ಮುಂದಿನ 72 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ: ಹವಾಮಾನ ತಜ್ಞರಿಂದ ಮಾಹಿತಿ..!

 

ಧಾರವಾಡ: ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಬೀಸುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡು-ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಡಾ. ಆರ್.ಎಚ್. ಪಾಟೀಲ ಮಾಹಿತಿ ನೀಡಿದ್ದಾರೆ.

ಇನ್ನು ದಕ್ಷಿಣದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಕರಾವಳಿ ಭಾಗಗಳಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ.

ಇನ್ನು ಕೇರಳ, ತಮಿಳುನಾಡಿನಲ್ಲೂ ಭಾರೀ ಮಳೆಯಾಗಲಿದೆ ಎಂದು ಹೇಳಿದ್ದಾರೆ.

ಈ ನಡುವೆ ಉತ್ತರ ಕರ್ನಾಟಕ ಭಾಗದಲ್ಲಿ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮಳೆ ಜತೆಗೆ ಬಿರುಸಿನ ಗಾಳಿ ಬೀಸುವ ಸಾಧ್ಯತೆ ಇದೆ. ಹಾಹಿ ಸಾರ್ವಜನಿಕರು ರೈತರು ಹೊರಗೆ ಹೋಗದಂತೆ ಮತ್ತು ಪ್ರಾಣಿಗಳನ್ನು ಹೊರಗೆ ಬಿಡದಂತೆ ಧಾರವಾದ ಕೃಷಿ ಇಲಾಖೆ ಎಚ್ಚರಿಕೆ ನೀಡಿದೆ.

ಕೇರಳದ ನಾಲ್ಕು ಜಿಲ್ಲೆಗಳಲ್ಲಿ ಎಡಬಿಡದೇ ಮಳೆ ಸುರಿಯುತ್ತಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಇನ್ನು ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಅವಧಿ ಮುನ್ನವೇ ಮಾನ್ಸೂನ್​ ಪ್ರವೇಶಿಸುತ್ತಿದ್ದು, ಮೇ 18 ರಂದು ಕೇರಳಕ್ಕೆ ಪ್ರವೇಶಿಸುತ್ತಿರುವ ಈ ಮಾರುತಗಳು ಭಾರೀ ಮಳೆಯನ್ನೇ ತರಿಸುತ್ತದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

Avast Ultimate 2022 Review

Wed May 18 , 2022
Avast Supreme is a protection selection which includes a lot of Avast goods. It contains Avast Premium Security, Avast Cleanup High quality, Avast SecureLine VPN, and a premium release of Avast Passwords. Despite the name, it is a pack of security products, and it requires a current version of Windows […]

Advertisement

Wordpress Social Share Plugin powered by Ultimatelysocial