ರಾಜ್ಯದ ಹಿರಿಯ ನಾಗರಿಕರಿಗೆ ಉಚಿತ ಬಸ್‍ಪಾಸ್ ನೀಡಲು ಕ್ರಮ : ಸಚಿವ ಬಿ.ಶ್ರೀರಾಮುಲು

ಬಾಗಲಕೋಟೆ : ಗಾರ್ಮೆಂಟ್ ಕಾರ್ಮಿಕರಿಗೆ,ಹಿರಿಯ ನಾಗರಿಕರಿಗೆ ಉಚಿತ ಬಸ್‍ಪಾಸ್ ನೀಡಲು ಕ್ರಮವಹಿಸಲಾಗುವುದೆಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ತಿಳಿಸಿದರು.

ತಾಲೂಕಿನ ಶಿಗಿಕೇರಿ ಬಾದಾಮಿ ರಸ್ತೆಯಲ್ಲಿ ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡ ನೂತನ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದ ಭೂಮಿ ಪೂಜೆ ನೆರವೇರಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರಿಗೆ ಇಲಾಖೆಯಲ್ಲಿ ಬದಲಾವಣೆ ತರುವ ಮೂಲಕ ಎಲ್ಲ ರೀತಿಯ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡದ ವರ್ಗದ ಮಕ್ಕಳಿಗೆ ಉಚಿತ ಬಸ್‍ಪಾಸ್, ಗಾರ್ಮೆಂಟ್ ಕಾರ್ಮಿಕರಿಗೆ, ಹಿರಿಯ ನಾಗರಿಕರಿಗೆ ಉಚಿತ ಬಸ್‍ಪಾಸ್ ನೀಡಲು ಕ್ರಮವಹಿಸಲಾಗುವುದೆಂದು ತಿಳಿಸಿದರು.

ಬಾಗಲಕೋಟೆ ಭಾಗದಲ್ಲಿ ಕಬ್ಬಿನ ಟ್ರ್ಯಾಕ್ಟರ್ ಚಾಲಕರಿಗೆ ಲೈಸನ್ಸ್ ಇಲ್ಲದೇ ಚಾಲನೆ ಮಾಡುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿರುವದನ್ನು ಗಮನಿಸಿದ್ದು, ಅಂತವರಿಗೆ ವರ್ಷದಲ್ಲಿ ಎರಡು ದಿನ ಉಚಿತವಾಗಿ ಡ್ರೈವಿಂಗ್ ಲೈಸೆನ್ಸ್ ನೀಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ 5 ಜಿಲ್ಲೆಗಳಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದನ್ನು ಮಾಡಲಾಗುತ್ತಿದೆ. ಲೈನಸ್ಸ್ ಪಡೆಯಬೇಕಾದರೆ ಪರೀಕ್ಷೆಯಲ್ಲಿ ಶೇ.69 ರಷ್ಟು ಫಲಿತಾಂಶ ಬರಲೇಬೇಕು. ಇದರಿಂದ ಉತ್ತಮ ಚಾಲಕರಿಗೆ ಹೊರಹೊಮ್ಮುತ್ತಿರುವದರಿಂದ ಅಪಘಾತದ ಪ್ರಮಾಣವನ್ನು ಕಡಿಮೆಗೊಳಿಸಲು ಸಾಧ್ಯವಾಗುತ್ತದೆ. ಈ ಮೊದಲು ಮ್ಯಾನುವಲ್ ಆಗಿ ಚಾಲನಾ ಪ್ರಮಾಣ ಪತ್ರ ನೀಡಲಾಗುತ್ತಿತ್ತು. ಈ ನೂತನ ತಂತ್ರಜ್ಞಾನ ಅಳವಡಿಸುವ ಮೂಲಕ ಚಾಲನಾ ಪರವಾನಿಗೆ ನೀಡುವ ಯೋಜನೆಯನ್ನು ಜಾರಿಗೆ ತರಲಾಗಿದೆ.

ಅಥಣಿಯಲ್ಲಿ 7.5 ಕೋಟಿ, ಚಿಕ್ಕೋಡಿಯಲ್ಲಿ 9 ಕೋಟಿ, ಜಮಖಂಡಿಯಲ್ಲಿ 7 ಕೋಟಿ ಹಾಗೂ ಬಾಗಲಕೋಟೆಯಲ್ಲಿ 9 ಕೋಟಿ ರೂ.ಗಳ ವೆಚ್ಚದಲ್ಲಿ ನೂತನ ಚಾಲನಾ ಪರೀಕ್ಷಾ ಪಥವನ್ನು ನಿರ್ಮಿಸಲಾಗುತ್ತಿದೆ. ಹಾವೇರಿಯಲ್ಲಿ ಈಗಾಗಲೇ ಈ ಕಾರ್ಯ ಪ್ರಗತಿಯಲ್ಲಿದೆ. ಈ ಯೋಜನೆ ರ ರಾಜ್ಯದ 30 ಜಿಲ್ಲೆಗಳಲ್ಲಿ ಆಗಬೇಕಿದೆ. ಇದರ ಜೊತೆಗೆ ಸಾರ್ವಜನಿಕರು ಪ್ರಾದೇಶಿಕ ಕಚೇರಿಗೆ ಅಲೆದಾಡದೇ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದರು ತಿಳಿಸಿದರು.

ಕೇಂದ್ರದ ಸಾರಿಗೆ ಮಂತ್ರಿಗಳಾದ ನಿತೀನ್ ಗಡಕರಿಯವರು ರಸ್ತೆಗಳನ್ನು ಅಭಿವೃದ್ದಿ ಪಡಿಸುತ್ತಿದ್ದಾರೆ. ಈ ಮೊದಲು ಒಂದು ದಿನಕ್ಕೆ 15 ಕಿಮೀ ರಸ್ತೆ ಮಾಡಲಾಗುತ್ತಿತ್ತು, ಈಗ 38-45 ಕಿಮೀ ವರೆಗೆ ಮಾಡಲಾಗುತ್ತಿದೆ. ರಸ್ತೆಗಳು ಉತ್ತಮವಾಗಿದ್ದರೆ ಮಾತ್ರ ಸುಗಮ ಕಾರ್ಯಕೈಗೊಳ್ಳಲು ಸಾದ್ಯವಾಗುತ್ತದ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಒಡಿಶಾದಲ್ಲಿ 23 ಹೊಸ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿದೆ.....

Sun Jan 2 , 2022
  ಒಡಿಶಾದಲ್ಲಿ 23 ಹೊಸ ಒಮಿಕ್ರಾನ್ ಪ್ರಕರಣಗಳು ಪಶ್ಚಿಮ ಬಂಗಾಳ ಸರ್ಕಾರ ಹೊಸ ನಿರ್ಬಂಧಗಳನ್ನು ಪ್ರಕಟಿಸಿದ್ದಾರೆ  Covid-19 Omicron  ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಮಾಹಿತಿಯ ಪ್ರಕಾರ ಭಾನುವಾರ ಬೆಳಿಗ್ಗೆಯ ಹೊತ್ತಿಗೆ ಭಾರತದಲ್ಲಿ ಓಮಿಕ್ರಾನ್ ಸಂಖ್ಯೆ 1,525 ಕ್ಕೆ ತಲುಪಿದೆ ಎಂದು ಹೇಳಿದ್ದಾರೆಈ ಮೂಲಕ   ಕೋವಿಡ್-19  ಒಡಿಶಾದಲ್ಲಿ ಭಾನುವಾರ 23 ಹೊಸ ಒಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು ಎಂದು ತಿಳಿದುಬಂದಿದ್ದೆ  ಕೋವಿಡ್ -19 ನ ಹೊಸ ರೂಪಾಂತರದ ರಾಜ್ಯದ ಸಂಖ್ಯೆಯನ್ನು 37 […]

Advertisement

Wordpress Social Share Plugin powered by Ultimatelysocial