ಬಿಜೆಪಿ ಶಾಸಕ ರಾಜ್‍ಕುಮಾರ್ ಪಾಟೀಲ ತೇಲ್ಕೂರ ಬ್ಲಾಕ್‍ಮೇಲ್ ಪ್ರಕರಣ ಕುರಿತಂತೆ ಮಹಿಳಾ ಆಯೋಗ !

ಬೆಂಗಳೂರು,ಫೆ.8-ಬಿಜೆಪಿ ಶಾಸಕ ರಾಜ್‍ಕುಮಾರ್ ಪಾಟೀಲ ತೇಲ್ಕೂರ ಬ್ಲಾಕ್‍ಮೇಲ್ ಪ್ರಕರಣ ಕುರಿತಂತೆ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಶಾಸಕ ರಾಜ್‍ಕುಮಾರ್ ವಿರುದ್ಧ 40 ವರ್ಷದ ಮಹಿಳೆ ಕಿರುಕುಳ ಆರೋಪ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿ ನಾವು ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ದಾರೆ.ಶಾಸಕರ ವಿರುದ್ಧ ದೂರು ನೀಡಿರುವ ಮಹಿಳೆಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದೇವೆ. ಈ ಕುರಿತಂತೆ ನಾನು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ನಾಯ್ಡು ಹೇಳಿದರು.ರಾಜ್‍ಕುಮಾರ್ ಅವರು ನನಗೆ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ಥ ಮಹಿಳೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ನೀಡಿದ್ದಾರೆ. ಹೀಗಾಗಿ ನಾನು ಶೀಘ್ರ ಪಂತ್ ಅವರನ್ನು ಭೇಟಿಯಾಗಿ ಮಹಿಳೆ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಪ್ರಮೀಳಾನಾಯ್ಡು ಹೇಳಿದರು.ಮಹಿಳೆ ನೀಡಿರುವ ದೂರಿನ ಬಗ್ಗೆ ಮತ್ತಷ್ಟು ತನಿಖೆ ನಡೆಸಿ ಪ್ರಕರಣದಲ್ಲಿ ಏನಾಗಿದೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಿದ ನಂತರ ಯಾವ ಸೆಕ್ಷನ್ ಅಡಿ ಕ್ರಮ ಕೈಗೊಳ್ಳಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದು ಅವರು ತಿಳಿಸಿದರು. ಸದ್ಯಕ್ಕೆ, ಪ್ರಕರಣ ಕುರಿತಂತೆ ನಮ್ಮ ಆಯೋಗದಿಂದ ಮಾಡಬೇಕಾದ ಎಲ್ಲಾ ಕೆಲಸಗಳನ್ನು ಮಾಡಲಾಗಿದೆ ಎಂದು ಅವರು ವಿವರಣೆ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

MUMBAI:ಮುಂಬೈ ಮುಂದಿನ ವಾರದಿಂದ 100 ಪ್ರತಿಶತ ಅನ್ಲಾಕ್ ಆಗಿದೆ;

Tue Feb 8 , 2022
ಕರೋನದ ಮೂರನೇ ತರಂಗವನ್ನು ಯಶಸ್ವಿಯಾಗಿ ಎದುರಿಸಿದ ಮುಂಬೈಕರ್‌ಗಳು ಮುಂದಿನ ವಾರ ಒಳ್ಳೆಯ ಸುದ್ದಿ ಪಡೆಯಬಹುದು. ಕರೋನಾ ರೋಗಿಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿರುವ ಕಾರಣ ಮತ್ತು ಚೇತರಿಕೆ ದರದಲ್ಲಿ ನಿರಂತರ ಸುಧಾರಣೆಯಿಂದಾಗಿ, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನಿರ್ಬಂಧಗಳಿಂದ ವಿನಾಯಿತಿಯನ್ನು ಪರಿಗಣಿಸಲು ಪ್ರಾರಂಭಿಸಿದೆ. ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ನಿರ್ಬಂಧಗಳನ್ನು ಸಡಿಲಿಸಲು ಈ ವಾರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಶನ್‌ನ ಹೆಚ್ಚುವರಿ ಆಯುಕ್ತ ಸುರೇಶ್ ಕಾಕಾನಿ ಹೇಳಿದ್ದಾರೆ. ಮುಂಬೈನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. […]

Advertisement

Wordpress Social Share Plugin powered by Ultimatelysocial