ರಜನಿಕಾಂತ್‌ ಆಸ್ಪತ್ರೆಗೆ ದಾಖಲು..!

ತಮಿಳು ಚಿತ್ರ ರಂಗದ ಸೂಪರ್‌ ಸ್ಟಾರ್‌ ರಜನಿಕಾಂತ್ ಅವರನ್ನು ಗುರುವಾರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ.

2020ರಲ್ಲಿ, ರಜನಿಕಾಂತ್​ ಅವರಿಗೆ ಅನಾರೋಗ್ಯ ಉಂಟಾಗಿ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಇದಾದ ಕೆಲವು ದಿನಗಳ ನಂತರ, ಅವರು 2021ರಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಪ್ರಾರಂಭಿಸಲು ಯೋಜಿಸಿದ್ದ ರಾಜಕೀಯ ಪಕ್ಷ ಆರಂಭಿಸುವುದಿಲ್ಲ ಎಂದು ಅವರು ಘೋಷಿಸಿದ್ದರು. ಮೊನ್ನೆಯಷ್ಟೆ ದೆಹಲಿಯಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ರಜನಿಕಾಂತ್‌ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ್ದರು. ಪ್ರಶಸ್ತಿ ಪಡೆಯಲು ದೆಹಲಿಗೆ ತೆರಳಿದ್ದ ಅವರು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಜನ್ಯಪೂರ್ವಕವಾಗಿ ಭೇಟಿ ಮಾಡಿದ್ದರು.

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಖತ್ ಸಿನಿಮಾಗೆ ಧ್ರುವ ಸರ್ಜಾ, ಜೋಗಿ ಪ್ರೇಮ್ ಸಾಥ್..!

Fri Oct 29 , 2021
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಸಖತ್ ಸಿನಿಮಾಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ನಿರ್ದೇಶಕ ಜೋಗಿ ಪ್ರೇಮ್ ಸಾಥ್ ಸಿಕ್ಕಿದೆ. ಸಖತ್ ಸಿನಿಮಾ ಟೀಸರ್ ಈಗಾಗಲೇ ಬಿಡುಗಡೆಯಾಗಿ ಜನರಿಗೆ ಸಖತ್ ಇಷ್ಟವಾಗಿದೆ. ಇದೀಗ ಚಿತ್ರದ ಟೈಟಲ್ ಹಾಡು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.ನಾಳೆ ‘ಸಖತ್’ ಸಿನಿಮಾದ ಟೈಟಲ್ ಹಾಡು ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ ಹಾಡನ್ನು ಧ್ರುವ ಸರ್ಜಾ ಮತ್ತು ಜೋಗಿ ಪ್ರೇಮ್ ಲೋಕಾರ್ಪಣೆಗೊಳಿಸಲಿದ್ದಾರೆ.   […]

Advertisement

Wordpress Social Share Plugin powered by Ultimatelysocial