ಆರ್ ಟಿ ನಗರದಲ್ಲಿರುವ ಬೊಮ್ಮಾಯಿ ನಿವಾಸದಲ್ಲಿ ಭೇಟಿಯಾದ ರಮೇಶ್ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ.

ಬೆಂಗಳೂರು: ವಿಜಯನಗರದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಬಿಜೆಪಿ ಕಾರ್ಯಕಾರಣಿ ಆರಂಭವಾಗುವುದಕ್ಕೆ ಮುನ್ನವೇ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕಾರ್ಯಕಾರಿಣಿಗೆ ತೆರಳುವ ಮುನ್ನ ಆರ್ ಟಿ ನಗರದಲ್ಲಿರುವ ಬೊಮ್ಮಾಯಿ ನಿವಾಸದಲ್ಲಿ ಭೇಟಿಯಾದ ರಮೇಶ್ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ. ಸಚಿವ ಸ್ಥಾನದ ರೇಸ್ ನಲ್ಲಿ ‌ಇರುವ ರಮೇಶ್ ಜಾರಕಿಹೊಳಿ ಈ ಸಂಬಂಧ ಮಾತುಕತೆ ನಡೆಸಿದ್ದಾರೆಯೋ ಅಥವಾ ರಾಜಕೀಯ ಸಂಬಂಧಿ ಚರ್ಚೆ ನಡೆದಿದೆಯೋ ಎಂಬುದು ಬಹಿರಂಗಗೊಂಡಿಲ್ಲ.

ರಾಜ್ಯ ಸರಕಾರದ ವಿರುದ್ಧ 40% ಕಮಿಷನ್ ಆರೋಪ‌ ಮಾಡಿರುವ ಕಾಂಗ್ರೆಸ್ ವಿರುದ್ಧ ರಮೇಶ್ ಜಾರಕಿಹೊಳಿ ಮಹತ್ವದ ದಾಖಲೆ ಬಿಡುಗಡೆ ಮಾಡುವ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಅವರು ಸಿಎಂ‌ ಬೊಮ್ಮಾಯಿ ಜತೆ ಚರ್ಚೆ ನಡೆಸಿರಬಹುದು ಎಂದು ಹೇಳಲಾಗುತ್ತಿದೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡಾ ಈ ಬಳಿಕ ಸಿಎಂ‌ ಬೊಮ್ಮಾಯಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜೆಡಿಎಸ್ ಜನತಾ ಜಲಧಾರೆ ಯಾತ್ರೆ ಆರಂಭ:

Sat Apr 16 , 2022
ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಜಾರಿಗಾಗಿ ಜಾತ್ಯತೀತ ಜನತಾದಳ ಹಮ್ಮಿಕೊಂಡಿರುವ ಜನತಾ ಜಲಧಾರೆ ರಥಯಾತ್ರೆಗೆ ಇಂದು ಚಾಲನೆ ದೊರೆತಿದೆ. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಲಮಟ್ಟಿಯಲ್ಲಿ ಪವಿತ್ರ ಜಲವನ್ನು ಕಲಶಕ್ಕೆ ತುಂಬುವ ಮೂಲಕ ಯಾತ್ರೆಗೆ ಚಾಲನೆ ನೀಡಿದ್ದಾರೆ. ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಮಂಡ್ಯದ ಕೆ ಆರ್ ಎಸ್ ಜಲಾಶಯದ ಬಳಿ ಪೂಜೆ ಮಾಡುವ ಮೂಲಕ ಜನತಾ ಜಲಧಾರೆಗೆ ಚಾಲನೆ ನೀಡಿದರು. ಈ ಯಾತ್ರೆಯಲ್ಲಿ ರಾಜ್ಯದ 15 […]

Advertisement

Wordpress Social Share Plugin powered by Ultimatelysocial