ಮತ್ತೆ ಒಂದಾಗುತ್ತಿದ್ದಾರೆ ಪ್ರಭಾಸ್-ರಾಜಮೌಳಿ

ಮೆಗಾಹಿಟ್ ಸಿನಿಮಾ ಕೊಟ್ಟ ರಾಜಮೌಳಿ ಹಾಗೂ ಪ್ರಭಾಸ್ ಇದೀಗ ಮತ್ತೆ ಒಂದಾಗುತ್ತಿದ್ದಾರೆ.

ಪ್ರಭಾಸ್ ಪ್ರಸ್ತುತ ತಮ್ಮ ಹೊಸ ಸಿನಿಮಾ ‘ರಾಧೆ-ಶ್ಯಾಮ್’ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಸಿನಿಮಾದ ಟ್ರೇಲರ್ ಕೆಲವು ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಸಿನಿಮಾವು ಮಾರ್ಚ್ 11 ರಂದು ಬಿಡುಗಡೆ ಆಗಲಿದೆ.

ಸಿನಿಮಾದ ಪ್ರಚಾರ ಕಾರ್ಯದಲ್ಲಿ ಪ್ರಭಾಸ್ ಪ್ರಸ್ತುತ ನಿರತರಾಗಿದ್ದಾರೆ.

ಪ್ರಭಾಸ್ ಪ್ರಸ್ತುತ ಬಹಳ ಬ್ಯುಸಿಯಾಗಿದ್ದಾರೆ. ಅವರ ‘ರಾಧೆ-ಶ್ಯಾಮ್’ ಸಿನಿಮಾ ಬಿಡುಗಡೆಗೆ ತಯಾರಾಗಿದೆ. ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಭಾರತದ ಅತಿ ದೊಡ್ಡ ಬಜೆಟ್ ಸಿನಿಮಾ ಆದ ‘ಆದಿಪುರುಷ್’ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಇದರ ಜೊತೆಗೆ ಇನ್ನೂ ಹೆಸರಿಡದ ಹೊಸ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ.

ಇನ್ನು ರಾಜಮೌಳಿ ಸಹ ಸಖತ್ ಬ್ಯುಸಿಯಾಗಿದ್ದಾರೆ. ಪ್ರಸ್ತುತ ‘RRR’ ಸಿನಿಮಾ ಬಿಡುಗಡೆಗೆ ತಯಾರಾಗಿರುವ ಅವರು ಇದರ ಬಳಿಕ ಮಹೇಶ್ ಬಾಬು ಅವರೊಟ್ಟಿಗೆ ಹೊಸ ಸಿನಿಮಾ ಮಾಡಲಿದ್ದಾರೆ. ಅದರ ಬಳಿಕ ಸಲ್ಮಾನ್ ಖಾನ್‌ಗೆ ಸಿನಿಮಾ ಒಂದನ್ನು ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ʼಪಿಂಚಣಿʼ ಯೋಜನೆ ಲಾಭಗಳ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

Sat Mar 5 , 2022
ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಕೇಂದ್ರ ಸರ್ಕಾರಿ ನೌಕರರಿಗೆ ಅತ್ಯಂತ ಪ್ರಯೋಜನಕಾರಿಯಾದ ಸರ್ಕಾರಿ ಸ್ಕೀಮ್‌ ಗಳಲ್ಲೊಂದು. ಎಲ್ಲಾ ಕೇಂದ್ರ ಸರ್ಕಾರಿ ನೌಕರರು ಎನ್‌ ಪಿ ಎಸ್‌ ಖಾತೆಯನ್ನು ತೆರೆಯಬೇಕು. 2013ರ PFRDA ಕಾಯ್ದೆ ಅಡಿಯಲ್ಲಿ ಇದನ್ನು ನಿಯಂತ್ರಿಸಲಾಗುತ್ತದೆ. ಹಣಕಾಸು ಸೇವೆಗಳ ಇಲಾಖೆ ಸಹ ಇದರ ನೀತಿ ನಿಯಮಗಳನ್ನು ರೂಪಿಸುತ್ತದೆ. ಸೇವೆಗೆ ಸೇರ್ಪಡೆಯಾಗುತ್ತಿದ್ದಂತೆ ಕೇಂದ್ರ ಸರ್ಕಾರಿ ನೌಕರರ ಹೆಸರಲ್ಲಿ ಎನ್‌ ಪಿ ಎಸ್‌ ಖಾತೆ ತೆರೆಯಲಾಗುತ್ತದೆ. ಇದಕ್ಕಾಗಿ DDO ಹಾಗೂ PAOಗೆ ಅರ್ಜಿ […]

Advertisement

Wordpress Social Share Plugin powered by Ultimatelysocial