ಟ್ವಿಟ್‌ ಮಾಡಿ ಡಿಕೆಶಿಗೆ ‘ಡಿಚ್ಚಿಕೊಟ್ಟ’ ಮಾಜಿ ಸಂಸದೆ ರಮ್ಯಾ :

 

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಮತ್ತು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಭೇಟಿ ಮಾಡಿದ್ದಾರೆ ಅಂತ ಹೇಳಲಾಗುತ್ತಿದೆ, ಈ ನಡುವೆ ಹಗರಣಗಳ ಬಗ್ಗೆ ಯಾರೂ ಧ್ವನಿ ಎತ್ತಬಾರದು ಎಂಬ ಕಾರಣಕ್ಕೆ ಅಶ್ವತ್ಥ ನಾರಾಯಣ ಅವರು ಎಂಬಿ ಪಾಟೀಲ್ ಅವರನ್ನು ಭೇಟಿಯಾಗಿದ್ದಾರೆ ಅಂಥ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದರು.

ಈ ನಡುವೆ ಈ ಬಗ್ಗೆ ನಟಿ, ಮಾಜಿ ಸಂಸದೆ ರಮ್ಯಾ ಅವರು ಟ್ವಿಟ್‌ನಲ್ಲಿ ಎಂಬಿ ಪಾಟೀಲ್‌ ಪರ ಬ್ಯಾಟ್‌ ಬೀಸಿದ್ದು, ಡಿಕೆ ಶಿವಕುಮಾರ್‌ಗೆ ಚಾಟಿ ಬೀಸಿದ್ದಾರೆ.

ಹಾಗಾದ್ರೇ ರಮ್ಯಾ ಹೇಳಿರುವುದು ಏನು?

ಪಕ್ಷಾತೀತವಾಗಿ ಜನರು ಪರಸ್ಪರ ಭೇಟಿಯಾಗುತ್ತಾರೆ, ಸಮಾರಂಭಗಳಿಗೆ ಹೋಗುತ್ತಾರೆ, ಕೆಲವರು ಮದುವೆಯಾಗುವುದರ ಮೂಲಕ ಸಂಬಂಧ ಬೆಳಸುತ್ತಾರೆ, ಡಿಕೆ ಶಿವಕುಮಾರ್​​ ಅವರ ಹೇಳಿಕೆ ನನಗೆ ಆಶ್ವರ್ಯ ಮೂಡಿಸಿದೆ. ಡಿ.ಕೆ. ಶಿವಕುಮಾರ್‌ವರೇ ನಿಮಗೆ ಇದರ ಬಗ್ಗೆ ಹೀಗೆ ಹೇಳಬಯಸುತ್ತೇನೆ ಎಂಬಿಪಾಟೀಲ್ ಅವರು ನಿಷ್ಠಾವಂತ ಕಾಂಗ್ರೆಸ್ಸಿಗರು. ಪಕ್ಷವು ಒಂದು ಘಟಕವಾಗಿ ಚುನಾವಣೆಗಳನ್ನು ಎದುರಿಸಬೇಕಲ್ಲವೇ? ಅಂತ ಅವರು ಟಾಂಗ್ ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಚಿವ ಅಶ್ವಥ್ ನಾರಾಯಣಗೆ ʼಹುಷಾರ್‌ʼ ಎಂದು ಎಚ್ಚರಿಕೆ ಕೊಟ್ಟ ಎಚ್‌ಡಿಕೆ!

Thu May 12 , 2022
  ಬೆಂಗಳೂರು, ಮೇ 11: “ತಾಕತ್ತು ಇದ್ದರೆ ಸಚಿವ ಡಾ.ಅಶ್ವಥ್ ನಾರಾಯಣ ಅವರು ನನ್ನ ವಿರುದ್ಧ ದಾಖಲೆ ಬಿಡುಗಡೆ ಮಾಡಲಿ”ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಸವಾಲು ಎಸೆದರು. ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ʼಜನತಾ ಜಲಧಾರೆʼ ಕಾರ್ಯಕ್ರಮದ ವೇಳೆ ಗವಿಗಂಗಾಧರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಕುಮಾರಸ್ವಾಮಿ, ಧರ್ಮದ ಹೆಸರಿನಲ್ಲಿ ಜನಾ ದಾರಿ ತಪ್ಪಿಸಲಾಗುತ್ತಿದೆ. ನಿಮಗೆ ಧರ್ಮ ಬೇಕಾ? ಜೀವನ […]

Advertisement

Wordpress Social Share Plugin powered by Ultimatelysocial