ಇಂದಿನಿಂದ ಮೂರು ದಿನ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವಂತ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದಾಗಿ ನಿನ್ನೆಯ ಭಾನುವಾರದಿಂದಲೇ, ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಲಿಕಲ್ಲು ಸಹಿತ ಮಳೆಯಿಂದಾಗಿ ಜನರು ತತ್ತರಿಸಿ ಹೋಗುವಂತೆ ಆಯ್ತು.

ಇಂದಿನಿಂದ ಮುಂದಿನ 72 ಗಂಟೆಯವರೆಗೆ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾದರೇ, ಬೆಂಗಳೂರು, ಹಾಸನ, ಶಿವಮೊಗ್ಗ, ಕೊಡಗು, ಮಂಡ್ಯ, ಮೈಸೂರು, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದಾರೆ.

ಇನ್ನೂ ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಉಷ್ಣಾಂಶ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ. ಮೇ.5ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿಗಿಂತ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆ ಬೀಳಲಿದೆ ಎಂಬುದಾಗಿಯೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (ಕೆಎಸ್‌ಆರ್‌ಟಿಸಿ) ಸಿಬ್ಬಂದಿ ಗೈರುಹಾಜರಿ

Mon May 2 , 2022
ಬೆಂಗಳೂರು, ಮೇ 02: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (ಕೆಎಸ್‌ಆರ್‌ಟಿಸಿ) ಸಿಬ್ಬಂದಿ ಗೈರುಹಾಜರಿ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಒಂದು ವರ್ಗದ ನೌಕರರು ಪೂರ್ವ ಮಾಹಿತಿ ಇಲ್ಲದೆ ಬಂಕ್ (ಗೈರು) ಮಾಡುತ್ತಾರೆ ಎಂದು ಮೂಲಗಳು ತಿಳಿಸಿವೆ. ಕೋವಿಡ್ ಲಾಕ್‌ಡೌನ್ ನಂತರ ಪ್ರಾಥಮಿಕ ಹಂತದಿಂದ ಬಸ್‌ಗಳನ್ನು ಓಡಿಸುವಲ್ಲಿ ಕೆಎಸ್‌ಆರ್‌ಟಿಸಿ ತೊಡಗಿಸಿಕೊಂಡಿರುವುದರಿಂದ, ಸಿಬ್ಬಂದಿ ಹಠಾತ್ ಗೈರಾಗುವುದು ತನ್ನ ದೈನಂದಿನ ವ್ಯವಹಾರ ಮತ್ತು ಆದಾಯಕ್ಕೆ ಅಪಾಯವನ್ನುಂಟು ಮಾಡುತ್ತದೆ. ಕೆಎಸ್‌ಆರ್‌ಟಿಸಿ ಸಾರಿಗೆ ಸಂಸ್ಥೆಯಲ್ಲಿ 35,000 ಉದ್ಯೋಗಿಗಳನ್ನು […]

Advertisement

Wordpress Social Share Plugin powered by Ultimatelysocial