30 ವರ್ಷದ ಮಹಿಳೆಯ ಮೇಲೆ ಐವರು ಅತ್ಯಾಚಾರ!

ಶಹಜಹಾನ್‌ಪುರ (ಉತ್ತರಪ್ರದೇಶ): ಉತ್ತರಪ್ರದೇಶದ ಶಹಜಹಾನ್‌ಪುರದಲ್ಲಿ 30 ವರ್ಷದ ಮಹಿಳೆಯ ಮೇಲೆ ಐವರು ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಅತ್ಯಾಚಾರಿಗಳು ಕೃತ್ಯವನ್ನು ಚಿತ್ರೀಕರಿಸಿ ವೀಡಿಯೊವನ್ನು ವೈರಲ್ ಮಾಡಿದ್ದಾರೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ.

ಎಪ್ರಿಲ್ 22 ರಂದು ಐವರು ತನ್ನನ್ನು ತನ್ನ ಮನೆಯ ಹೊರಗಿನ ಗುಡಿಸಲಿಗೆ ಎಳೆದೊಯ್ದು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಶನಿವಾರದಂದು ಸಾಮೂಹಿಕ ಅತ್ಯಾಚಾರದ ಕುರಿತು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ನಗರ) ಸಂಜಯ್ ಕುಮಾರ್ ಹೇಳಿದರು.

ಆರೋಪಿಗಳು ಈ ಕೃತ್ಯವನ್ನು ಚಿತ್ರೀಕರಿಸಿದ್ದಾರೆ ಹಾಗೂ ಘಟನೆಯ ಒಂದು ವಾರದ ನಂತರ ವೀಡಿಯೊವನ್ನು ವೈರಲ್ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಆರೋಪಿಗಳು ಪರಾರಿಯಾಗಿದ್ದು ಅವರನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಎಎಸ್ಪಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಷ್ಯಾ-ಉಕ್ರೇನ್ ಯುದ್ಧದ್ದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್ ಗೆ ಭೇಟಿ

Sun May 1 , 2022
  ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧದ್ದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್ ಗೆ ಭೇಟಿ ನೀಡುತ್ತಿದ್ದು, ತಮ್ಮ ಭೇಟಿಯಿಂದ ಯುರೋಪಿಯನ್ ರಾಷ್ಟ್ರಗಳು ಮತ್ತು ಭಾರತದೊಂದಿಗೆ ಸಹಕಾರ ಬಲವರ್ಧನೆಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ . ಜರ್ಮನಿ ಛಾನ್ಸಲರ್ ಓಲಾಫ್ ಸ್ಕೋಲ್ಜ್ ಅವರ ಆಹ್ವಾನದ ಮೇರೆಗೆ ನಾಳೆ ಬರ್ಲಿನ್ ಗೆ ತೆರಳುತ್ತಿದ್ದು,ಡ್ಯಾನಿಶ್ ಪ್ರಧಾನ ಮಂತ್ರಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರ ಆಹ್ವಾನದ ಮೇರೆಗೆ ಮೇ 3 ಮತ್ತು 4 ರಂದು ಕೋಪನ್ ಹ್ಯಾಗನ್ […]

Advertisement

Wordpress Social Share Plugin powered by Ultimatelysocial