ರಾಜ್ಯದ ಹಿರಿಯ ನಾಗರಿಕರಿಗೆ ಉಚಿತ ಬಸ್‍ಪಾಸ್ ನೀಡಲು ಕ್ರಮ : ಸಚಿವ ಬಿ.ಶ್ರೀರಾಮುಲು

Good News : ರಾಜ್ಯದ ಹಿರಿಯ ನಾಗರಿಕರಿಗೆ ಉಚಿತ ಬಸ್‍ಪಾಸ್ ನೀಡಲು ಕ್ರಮ : ಸಚಿವ ಬಿ.ಶ್ರೀರಾಮುಲು
ಗಾರ್ಮೆಂಟ್ ಕಾರ್ಮಿಕರಿಗೆ,ಹಿರಿಯ ನಾಗರಿಕರಿಗೆ ಉಚಿತ ಬಸ್‍ಪಾಸ್ ನೀಡಲು ಕ್ರಮವಹಿಸಲಾಗುವುದೆಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ತಿಳಿಸಿದರು.

ತಾಲೂಕಿನ ಶಿಗಿಕೇರಿ ಬಾದಾಮಿ ರಸ್ತೆಯಲ್ಲಿ ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡ ನೂತನ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದ ಭೂಮಿ ಪೂಜೆ ನೆರವೇರಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರಿಗೆ ಇಲಾಖೆಯಲ್ಲಿ ಬದಲಾವಣೆ ತರುವ ಮೂಲಕ ಎಲ್ಲ ರೀತಿಯ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡದ ವರ್ಗದ ಮಕ್ಕಳಿಗೆ ಉಚಿತ ಬಸ್‍ಪಾಸ್, ಗಾರ್ಮೆಂಟ್ ಕಾರ್ಮಿಕರಿಗೆ, ಹಿರಿಯ ನಾಗರಿಕರಿಗೆ ಉಚಿತ ಬಸ್‍ಪಾಸ್ ನೀಡಲು ಕ್ರಮವಹಿಸಲಾಗುವುದೆಂದು ತಿಳಿಸಿದರು.

ಬಾಗಲಕೋಟೆ ಭಾಗದಲ್ಲಿ ಕಬ್ಬಿನ ಟ್ರ್ಯಾಕ್ಟರ್ ಚಾಲಕರಿಗೆ ಲೈಸನ್ಸ್ ಇಲ್ಲದೇ ಚಾಲನೆ ಮಾಡುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿರುವದನ್ನು ಗಮನಿಸಿದ್ದು, ಅಂತವರಿಗೆ ವರ್ಷದಲ್ಲಿ ಎರಡು ದಿನ ಉಚಿತವಾಗಿ ಡ್ರೈವಿಂಗ್ ಲೈಸೆನ್ಸ್ ನೀಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ 5 ಜಿಲ್ಲೆಗಳಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದನ್ನು ಮಾಡಲಾಗುತ್ತಿದೆ. ಲೈನಸ್ಸ್ ಪಡೆಯಬೇಕಾದರೆ ಪರೀಕ್ಷೆಯಲ್ಲಿ ಶೇ.69 ರಷ್ಟು ಫಲಿತಾಂಶ ಬರಲೇಬೇಕು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ತ್ಯಾಗನು ಇಲ್ಲ ಬಲಿದಾನ ಕೂಡ ಇಲ್ಲ | C.T Ravi | Bjp | Speed News Kannada |

Sun Jan 2 , 2022
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial