ರಮ್ಯಾ ಸಿನಿಮಾಗೆ ಸಂಕಷ್ಟ – ಸ್ವಾತಿ ಮುತ್ತಿನ ಮಳೆ ಹನಿಯೇ ಟೈಟಲ್ ಇಲ್ಲ

 

ಬಹಳ ವರ್ಷಗಳ ಬಳಿಕ ಸ್ಯಾಂಡಲ್ವುಡ್‌ ಕ್ವೀನ್‌ ರಮ್ಯಾ ಮತ್ತೆ ಚಂದನವನಕ್ಕೆ ಕಮ್‌ ಬ್ಯಾಕ್‌ ಮಾಡಿದ್ದಾರೆ. ತಮ್ಮದೇ ಒಂದು ಹೊಸ ನಿರ್ಮಾಣ ಸಂಸ್ಥೆ ಮೂಲಕ ಕನ್ನಡ ಚಿತ್ರರಂಗಕ್ಕೆ ಒಂದೊಳ್ಳೆ ಚಿತ್ರ ನೀಡೋದಕ್ಕೆ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಆ ಚಿತ್ರದ ಹೆಸರನ್ನ ಕೂಡ ಅನೌನ್ಸ್‌ ಮಾಡಿದ್ದರು.

ಕಳೆದ ಅ.5ರಂದು ರಮ್ಯಾ ತಮ್ಮ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ಸಂಸ್ಥೆಯಡಿ ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿರುವುದರ ಬಗ್ಗೆ ಘೋಷಿಸಿದ್ದರು. ಈ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ್ದಾರೆ.

ಆದರೆ ಈಗ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಇದೀಗ ಟೈಟಲ್ ಸಂಕಷ್ಟ ಎದುರಾಗಿದೆ. ಈ ಸಂಬಂಧ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್ ಬಾಬು ತಮ್ಮ ವಕೀಲರ ಮೂಲಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೋಟಿಸ್ ಕಳುಹಿಸಿದ್ದಾರೆ.

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಶೀರ್ಷಿಕೆಯನ್ನು ಬಳಸಕೂಡದು ಎಂದು ಎಸ್.ವಿ.ರಾಜೇಂದ್ರಸಿಂಗ್ ಬಾಬು ಆಗ್ರಹಿಸಿದ್ದಾರೆ.

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಶೀರ್ಷಿಕೆಯು ರಾಜೇಂದ್ರಸಿಂಗ್ ಬಾಬು ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ನಾಯಕನ ಬಂಧನ – ಮೋದಿ ಕೊಲ್ಲಲು ರೆಡಿಯಾಗಿರಿ ಎಂದಿದ್ದ ಲೀಡರ್

Tue Dec 13 , 2022
ಮಾಜಿ ಸಚಿವ, ಕಾಂಗ್ರೆಸ್‌ ಲೀಡರ್‌, ರಾಜಾ ಪಟೇರಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಪವಾಯಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡುವ ವೇಳೆ ಸಂವಿಧಾನವನ್ನು ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ರಾಜಾ ಪಟೇರಿಯಾ ವಿವಾದ ಸೃಷ್ಟಿಸಿದ್ದರು. ಈ ಹೇಳಿಕೆ ಬೆನ್ನಲ್ಲೇ ವಿಶೇಷ ಪೊಲೀಸ್ ತಂಡ ದಾಮೋಹ್ ಜಿಲ್ಲೆಯ ಹಟಾ ಪಟ್ಟಣದಲ್ಲಿರುವ ಪಟೇರಿಯಾ ಅವರ ನಿವಾಸಕ್ಕೆ ಹೋಗಿ ಅವರನ್ನು ಬಂಧಿಸಿದೆ. ಇನ್ನು ಹೇಳಿಕೆಗೆ ಸಂಬಂಧಪಟ್ಟಂತೆ  ರಾಜ್ಯ ಕಾಂಗ್ರೆಸ್‌ ನಾಯಕರು, ಪಟೇರಿಯಾ ಹೇಳಿಕೆಗೂ ನಮಗೂ […]

Advertisement

Wordpress Social Share Plugin powered by Ultimatelysocial