ಸಿಲಿಂಡರ್‌ ದರ ಏರಿಕೆ, ಕೇಂದ್ರಕ್ಕೆ ರಾಹುಲ್ ಟ್ವೀಟ್ ಬಾಣ!

ನವದೆಹಲಿ, ಮೇ 08; ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ದರ ಶನಿವಾರ ಏರಿಕೆಯಾಗಿದೆ. ಪ್ರತಿಪಕ್ಷ ಕಾಂಗ್ರೆಸ್ ಸಿಲಿಂಡರ್‌ ದರದ ಏರಿಕೆಯ ವಿಚಾರದಲ್ಲಿ ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡುತ್ತಿದೆ.

ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಸಿಲಿಂಡರ್ ದರ ಏರಿಕೆಯ ವಿಚಾರದಲ್ಲಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

2014ರಲ್ಲಿ ಕಾಂಗ್ರೆಸ್ ಇದ್ದಾಗ ಸಿಲಿಂಡರ್ ದರ 410 ರೂ. ಇತ್ತು. 827 ಸಬ್ಸಿಡಿ ಇತ್ತು. 2022ರಲ್ಲಿ ಬಿಜೆಪಿ ಇರುವಾಗ 999 ರೂ. ಇದೆ. ಸಬ್ಸಿಡಿ ಸೊನ್ನೆಯಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

2 ಸಿಲಿಂಡರ್‌ಗಳ ಬೆಲೆಗೆ ಈಗ 1 ಸಿಲಿಂಡರ್ ಸಿಗುತ್ತಿದೆ. ಕೇವಲ ಕಾಂಗ್ರೆಸ್‌ ಪಕ್ಷ ಬಡವರು & ಮಧ್ಯಮ ವರ್ಗದವರ ಹಿತ ಕಾಪಾಡಲಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಶನಿವಾರ ಗೃಹ ಬಳಕೆಯ ಸಿಲಿಂಡರ್‌ಗಳ ದರದಲ್ಲಿ 50 ರೂ. ಹೆಚ್ಚಳ ಮಾಡಲಾಗಿದೆ. ಹೊಸ ದರದ ಬಳಿಕ ಗೃಹ ಬಳಕೆ ಸಿಲಿಂಡರ್‌ಗಳ ಬೆಲೆ 999.50 ರೂ. ಆಗಿದೆ.

ಕಳೆದ ಭಾನುವಾರ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ದರವನ್ನು ಏರಿಕೆ ಮಾಡಲಾಗಿತ್ತು. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಇದರಿಂದ ಮತ್ತಷ್ಟು ಹೊರೆಯಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಸಾನಿ ಚಂಡಮಾರುತ: ಒಡಿಶಾ, ಬಂಗಾಳ, ಆಂಧ್ರದಲ್ಲಿ ಮಂಗಳವಾರದಿಂದ ಭಾರೀ ಮಳೆ!

Sun May 8 , 2022
  ಹೊಸದಿಲ್ಲಿ: ಮಂಗಳವಾರದಿಂದ ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಆಂಧ್ರಪ್ರದೇಶದಲ್ಲಿ ಅಸಾನಿ ಚಂಡಮಾರುತವು ಭಾರೀ ಮಳೆಗೆ ಕಾರಣವಾಗಲಿದೆ ಹಾಗೂ ಮುಂದಿನ 24 ಗಂಟೆಯಲ್ಲಿ ಚಂಡಮಾರುತವು ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದಾಗಿ ndtv ವರದಿ ಮಾಡಿದೆ. ಚಂಡಮಾರುತವು ಒಡಿಶಾ, ಆಂಧ್ರಪ್ರದೇಶದ ಕರಾವಳಿಯ ಸಮಾನಾಂತರದಲ್ಲಿ ಚಲಿಸುವ ಸಾಧ್ಯತೆಯನ್ನೂ ಅಂದಾಜಿಸಲಾಗಿದೆ. ಆಗ್ನೇಯ ಬಂಗಾಳ ಕೊಲ್ಲಿಯ ಆಳದಲ್ಲಿ ಒತ್ತಡ ಉಂಟಾಗಿದ್ದು, ಗಂಟೆಗೆ 16 ಕಿಮೀ ವೇಗದಲ್ಲಿ ಚಲಿಸುತ್ತಿದೆ. ಕಾರ್ […]

Advertisement

Wordpress Social Share Plugin powered by Ultimatelysocial