ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ, ಹೊಸ ವರ್ಷದ ಆಚರಣೆಗೆ ಹಲವು ರೂಲ್ಸ್‌ ಜಾರಿ

ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಹೊಸ ಗೈಡ್‌ ಲೈನ್ಸ್‌ ರಿಲೀಸ್‌ ಮಾಡಿದೆ. ಇಂದು ಕೋವಿಡ್‌ ಬಗ್ಗೆ ಕುರಿತು ಸಭೆ ನಡೆಸಲಾಗಿತ್ತು ಈ ಸಭೆಯಲ್ಲಿ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.ನಗರದಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ.ಕೊರೊನಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನ ಕೈಗೊಳ್ಳಲಾಗಿದೆ. ಎಲ್ಲಾ ಥಿಯೇಟರ್‌ ಗಳಲ್ಲೂ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಶಾಲಾ- ಕಾಲೇಜುಗಳಲ್ಲಿ ಮಾಸ್ಕ್‌ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೋವಿಡ್‌ ಸಭೆ ಬಳಿಕ ಸಚಿವ ಆರ್‌ ಅಶೋಕ್‌ ಹೇಳಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್‌ ನಿಯಮ ಪಾಲನೆ ಮಾಡಬೇಕು. ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.ಇದೇ ವೇಳೇ ಮಾತನಾಡಿದ ಸಚಿವ ಸುಧಾಕರ್‌ ಸ್ವಯಂ ಪ್ರೇರಿತವಾಗಿ ಮೂರನೇ ಡೋಸ್‌ ಲಸಿಕೆಯನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದರು. ಇದೇ ವೇಳೆ ಹೊರದೇಶದವರನ್ನು ರ್ಯಾಂಡಮ್‌ ರೀತಿಯಲ್ಲಿ ಟೆಸ್ಟ್‌ ಮಾಡಲಾಗುವುದು ಅಂತ ತಿಳಿಸಿದರು. ಇನ್ನೂ ಇದೇ ವೇಳೆ ಅವರು ಯಾವ ಚಟುವಟಿಕೆಗಳಿಗೆ ನಾವು ನಿರ್ಬಂದ ಮಾಡಿಲ್ಲ ಅಂತ ಹೇಳಿದರು. ಯಾವುದೇ ರಾಜಕೀಯ ಕಾರ್ಯಕ್ರಮಗಳಿಗೆ ನಿಶೇಧವನ್ನು ಹೇರಿಲ್ಲ, ಆದರೆ ಕೋವಿಡ್‌ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗುವುದು ಅಂತ ಹೇಳಿದರು.ಇನ್ನೂ ದಂಡಕ್ಕೆ ಸಂಬಂಧಪಟ್ಟಂತೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ, ಈ ಬಗ್ಗೆ ಸಿಎಂ ಜೊತೆಗೆ ಚರ್ಚೆ ನಡೆಸಿದ ಬಳಿಕ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಅಂತ ತಿಳಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಅನಾರೋಗ್ಯದಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Mon Dec 26 , 2022
ಅನಾರೋಗ್ಯದಿಂದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸೋಮವಾರ ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.63 ವರ್ಷದ ಅವರನ್ನು ಆಸ್ಪತ್ರೆಯ ಖಾಸಗಿ ವಾರ್ಡ್ ನಲ್ಲಿ ದಾಖಲಿಸಲಾಗಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಅವಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಆರೋಗ್ಯದ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/de…   […]

Advertisement

Wordpress Social Share Plugin powered by Ultimatelysocial