ಲಕ್ಷ್ಮೀ ಹೆಬ್ಬಾಳ್ಕರ್‌ಗೆ ‘ವಿಷಕನ್ಯೆ’ ಎಂದ ರಮೇಶ್‌ ಜಾರಕಿಹೊಳಿ!

ಬೆಳಗಾವಿ, ಫೆಬ್ರವರಿ 20: ರಾಜ್ಯದ ಪ್ರತಿಷ್ಠಿತ ವಿಧಾನಸಭೆ ಕ್ಷೇತ್ರಗಳಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರವೂ ಒಂದು. ಬೆಳಗಾವಿಯು ಕರ್ನಾಟಕದಲ್ಲಿ ಐತಿಹಾಸಿಕ ಹಾಗೂ ಆರ್ಥಿಕ ಸ್ಥಾನಮಾನವನ್ನು ಹೊಂದಿದೆ. ಪಶ್ಚಿಮ ಘಟ್ಟಗಳ ಮಡಿಲಿನಲ್ಲಿ ಇರುವ ಬೆಳಗಾವಿ ಕ್ಷೇತ್ರವು ಹತ್ತಿ ಹಾಗೂ ರೇಷ್ಮೆ ನೇಕಾರರ ಪ್ರದೇಶಗಳಿಂದ ಕೂಡಿದೆ.

ಬೆಳಗಾವಿ ನಗರವು ಮೂರು ರಾಜ್ಯಗಳಿಗೆ ಕೊಂಡಿಯಾಗಿದೆ. ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಗೆ ಬೆಳಗಾವಿ ಸಂಪರ್ಕ ಕೇಂದ್ರವಾಗಿದೆ. ಇಲ್ಲಿ ಕನ್ನಡ, ಮರಾಠಿ ಹಾಗೂ ಕೊಂಕಣಿ ಭಾಷೆಗಳ ಸಂಗಮವಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಶ್ರೀಮಂತ ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ.

ಬೆಳಗಾವಿಯನ್ನು ಕರ್ನಾಟಕದ ಎರಡನೇ ರಾಜಧಾನಿ ಎಂದೇ ಕರೆಯಲಾಗುತ್ತದೆ. ಇಲ್ಲಿರುವ ಸುವರ್ಣ ಸೌಧದಲ್ಲಿ ವಿಧಾನಸಭೆಯ ಚಳಿಗಾಲದ ಕಲಾಪಗಳು ನಡೆಯುತ್ತವೆ. ಹೀಗಾಗಿ, ಬೆಳಗಾವಿ ರಾಜಕೀಯವಾಗಿಯೂ ಮಹತ್ವವನ್ನು ಪಡೆದುಕೊಂಡಿದೆ.

ಬೆಳಗಾವಿ ಕ್ಷೇತ್ರದ ರಾಜಕೀಯ ಚರಿತ್ರೆ

ಬೆಳಗಾಗಿ ಗ್ರಾಮೀಣ ಕ್ಷೇತ್ರವು 1967ರಿಂದ ಅಸ್ತಿತ್ವದಲ್ಲಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌, ಜನತಾ ಪರಿವಾರ, ಜನತಾದಳ ಹಾಗೂ ಬಿಜೆಪಿ ಪಕ್ಷಗಳ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರಸ್ತುತ ಬೆಳಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳ ನಡುವೆ ನೇರ ಹಣಾಹಣಿ ಇದೆ. 2008 ಹಾಗೂ 2013 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸಂಜಯ್‌ ಪಾಟೀಲ್‌ ಅವರು ಗೆಲುವು ಸಾಧಿಸಿದ್ದರು. 2008 ರಲ್ಲಿ ಕಾಂಗ್ರೆಸ್‌ನ ಚನ್ನಬಸಪ್ಪ ಮಾಳಗಿ ಹಾಗೂ 2013 ರಲ್ಲಿ ಕಲ್ಲಪ್ಪ ಕನೇಕರ್‌ ಅವರು ಸಂಜಯ್‌ ಪಾಟೀಲ್‌ ವಿರುದ್ಧ ಸೋಲು ಅನುಭವಿಸಿದ್ದರು.

2018ರಲ್ಲಿ ಬದಲಾದ ಚಿತ್ರಣ

ಸತತ ಎರಡು ಬಾರಿ ಗೆದ್ದು ಬೀಗಿದ್ದ ಸಂಜಯ್‌ ಪಾಟೀಲ್‌ ಅವರು 2018ರಲ್ಲಿ ಪರಾಭವಗೊಂಡರು. ಕಾಂಗ್ರೆಸ್‌ನ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಸಂಜಯ್‌ ಪಾಟೀಲ್‌ ವಿರುದ್ಧ 51,724 ಮತಗಳ ಅಂತರದಿಂದ ಗೆದ್ದು, ಅಭೂತಪೂರ್ವ ಗೆಲುವು ದಾಖಲಿಸಿದರು. ಈ ಗೆಲುವಿನಿಂದಲೇ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ರಾಜ್ಯ ರಾಜಕಾರಣದಲ್ಲಿ ಪ್ರಭಾವಿಯಾಗಿ ಬೆಳೆದರು. ಈಗ ಅವರ ತಮ್ಮನೂ ಕಾಂಗ್ರೆಸ್‌ನಿಂದ ಎಂಎಲ್‌ಸಿ ಆಗಿದ್ದಾರೆ.

ರಮೇಶ್‌ ಜಾರಕಿಹೊಳಿ ವಿರುದ್ಧ ‘ಲಕ್ಷ್ಮೀ’ ಸಂಘರ್ಷ

ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ರಮೇಶ್‌ ಜಾರಕಿಹೊಳಿ ಅವರು ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ರಾಜಕೀಯ ಗುರುವೆಂದೇ ಹೇಳಲಾಗುತ್ತದೆ. ಆದರೆ, 2018ರ ನಂತರ ಲಕ್ಷ್ಮೀ ಹೆಬ್ಬಾಳ್ಕರ್‌ ಅವರೊಂದಿಗೆ ರಮೇಶ್‌ ಜಾರಕಿಹೊಳಿ ಅಸಮಾಧಾನ ಬೆಳೆಸಿಕೊಂಡರು. ಪಿಎಲ್‌ಡಿ ಬ್ಯಾಂಕ್‌ ವಿಚಾರವಾಗಿ ಭುಗಿಲೆದ್ದ ಅಸಮಾಧಾನ ಮುಂದಿನ ದಿನಗಳಲ್ಲಿ ಅಕ್ಷರಶಃ ಸಂಘರ್ಷವಾಗಿ ಮಾರ್ಪಟ್ಟಿತು. ರಮೇಶ್‌ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಗೊಂಡರು.

ಲಕ್ಷ್ಮೀ ಹೆಬ್ಬಾಳ್ಕರ್‌ಗೆ ‘ವಿಷಕನ್ಯೆ’ ಎಂದ ರಮೇಶ್‌ ಜಾರಕಿಹೊಳಿ

ಕಳೆದ ವರ್ಷ ಸಿಡಿ ಪ್ರಕರಣದಲ್ಲಿ ರಮೇಶ್‌ ಜಾರಕಿಹೊಳಿ ಸಿಕ್ಕುಹಾಕಿಕೊಂಡರು. ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ರಮೇಶ್‌ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ರಮೇಶ್‌ ಜಾರಕಿಹೊಳಿ ಸಂಘರ್ಷ ಸಾರಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ‘ವಿಷಕನ್ಯೆ’ ಎಂದು ರಮೇಶ್‌ ಜಾರಕಿಹೊಳಿ ತಿಳಿಸಿದ್ದಾರೆ. ಅವರನ್ನು ಸೋಲಿಸುವುದಾಗಿಯೂ ಪ್ರತಿಜ್ಞೆ ಮಾಡಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಆಕಾಂಕ್ಷಿಗಳು

ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ. ಹೀಗಾಗಿ, ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರೇ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಇನ್ನು ಬಿಜೆಪಿಯಿಂದ ಮಾಜಿ ಶಾಸಕ ಸಂಜಯ್‌ ಪಾಟೀಲ್‌ ಅವರು ಕಣಕ್ಕಿಳಿಯುವುದು ಸಹ ಬಹುತೇಕ ಖಚಿತವಾಗಿದೆ. ಈ ಇಬ್ಬರೂ ನಾಯಕರು ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸೋನು ನಿಗಮ್ ಮೇಲೆ ಶಾಸಕನ ಪುತ್ರನಿಂದ ಹಲ್ಲೆ!

Tue Feb 21 , 2023
ಮುಂಬೈ,ಫೆ.21-ಬಾಲಿವುಡ್‍ನ ಖ್ಯಾತ ಗಾಯಕ ಸೋನು ನಿಗಮ್ ಅವರ ಮೇಲೆ ಶಾಸಕನ ಪುತ್ರನೊಬ್ಬ ಹಲ್ಲೆ ನಡೆಸಿರುವ ಪ್ರಕರಣ ಮುಂಬೈನಲ್ಲಿ ನಡೆದಿದೆ. ಚೆಂಬೂರಿನಲ್ಲಿ ನಡೆಯುತ್ತಿದ್ದ ಸಂಗಿತೋತ್ಸವ ಮುಗಿಸಿ ವೇದಿಕೆಯಿಂದ ಕೆಳಗಿಳಿಯುತ್ತಿದ್ದಾಗ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದ ಸಮಯದಲ್ಲಿ ಸೋನು ನಿಗಮ್ ಅವರ ಮೇಲೆ ಸ್ವಪ್ನಿಲ್ ಫಾಟರ್‍ಪೇಕರ್ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸೋನು ನಿಗಮ್ ಅವರ ಅಪ್ತ ಸಹಾಯಕರೊಬ್ಬರಿಗೂ ತೀವ್ರ ಪೆಟ್ಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನನ್ನೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದಾಗ […]

Advertisement

Wordpress Social Share Plugin powered by Ultimatelysocial