ರಮೇಶ್ ಕುಮಾರ್ ಅವರ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಸದನದಲ್ಲಿ ರಮೇಶ್ ಕುಮಾರ್​​ ಅವರಂತಹ ಹಿರಿಯರು ಆ ರೀತಿ ಹೇಳಬಾರದಾಗಿತ್ತು. ಅವರು ಯಾಕೆ ಹೇಳಿದ್ರು ಅಂತ ಅರ್ಥ ಆಗಲಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.ನಗದರಲ್ಲಿಂದು ಮಾತನಾಡಿದ ಅವರು, ಈ ರೀತಿ ಶಬ್ದ ಪ್ರಯೋಗ ಅಥವಾ ಮಹಿಳೆಯರ ಬಗ್ಗೆ ಮಾತನಾಡೋದು ಸರಿ ಅಲ್ಲ. ರಮೇಶ್ ಕುಮಾರ್ ಈ ಬಗ್ಗೆ ಸ್ಪಷ್ಟಿಕರಣ ಕೊಡಬೇಕು. ನಿನ್ನೆಯೇ ಆ ಬಗ್ಗೆ ಕ್ಷಮೆ ಕೇಳಬೇಕಿತ್ತು, ಇವತ್ತು ಕೇಳಿದ್ದಾರೆ.ಒಳ್ಳೆ ರೀತಿಯ ಸಂಸದೀಯ ಪಟು ಆಗಿದ್ದವರ ನಡುವಳಿಕೆ ಇದಲ್ಲ. ಅವರು ಒಬ್ಬ ಸ್ಪೀಕರ್ ಆಗಿ ಕೆಲಸ ಮಾಡಿದವರು. ಮಾತನಾಡುವಾಗ ಬಹಳಷ್ಟು ಯೋಚಿಸಿ ಮತನಾಡಬೇಕಿತ್ತು ಎಂದರು.ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಜಗದೀಶ್ ಶೆಟ್ಟರ್ ಮಾತನಾಡಿ, ನಾವು ಸರ್ಕಾರ ನಡೆಸೋಕೆ, ಉತ್ತರ ಕೊಡೋಕೆ ಸಿದ್ಧವಾಗಿರ್ತೀವಿ. ಸ್ಪಷ್ಟವಾಗಿ ಅವರು ಯಾವುದನ್ನ ಮಂಡಿಸಬೇಕು ಅನ್ನೋದನ್ನ ಅರ್ಥ ಮಾಡಿಕೊಳ್ಳಬೇಕು. ಸದನದಲ್ಲಿ ಧರಣಿ ಮಾಡುವುದು, ಬಾಯ್ಕಾಟ್ ಮಾಡೋದು, ಬೀದಿಲಿ ಪ್ರತಿಭಟನೆ ಮಾಡೋದೆಲ್ಲ ಕಾಂಗ್ರೆಸ್​​ನ ರಾಜಕೀಯ ಗಿಮಿಕ್.ಈ ಭಾಗದ ಅಭಿವೃದ್ಧಿ ಬಗ್ಗೆ ಕಾಳಜಿ ಇದ್ದರೆ ಸರ್ಕಾರಕ್ಕೆ ಸಲಹೆ ನೀಡಲಿ. ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಆದರೆ ಅದಕ್ಕೆ ಯಾವುದೇ ಆಧಾರ ಇಲ್ಲ. ಸರಿಯಾಗಿ ಸದನ ನಡೆಯದೇ ಇರೋದಕ್ಕೆ ಕಾಂಗ್ರೆಸ್ಸಿಗರ ಅಸಹಕಾರ ಕಾರಣ ಎಂದು ವಾಗ್ದಾಳಿ ನಡೆಸಿದರು.

ರಮೇಶ್​ ಕುಮಾರ್​ಮತಾಂತರ ನಿಷೇಧ ಕಾಯ್ದೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸ್ವಯಂಪ್ರೇರಿತ ಮತಾಂತರಕ್ಕೆ ಯಾವುದೇ ನಿರ್ಬಂಧ ಇಲ್ಲ. ಆದರೆ ಬಲವಂತವಾಗಿ ಇವತ್ತು ಮತಾಂತರ ನಡೆಯುತ್ತಿದೆ‌. ಆಸೆ, ಆಮಿಷ ಒಡ್ಡಿ ಮತಾಂತರ ಮಾಡುವುದಕ್ಕೆ ನಮ್ಮ ತಡೆ ಇದೆ.ಯಾವುದೇ ಸಮುದಾಯ ಇರಲಿ ಮತಾಂತರ ನಿಷೇಧ ಕಾಯ್ದೆ ಕಾಂಗ್ರೆಸ್​​​ಗೆ ಯಾಕೆ ಅನ್ವಯವಾಗುತ್ತೆ. ಬಿಲ್​​ನಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಮಾತ್ರ ಅಂತ ಇರೋದಿಲ್ಲ. ನೀವು ತಪ್ಪು ಮಾಡದಿದ್ದರೆ ಹೆದರುವ ಪ್ರಶ್ನೆಯೇ ಇಲ್ಲ ಎಂದರು.ಮಹಾದಾಯಿ ವಿಚಾರದಲ್ಲಿ ಕೆಲ ಕಾನೂನು ತೊಡಕಿದೆ. ಕೋರ್ಟ್​ನಲ್ಲಿ ಕೇಸ್ ಪೆಂಡಿಂಗ್ ಇದೆ, ಸರ್ಕಾರದ ಹಂತದಲ್ಲಿ ಬಗೆಹರಿಸಬೇಕಾಗುತ್ತೆ. ನ್ಯಾಯಾಲಯದಲ್ಲಿ ನಮಗೆ ಮಹದಾಯಿ ನೀರಿನ ಬಗ್ಗೆ ಹಕ್ಕಿದೆ ಅನ್ನೋ ತೀರ್ಪು ಬಂದಿದೆ. ನಮಗೆ ಬರಬೇಕಾದ ನೀರು ನಮಗೆ ಬರೋದು ನಿಶ್ಚಿತ ಎಂದು ಶೆಟ್ಟರ್ ಭರವಸೆ ನೀಡಿದರು.

Please follow and like us:

Leave a Reply

Your email address will not be published. Required fields are marked *

Next Post

ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶ ಅಡಗಿದೆ:ಸಿದ್ದರಾಮಯ್ಯ ಆರೋಪ

Sat Dec 18 , 2021
ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶ ಅಡಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ ತೀರ್ಮಾನ ವಿರೋಧಿಸಿ ಭಾರತೀಯ ಕ್ರೆöÊಸ್ತ ಒಕ್ಕೂಟ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಯಿದೆ ತರುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು.ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯಿದೆ ಹಿಂದೆ ಜನರ ಹಿತವೇನೂ ಇಲ್ಲ. ದೇಶದ […]

Advertisement

Wordpress Social Share Plugin powered by Ultimatelysocial