ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸನ್ನಧರಾಗಬೇಕು-ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ: ಸತತವಾಗಿ ಸುರಿಯುತ್ತಿರುವ ಮಳೆಯಿಂದ ನದಿಗಳಲ್ಲಿ ಪ್ರವಾಹ ಹೆಚ್ಚಾಗುವ ಸಂಭವವಿದ್ದು, ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸನ್ನಧರಾಗಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಶನಿವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ಸಂಭವನೀಯ ಪ್ರವಾಹ ಕುರಿತು ಕರೇದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪಶ್ಚಿಮ ಘಟ್ಟಪ್ರದೇಶದಲ್ಲಿ ಬಾರಿ ಮಳೆಯಾಗುತ್ತಿದ್ದು, ಅಧಿಕಾರಿಗಳು ಹಿಡಿಕಲ್ ಜಲಾಶಯ ನೀರಿನ ಮಟ್ಟವನ್ನು ಅರಿತು ಪ್ರವಾಹ ಪರಿಸ್ಥಿಯನ್ನು ಎದುರಿಸಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.

ಮಳೆಗಾಲದಲ್ಲಿ ಬಿಳುವ ವಿದ್ಯುತ್ ಕಂಬಗಳನ್ನು ತಕ್ಷಣ ದುರಸ್ಥಿ ಗೋಳಿಸಿ ಹೆಸ್ಕಾಂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ನದಿ ತೀರದ ವಾಸಿಸುವ ರೈತರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಬೇಕು. ನದಿ ತೀರದ ಪ್ರದೇಶಗಳಲ್ಲಿ ಸತತ ನಿಗಾ ವಹಿಸಬೇಕು ಎಂದು ಸೂಚಿಸಿದರು.

ಪೊಲೀಸ್ ಇಲಾಖೆ ಅಧಿಕಾರಿಗಳು ಇತರ ಇಲಾಖೆಗಳೊಂದಿಗೆ ಸಹಕಾರ ನೀಡಿ ಕಾರ್ಯಪ್ರವೃತ್ತವಾಗಬೇಕು. ಅಗ್ನಿಶಾಮಕ ದಳದವರು ತಮ್ಮ ಎಸ್.ಡಿ.ಆರ್.ಎಫ್. ತಂಡದೊದಿಗೆ ಸಂಪರ್ಕ ಸಾಧಿಸಿ ಪರಸ್ಪರ ಹೊಂದಾಣಿಕೆಯಿದ ಕಾರ್ಯ ನಿರ್ವಹಿಸಬೇಕು ಎಂದ ಅವರು ನಗರದಲ್ಲಿ ನಿರ್ಮಿಸಲಾಗುತ್ತಿರುವ ಪೂಟಪಾಥ್ ಕಾಮಗಾರಿಯನ್ನು ಬೇಗನೆ ಮುಗಿಸಬೇಕು. ಈ ವರೆಗೆ ಯಾರು ಸಹಕಾರ ನೀಡಿಲ್ಲ ಅವರಿಗೆ ಖಡಕ್ ಎಚ್ಚರಿಕೆ ನೀಡಿ ತಕ್ಷಣ ಕಾರ್ಯಮಾಡಬೇಕು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskann

Please follow and like us:

Leave a Reply

Your email address will not be published. Required fields are marked *

Next Post

ಪ್ರಿಯಾಂಕ್ ಖರ್ಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Sat Jul 9 , 2022
ಬೆಂಗಳೂರು: ರಾಜ್ಯ ಸರ್ಕಾರ ಪಿಎಸ್‌ಐ ನೇಮಕಾತಿ ಪ್ರಕರಣವನ್ನು   ನ್ಯಾಯಾಂಗ ತನಿಖೆಗೆ ವಹಿಸೋದಕ್ಕೆ ಹೆದರುತ್ತಿದೆ. ಈ ಹಗರಣದಲ್ಲಿ ನಿಮ್ಮ ಪಾಲು ಇಲ್ಲವೆಂದ್ರೇ ಯಾಕೆ ನ್ಯಾಯಾಂಗ ತನಿಖೆಗೆ ನೀಡೋದಕ್ಕೆ ಹೆದರಬೇಕು ಎಂಬುದಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಪಿಎಸ್‌ಐ ನೇಮಕಾತಿ ಅಕ್ರಮದ ಕುರಿತು ಕಾಂಗ್ರೆಸ್ ಬಳಿ ಯಾವ ಸಾಕ್ಷ್ಟಾಧಾರಗಳಿವೆ ಎಂದು ಬಿಜೆಪಿ ಕೇಳಿರುವ ಬಗ್ಗೆ ಮಾಧ್ಯಮಗಳು ಪ್ರಶ್ನೆ ಮಾಡಿದಾಗ, […]

Advertisement

Wordpress Social Share Plugin powered by Ultimatelysocial