ರಾಷ್ಟ್ರಪತಿ ಭವನದ ಮೊಘಲ್ ಗಾರ್ಡನ್ ಹೆಸರು ಬದಲಿಸಿದ ಕೇಂದ್ರ ಸರ್ಕಾರ.

ವದೆಹಲಿ : ದೆಹಲಿಯ ರಾಷ್ಟ್ರಪತಿ ಭವನದಲ್ಲಿರುವ ಆಕರ್ಷಕ ಉದ್ಯಾನವನವನ್ನು ಇಲ್ಲಿಯವರೆಗೂ ಮೊಘಲ್ ಗಾರ್ಡನ್ಸ್ ಎನ್ನುವ ಹೆಸರನಿಂದ ಕರೆಯಲಾಗುತ್ತಿತ್ತು. ಈ ಉದ್ಯಾನವನವನ್ನು ಈಗ “ಅಮೃತ್ ಉದ್ಯಾನ” ಎಂದು ಕರೆಯಲಾಗುತ್ತದೆ.

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳಾಗಿರುವ ಅಂಗವಾಗಿ “ಆಜಾದಿ ಕಾ ಅಮೃತ್ ಮಹೋತ್ಸವ” ಅಭಿಯಾನದ ಅಡಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೊಸ ಹೆಸರನ್ನು ನೀಡಿದ್ದಾರೆ ಎಂದು ರಾಷ್ಟ್ರಪತಿಗಳ ಉಪ ಪತ್ರಿಕಾ ಕಾರ್ಯದರ್ಶಿ ನವಿಕಾ ಗುಪ್ತಾ ಸುದ್ದಿಗಾರರಿಗೆ ತಿಳಿಸಿದರು.

ಉದ್ಯಾನವನ್ನು ಭಾನುವಾರ ಸಾರ್ವಜನಿಕರಿಗಾಗಿ ತೆರೆಯಲಾಗುವುದು ಮತ್ತು ಈ ಬಾರಿ ಸುಮಾರು ಎರಡು ತಿಂಗಳ ಕಾಲ ತೆರೆದಿರುತ್ತದೆ ಎಂದು ಅವರು ಘೋಷಣೆ ಮಾಡಿದರು. ಜನವರಿ 31 ರಿಂದ ಮಾರ್ಚ್ 26 ರವರೆಗೆ ಈ ಉದ್ಯಾನವನ ಸಾರ್ವಜನಿಕರಿಗೆ ಮುಕ್ತವಾಗಿರುತ್ತದೆ. ಇದರ ಹೊರತಾಗಿ, ಕೆಲವು ದಿನಗಳನ್ನು ವಿಶೇಷವಾಗಿ ವಿಕಲಚೇತನರಿಗೆ, ರೈತರು ಮತ್ತು ಮಹಿಳೆಯರುಗೆ ಮೀಸಲಿಡಲಾಗಿದೆ ಎಂದಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜೀನ್ಸ್ ಧರಿಸಿದ್ದಕ್ಕಾಗಿ ವಕೀಲನನ್ನು ಹೈಕೋರ್ಟ್ ನಲ್ಲಿ ಮಾಡಿದ್ದೇನು ಗೊತ್ತಾ..?

Tue Jan 31 , 2023
ಗುವಾಹಟಿ: ಜೀನ್ಸ್ ಧರಿಸಿ ನ್ಯಾಯಾಲಯದ ಕಲಾಪಕ್ಕೆ ಆಗಮಿಸಿದ್ದ ಹಿರಿಯ ವಕೀಲರೊಬ್ಬರನ್ನು ‘ಡಿಕೋರ್ಟ್’ (ನ್ಯಾಯಾಲಯದಿಂದ ಹೊರಗೆ ಕಳುಹಿಸುವುದು) ಮಾಡಲಾಗಿದೆ.ಗುವಾಹಟಿಯ ಹೈಕೋರ್ಟ್ ನಲ್ಲಿ ಈ ಘಟನೆ ನಡೆದಿದ್ದು, ವಕೀಲ ಬಿ.ಕೆ. ಮಹಾಜನ್ ಎಂಬವರು ಪ್ರಕರಣವೊಂದರ ವಾದ ಮಂಡಿಸಲು ಬಂದ ವೇಳೆ ಜೀನ್ಸ್ ಪ್ಯಾಂಟ್ ಧರಿಸಿದ್ದರು. ಇದನ್ನು ಗಮನಿಸಿದ ನ್ಯಾಯಮೂರ್ತಿ ಕಲ್ಯಾಣ್ ರೈ ಸುರಾನ ಅವರು ಪೊಲೀಸರನ್ನು ಕರೆಯಿಸಿ ಜೀನ್ಸ್ ಧರಿಸಿದ್ದ ವಕೀಲರನ್ನು ನ್ಯಾಯಾಲಯದಿಂದ ಹೊರಗೆ ಕರೆದುಕೊಂಡು ಹೋಗುವಂತೆ ಸೂಚಿಸಿದರು. ಅಲ್ಲದೆ ಈ ಆದೇಶವನ್ನು ಮುಖ್ಯ […]

Advertisement

Wordpress Social Share Plugin powered by Ultimatelysocial