ರಾಜ್ಯದ 221 ಕ್ಷೇತ್ರಗಳಲ್ಲಿ 5.05 ಕೋಟಿ ಮತದಾರರು

 ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ಗುರುವಾರ (ಜ.5) ಪ್ರಕಟಿಸಲಾಗಿದ್ದು, ಅದರಂತೆ ರಾಜ್ಯದ ಒಟ್ಟು ಮತದಾರರ ಸಂಖ್ಯೆ 5.05 ಕೋಟಿ ಆಗಿದೆ.ಮತದಾರರ ಗೌಪ್ಯ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿದ ಆರೋಪ ಕೇಳಿ ಬಂದು ವಿಚಾರಣಾ ಹಂತದಲ್ಲಿರುವ ಬೆಂಗಳೂರು ನಗರ ವ್ಯಾಪ್ತಿಯ ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಜ.15 ರಂದು ಪ್ರಕಟಿಸಲಾಗುವುದು.ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ವಿವರಗಳನ್ನು ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ, 221 ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುತ್ತಿದ್ದು, ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮದಹೇವಪುರ ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿಯಲ್ಲಿ ಜ.15ರಂದು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.ಕರಡು ಮತದಾರರ ಪಟ್ಟಿಯನ್ನು ನ.9ರಂದು ಪ್ರಕಟಿಸಲಾಗಿತ್ತು. ಕರಡು ಪಟ್ಟಿಯಲ್ಲಿ 221 ವಿಧಾನಸಭಾ ಕ್ಷೇತ್ರಗಳಲ್ಲಿ 4.99 ಕೋಟಿ ಮತದಾರರು ಇದ್ದರು. ನ.9ರಿಂದ ಡಿ.8ರವರೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ನ.11 ಮತ್ತು 20 ಹಾಗೂ ಡಿ.3-4 ಈ ದಿನಗಳಂದು ವಿಶೇಷ ಪ್ರಚಾರ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಡಿ.26ರಂದು ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಯಿತು.ಜ.5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತಿದೆ. ಈ ಅವಧಿಯಲ್ಲಿ 18.32 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. 12.31 ಲಕ್ಷ ಹೊಸ ಸೇರ್ಪಡೆಗಳು ಆಗಿದ್ದು, 6.18 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಕರಡು ಮತದಾರರ ಪಟ್ಟಿಯಿಂದ ಅಂತಿಮ ಮತದಾರರ ಪಟ್ಟಿಯಲ್ಲಿ ಸರಾಸರಿ 6.13 ಲಕ್ಷ ಸೇರ್ಪಡೆ ಆಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿದ್ಯಾರ್ಥಿಗಳಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ತಡರಾತ್ರಿ ಪ್ರತಿಭಟನೆ ನಡೆಸಿದರು.

Fri Jan 6 , 2023
ಯುವ ಜನೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ತಡರಾತ್ರಿ ಪ್ರತಿಭಟನೆ ನಡೆಸಿದರು….ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಗಾಂಧಿ ಭವನದ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಕರ್ನಾಟಕ ವಿಶ್ವವಿದ್ಯಾಲಯದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು…ಕರ್ನಾವಿಶ್ವವಿದ್ಯಾಲದ ಯುವಜನೋತ್ಸವ ಪ್ರಶಸ್ತಿ ವಿತರಣೆಯಲ್ಲಿ ತಾರತಮ್ಯ ಮಾಡಲಾಗಿದ್ದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಆರೋಪಿಸಿದರು…. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow […]

Advertisement

Wordpress Social Share Plugin powered by Ultimatelysocial