿಸಿದೆ. ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ — ಪತ್ರಿಕೆಯನ್ನು ನಡೆಸುತ್ತಿದ್ದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ನ ಸ್ವಾಧೀನದಲ್ಲಿ ವಂಚನೆ, ಪಿತೂರಿ ಮತ್ತು ಕ್ರಿಮಿನಲ್ ನಂಬಿಕೆಯ ಉಲ್ಲಂಘನೆಯ ಆರೋಪಗಳನ್ನು ಈ ಪ್ರಕರಣವು ಒಳಗೊಂಡಿದೆ. ಜಾರಿ ನಿರ್ದೇಶನಾಲಯದ ವಿಚಾರಣೆ ಆಡಳಿತಾರೂಢ ಬಿಜೆಪಿಯ ಸೇಡಿನ ರಾಜಕಾರಣದ ಭಾಗ ಎಂದು ಕಾಂಗ್ರೆಸ್ ಕೆಂಡ ಕಾರಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅವ್ಯವಹಾರದ ಆರೋಪ:

ದೇಶದಲ್ಲಿ ತದನಂತರ ಪ್ರಕಟಗೊಂಡ ಇತರ ಪತ್ರಿಕೆಗಳಿಗೆ ಪೈಪೋಟಿ ನೀಡುವುದುಕ್ಕೆ ಸಾಧ್ಯವಾಗದೇ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗದೇ ತೀವ್ರ ವೈಫಲ್ಯವನ್ನು ಅನುಭವಿಸಿತು. ಇದರ ಪರಿಣಾಮವಾಗಿ ಜಾಹೀರಾತು ಆದಾಯದ ಕೊರತೆ ಸೃಷ್ಟಿಯಾಯಿತು. ಕಳೆದ 2008ರಲ್ಲಿ ಮೂರೂ ಆವೃತ್ತಿಯ ಪ್ರಕಟಣೆ ಸ್ಥಗಿತಗೊಳಿಸುತ್ತಿರುವುದಾಗಿ ಪತ್ರಿಕೆ ಘೋಷಿಸಿತು. 29.09.2010ರ ವೇಳೆಗೆ ಷೇರು ಹೋಲ್ಡರುಗಳ ಸಂಖ್ಯೆ 1057ಕ್ಕೆ ಇಳಿದಿತ್ತು. ಆ ಸಮಯದಲ್ಲಿ ಸಂಸ್ಥೆಯು 90.25 ಕೋಟಿ ರೂಪಾಯಿ ಸಾಲವನ್ನು ಹೊಂದಿತ್ತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಲಕ್ಷ್ಮೇಶ್ವರ ತಾಲ್ಲೂಕಿನ ಹಲವೆಡೆ ಜಲಜೀವನ ಮಿಷನ್(ಜೆಜೆಎಂ) ಯೋಜನೆ

Tue Jul 26 , 2022
(ಜೆಜೆಎಂ) ಯೋಜನೆಯಲ್ಲಿ ಅಕ್ರಮ ಹಾಗೂ ಕಾಮಗಾರಿ ಕಳಪೆ ನಡೆಯುತ್ತಿದೆ ಎಂದು ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ತಾಲೂಕ ಅಧ್ಯಕ್ಷ ಸೋಮಣ್ಣ ಬೆಟಗೇರಿ ಆರೋಪಿಸಿದರು. ಲಕ್ಷ್ಮೇಶ್ವರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು 2024ರ ಒಳಗೆ ಪ್ರತಿಯೊಂದು ಮನೆ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನ ಹಾಗು ಗುತ್ತಿಗೆದಾರ ಹಣಬಾಕತನದಿಂದಾಗಿ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಬಹುನಿರೀಕ್ಷಿತ ಜಲ ಜೀವನ ಮಿಷನ್ […]

Advertisement

Wordpress Social Share Plugin powered by Ultimatelysocial