ಅಂತಿಮ ಹಂತದ ಚಿತ್ರೀಕರಣ ಮುಗಿಸಿದ ‘ರಂಗಸಮುದ್ರ’

ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ ಹಿರಿಯ ಛಾಯಾಗ್ರಾಹಕ ಗಿರಿ ಚಿತ್ರೀಕರಿಸಿಕೊಂಡರು.

ರಂಗಾಯಣ ರಘು, ಸಂಪತ್ ರಾಜ್,ಕರಾವಳಿಯ ಕೆವಿಆರ್ ಮತ್ತು ದಿವ್ಯಾ ಗೌಡ, ಗುರುರಾಜ್ ಹೊಸಕೋಟೆ ಮೋಹನ್ ಜುನೇಜ, ಮೂಗು ಸುರೇಶ್, ಉಗ್ರಂ ಮಂಜು, ಸ್ಕಂದ ತೇಜಸ್, ಡ್ರಾಮಾ ಜ್ಯೂನಿಯರ್ ಮಹೇಂದ್ರ ಮತ್ತಿತರರು ಚಿತ್ರದ ಭೂಮಿಕೆಯಲ್ಲಿದ್ದಾರೆ. ಚಿತ್ರದ ಪ್ರಮುಖ ದೃಶ್ಯಕ್ಕೆ ಅಂತಿಮ ಹಂತದ ಚಿತ್ರೀಕರಣ ಕಳೆದ ಅಕ್ಟೋಬರ್ ನಲ್ಲಿ ನಡೆಯ ಬೇಕಿತ್ತು. ಇದಕ್ಕಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರನ್ನು ಚಿತ್ರತಂಡ ಸಂಪರ್ಕಿಸಿತ್ತು. ಆದರೆ ವಿಧಿ ಅವರನ್ನು ಹಠಾತ್ ಸೆಳೆದೊಯ್ದಿತ್ತು. ಈ ಘಟನೆಯಿಂದ ಚಿತ್ರತಂಡ ಶಾಕ್ ಗೆ ಒಳಗಾಗಿತ್ತು. ಇದೀಗ ಇನ್ನೊಬ್ಬರು ಸ್ಟಾರ್ ನಟರು ಆ ದೃಶ್ಯದಲ್ಲಿ ನಟಿಸಿದ್ದಾರೆ.

ಸಧ್ಯಕ್ಕೆ ಅವರ ವಿವರಗಳನ್ನು ಸಸ್ಪೆನ್ಸ್ ಆಗಿ ಇಡಲಾಗಿದೆ. ಈ ವಿವರಗಳನ್ನು ಚಿತ್ರತಂಡ ಮುಂದಿನ ದಿನಗಳಲ್ಲಿ ಹಂಚಿಕೊಳ್ಳಲಿದೆ. ಚಿತ್ರಕ್ಕೆ ದೇಸೀ ಮೋಹನ್ ಸಂಗೀತ ನೀಡಿದ್ದಾರೆ. ಸಂಕಲನ ಶ್ರೀಕಾಂತ್, ವಾಗೀಶ್ ಚನ್ನಗಿರಿ ಗೀತ ಸಾಹಿತ್ಯ ನೀಡಿದ್ದಾರೆ. ಚಿತ್ರದ ಹಾಡುಗಳಿಗೆ ಖ್ಯಾತ ಗಾಯಕರಾದ ಕೈಲಾಶ್ ಖೇರ್, ಕೀರವಾಣಿ, ವಿಜಯ್ ಪ್ರಕಾಶ್, ಸಂಜಿತ್ ಹೆಗ್ಡೆ ಧ್ವನಿಯಾಗಿದ್ದಾರೆ. ಶೀಘ್ರದಲ್ಲಿಯೇ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಕೆ ಆರ್ ಹೊಯ್ಸಳ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಆಗಸ್ಟ್ 5 ರಿಂದ 15 ರವರೆಗೂ ನಡೆಯಲಿದೆ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ.

Thu Jul 21 , 2022
ಡಾ||ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತ ವಿಶೇಷ ಫಲಪುಷ್ಪ ಪ್ರದರ್ಶನಕ್ಕೆ ಡಾ|ರಾಜ್ ಕುಟುಂಬದವರಿಂದ ಸೂಕ್ತ ಸಲಹೆ.ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಲಾಲ್ ಬಾಗ್ ನಲ್ಲಿ ಆಗಸ್ಟ್ 5 ರಿಂದ 15 ರವರೆಗೂ ನಡೆಯಲಿದೆ. ಈ ಬಾರಿ ಕರ್ನಾಟಕ ರತ್ನ ಡಾ. ರಾಜಕುಮಾರ್ ಹಾಗೂ ಡಾ. ಪುನೀತ್ ರಾಜಕುಮಾರ್ ರವರ ವಿಷಯಾಧಾರಿತ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 5ರಂದು ಫಲಪುಷ್ಪ ಪ್ರದರ್ಶನವು ಉದ್ಘಾಟನೆಗೊಳ್ಳಲಿದ್ದು ಖ್ಯಾತ ಚಿತ್ರನಟರಾದ, ಡಾ.ಶಿವರಾಜಕುಮಾರ್ ರಾಘವೇಂದ್ರ ರಾಜಕುಮಾರ್ […]

Advertisement

Wordpress Social Share Plugin powered by Ultimatelysocial