ಒಂದೂವರೆ ವರ್ಷದ ಮಗು ಮೇಲೆ ಅತ್ಯಾಚಾರ ಎಸಗಿದ 40 ವರ್ಷದ ವ್ಯಕ್ತಿ!

 

ಫರಿದಾಬಾದ್ : ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಮಗುವಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿಯನ್ನು ಉತ್ತರ ಪ್ರದೇಶದ ನಿವಾಸಿ ದೇಶರಾಜ್ ಎಂದು ಗುರುತಿಸಲಾಗಿದೆ. ಬಲ್ಲಬ್ಗಢ್‌ನಲ್ಲಿರುವ ಶಾಹಪುರ್ ಗ್ರಾಮದಲ್ಲಿ ಬಾಲಕಿಯ ಪಕ್ಕದ ಮನೆಯಲ್ಲಿಯೇ ಆರೋಪಿ ವಾಸಿಸುತ್ತಿದ್ದ. ಬಾಲಕಿಯ ತಾಯಿ ಮತ್ತೊಂದು ಮನೆಗೆ ಕೆಲಸಕ್ಕೆ ತೆರಳುತ್ತಿದ್ದರು. ತಂದೆ ಫ್ಯಾಕ್ಟರಿಯೊಂದರಲ್ಲಿ ಕೆಲಸಕ್ಕಿದ್ದರು.

ಸಂತ್ರಸ್ತೆಯ ತಾಯಿ ಪ್ರಕಾರ, ಕೆಲಸದಿಂದ ತಾಯಿ ಮನೆಗೆ ಹಿಂದಿರುಗಿದಾಗ ಆರೋಪಿಯು ಬಾಲಕಿಗೆ ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ. ಕೂಡಲೇ ಸಹಾಯಕ್ಕಾಗಿ ನೆರೆಹೊರೆಯವರನ್ನು ಕೂಗಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ ʼಜೆಡಿಎಸ್ ಜ್ವರʼ

Mon Apr 18 , 2022
ಬೆಂಗಳೂರು ಏಪ್ರಿಲ್ 18: ಸುಳ್ಳುಶೂರ, ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ ʼಜೆಡಿಎಸ್ ಜ್ವರʼ ಬಂದುಬಿಟ್ಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ದಾಳಿ ವಾಗ್ದಾಳಿ ಮಾಡಿದ್ದಾರೆ. ಹಾಸನದಲ್ಲಿ ವೃಥಾ ಹರಿಬಿಟ್ಟ ʼಸತ್ಯಭಕ್ಷʼ ನಾಯಕನ ಆಚಾರಹೀನ ಅರಿವುಗೆಟ್ಟ ನಾಲಗೆ ಮತ್ತೆ ಹುಚ್ಚುಕುಣಿತ ಮಾಡುತ್ತಿದೆ. ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರವೇ ಇಲ್ಲ, ಮತ್ತೆಮತ್ತೆ ಕೆಣಕುವ ದುಸ್ಸಾಹಸ ಬೇರೆ. […]

Advertisement

Wordpress Social Share Plugin powered by Ultimatelysocial