ದೇಶವನ್ನುದ್ದೇಶಿಸಿ ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಭಾಷಣ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಸಂಜೆ 7 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದು, ರಾಷ್ಟ್ರಪತಿ ಸ್ಥಾನದಿಂದ ನಿರ್ಗಮಿಸಲಿರುವ ಹಿನ್ನೆಲೆಯಲ್ಲಿ ಇದು ಅವರ ವಿದಾಯದ ಭಾಷಣ ಎಂದು ಹೇಳಲಾಗಿದೆ.

ಅವರ ಭಾಷಣ ಆಲ್ ಇಂಡಿಯಾ ರೇಡಿಯೋ, ದೂರದರ್ಶನದ ಹಿಂದಿ ಹಾಗೂ ಇಂಗ್ಲಿಷ್ ಚಾನೆಲ್ ಗಳಲ್ಲಿ ಪ್ರಸಾರವಾಗಲಿದ್ದು, ದೂರದರ್ಶನದ ಪ್ರಾದೇಶಿಕ ಚಾನಲ್ ಗಳು ಸಹ ಸ್ಥಳೀಯ ಭಾಷೆಯಲ್ಲಿ ಭಾಷಣವನ್ನು ಪ್ರಸಾರ ಮಾಡಲಿವೆ.

ರಾಮನಾಥ್ ಕೋವಿಂದ್ ಇಂದು ನಿವೃತ್ತರಾಗಲಿದ್ದು, ದೇಶದ ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಸೋಮವಾರದಂದು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಎನ್ ಡಿ ಎ ಮೈತ್ರಿಕೂಟ ಬೆಂಬಲಿತ ಅಭ್ಯರ್ಥಿಯಾಗಿ ರಾಷ್ಟ್ರಪತಿ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ದ್ರೌಪದಿ ಮುರ್ಮು, ಯುಪಿಎ ಮೈತ್ರಿಕೂಟದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಪರಾಭವಗೊಳಿಸಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ದೇಶದ ಅತ್ಯುನ್ನತ ಹುದ್ದೆಯ್ದಾ ರಾಷ್ಟ್ರಧ್ಯಕ್ಷರಾಗಿ ದ್ರೌಪದಿ ಮುರ್ಮ ನಾಳೆ ಪ್ರಮಾಣ ವಚನ!

Sun Jul 24 , 2022
  ದ್ರೌಪದಿ ಮುರ್ಮ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್‍ನಲ್ಲಿ ಸೋಮವಾರ ಬೆಳಗ್ಗೆ 10.15ಕ್ಕೆ ಸಮಾರಂಭ ನಡೆಯಲಿದ್ದು, ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೂತನ ರಾಷ್ಟ್ರಾಧ್ಯಕ್ಷರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ರಾಷ್ಟ್ರಪತಿಯವರು 21 ಗನ್ ಸೆಲ್ಯೂಟ್ ಸ್ವೀಕರಿಸಿದ ಬಳಿಕ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಂತರ ಭಾಷಣ ಮಾಡಲಿದ್ದಾರೆ. ಸಮಾರಂಭಕ್ಕೂ ಮೊದಲು ನಿರ್ಗಮಿತ ಅಧ್ಯಕ್ಷರು ಮತ್ತು ನೂತನ ಅಧ್ಯಕ್ಷರು ವಿಧ್ಯುಕ್ತ ಮೆರವಣಿಗೆಯಲ್ಲಿ ಸಂಸತ್ತಿಗೆ […]

Advertisement

Wordpress Social Share Plugin powered by Ultimatelysocial