ರಾಜೇಶ್ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇತರೆ ಮಾಹಿತಿ

ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ರವೀಂದ್ರ ಕಲಾಕ್ಷೇತ್ರದಲ್ಲಿ ರಾಜೇಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಂತಿಮ ಕಾರ್ಯವು ಮೇಡಿ ಅಗ್ರಹಾರ ಲಕ್ಷ್ಮಿಪುರದಲ್ಲಿ ಮಧ್ಯಾಹ್ನ 3:30ರ ಬಳಿಕ ನಡೆಯಲಿದೆ.

 

ಸಾರ್ವಜನಿಕರು ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆಯಬಹುದು.

ರಾಜೇಶ್‌ ಅವರಿಗಿದ್ದ ಆರೋಗ್ಯ ಸಮಸ್ಯೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ರಾಜೇಶ್ ಅವರ ಅಳಿಯ ನಟ ಅರ್ಜುನ್ ಸರ್ಜಾ, ”ಕಳೆದ ಹತ್ತು ದಿನಗಳಿಂದಲೂ ಅವರು ಆಸ್ಪತ್ರೆಯಲ್ಲಿದ್ದರು. ಮೊದಲಿಗೆ ಅವರಿಗೆ ಪ್ರೋ ಕೋವಿಡ್ ಆಗಿತ್ತು. ಬಳಿಕ ಸಿಕೆಡಿ (ಕ್ರಾನಿಕಲ್ ಕಿಡ್ನಿ ಡಿಸೀಸ್) ಆಯ್ತು. ಬಹಳ ಸುಸ್ತು ಎಂದು ಇತ್ತೀಚೆಗೆ ಹೇಳುತ್ತಿದ್ದರು. ಆಸ್ಪತ್ರೆಗೆ ದಾಖಲಾದ ಬಳಿಕ ಇನ್ನಷ್ಟು ಸುಸ್ತಾಗಿದ್ದರು. ನಾವು ಬಹಳ ಪ್ರಯತ್ನ ಪಟ್ಟೆವು. ಆದರೆ ಉಳಿಸಿಕೊಳ್ಳಲು ಆಗಲಿಲ್ಲ. ಶನಿವಾರ ಬೆಳಗಿನ ಜಾವ 2:20 ಕ್ಕೆ ರಾಜೇಶ್ ಅವರು ಪ್ರಾಣತ್ಯಾಗ ಮಾಡಿದರು” ಎಂದು ಮಾಹಿತಿ ನೀಡಿದ್ದಾರೆ.

”ರಾಜೇಶ್ ಅವರು ಹಲವು ವರ್ಷಗಳಿಂದ ಸಿನಿಮಾರಂಗದಲ್ಲಿ ತೊಡಗಿಕೊಂಡಿದ್ದಾರೆ. ರಾಜೇಶ್ ಅವರು ಅಣ್ಣಾವ್ರ ಸಮಕಾಲೀನರು. ಅವರ ಅಗಲಿಕೆಯಿಂದ ಮನಸ್ಸಿಗೆ ಬಹಳ ವ್ಯಥೆಯಾಗಿದೆ” ಎಂದು ರಾಜೇಶ್ ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸುರೈಯ ಪ್ರಸಿದ್ಧ ಹಿಂದಿ ಚಲನಚಿತ್ರ ನಟಿ, ಹಿನ್ನೆಲೆ ಗಾಯಕಿ ಮತ್ತು ನೃತ್ಯ ಸಂಯೋಜಕಿ.

Sat Feb 19 , 2022
ಸುರೈಯ ಪ್ರಸಿದ್ಧ ಹಿಂದಿ ಚಲನಚಿತ್ರ ನಟಿ, ಹಿನ್ನೆಲೆ ಗಾಯಕಿ ಮತ್ತು ನೃತ್ಯ ಸಂಯೋಜಕಿ. ಇಂದು ಅವರ ಸಂಸ್ಮರಣಾ ದಿನ.ಸುರೈಯ 1929 ಜೂನ್ 18ರಂದು ಲಾಹೋರಿನಲ್ಲಿ ಜನಿಸಿದರು. ಚಿಕ್ಕಂದಿನಲ್ಲಿ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಅನುಕೂಲ ಸಿಗಲಿಲ್ಲ. ಹತ್ತನೆಯ ವಯಸ್ಸಿಗೆ ಅಭಿನಯಕ್ಕೆ ತೊಡಗಿದರು. ಹದಿನೈದನೆಯ ವರ್ಷಕ್ಕೆ ಪ್ರಸಿದ್ಧ ತಾರೆಯಾದರು. ಗುರು ಮುಖೇನ ಕಲಿಯದಿದ್ದರೂ ಶಾಸ್ತ್ರೀಯ ಸಂಗೀತವನ್ನು ಹಾಡಬಲ್ಲವಳಾಗಿದ್ದರು. ಪ್ರಸಿದ್ಧಗಾಯಕ ಸೈಗಲ್‍ರ ಮಧುರ ಸ್ವರಕ್ಕೆ ಮರುಳಾಗಿದ್ದರು. ಕಾನನ್-ಬಾಲಾ ಖುರ್ಷೀದರ ಹಾಡುಗಳೂ ಎಳವೆಯಲ್ಲಿ ಈಕೆಯ ಮನಸ್ಸಿನ ಮೇಲೆ […]

Advertisement

Wordpress Social Share Plugin powered by Ultimatelysocial