ರಾತ್ರಿ ವೇಳೆ ಹೀಗಾದರೆ ಅದು ರೂಪಾಂತರಿ ವೈರಸ್​ ಒಮಿಕ್ರಾನ್​ನ ರೋಗಲಕ್ಷಣ!

ರಾತ್ರಿ ವೇಳೆ ಹೀಗಾದರೆ ಅದು ರೂಪಾಂತರಿ ವೈರಸ್​ ಒಮಿಕ್ರಾನ್​ನ ರೋಗಲಕ್ಷಣ!

ನವದೆಹಲಿ: ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿರುವ ಜತೆಗೆ ದಿನೇದಿನೆ ಮತ್ತಷ್ಟು ದೇಶಗಳಿಗೆ ಪ್ರವೇಶಿಸುತ್ತ ತನ್ನ ಕಬಂಧ ಬಾಹುಗಳನ್ನು ಆವರಿಸಿಕೊಳ್ಳುತ್ತಿರುವ ರೂಪಾಂತರಿ ವೈರಸ್ ಒಮಿಕ್ರಾನ್ ದಿನದಿಂದ ದಿನಕ್ಕೂ ಮತ್ತಷ್ಟು ಭೀತಿಯನ್ನು ಹುಟ್ಟಿಸುತ್ತಲೇ ಇದೆ.

ಹೊಸ ರೂಪಾಂತರಿ ವೈರಸ್ ಒಮಿಕ್ರಾನ್​ ಸೌಮ್ಯವಾದ ರೋಗಲಕ್ಷಣಗಳನ್ನು ಹೊಂದಿದ್ದರೂ ಅದು ತೀವ್ರವಾಗಿ ಹರಡಬಲ್ಲುದಾದ್ದರಿಂದ ವೇಗವಾಗಿ ವ್ಯಾಪಿಸುತ್ತಿದೆ. ಎಷ್ಟರಮಟ್ಟಿಗೆ ಎಂದರೆ ಈ ಹಿಂದೆ ಕಾಣಿಸಿಕೊಂಡಿರುವ ಡೆಲ್ಟಾ ವೇರಿಯಂಟ್​ಗಿಂತಲೂ ಒಮಿಕ್ರಾನ್​ ಹರಡುವಿಕೆ ಮೂರು ಪಟ್ಟು ಅಧಿಕ.

ಈ ಮಧ್ಯೆ ಒಮಿಕ್ರಾನ್​ನ ಪ್ರಮುಖ ರೋಗಲಕ್ಷಣ ಏನು ಎಂಬ ಬಗ್ಗೆ ದಕ್ಷಿಣ ಆಫ್ರಿಕದ ವೈದ್ಯಕೀಯ ಪರಿಣತರು ಮತ್ತಷ್ಟು ಮಾಹಿತಿ ಹೊರಹಾಕಿದ್ದಾರೆ. ದಕ್ಷಿಣ ಆಫ್ರಿಕದಲ್ಲಿನ ಒಮಿಕ್ರಾನ್​ ಅಸ್ತಿತ್ವವನ್ನು ಮೊದಲು ಗುರುತಿಸಿದವರಲ್ಲಿ ಒಬ್ಬರಾದ ಡಾ.ಆಯಂಜೆಲಿಕ್​ ಕೊಯೆಟ್ಜೆ ಅದರ ಪ್ರಮುಖ ರೋಗಲಕ್ಷಣಗಳನ್ನು ತಿಳಿಸಿದ್ದಾರೆ.

ಒಮಿಕ್ರಾನ್ ತೀರಾ ವಿಶಿಷ್ಟವಾದ ರೋಗಲಕ್ಷಣಗಳನ್ನು ಹೊಂದಿದ್ದು, ಅದು​ ಫ್ಲೂ ಥರದ ರೋಗಲಕ್ಷಣಗಳನ್ನು ಹೊಂದಿರುವುದಿಲ್ಲ. ಈ ಸೋಂಕಿನಿಂದಾಗಿ ವಾಸನಾ ಶಕ್ತಿ ಕೂಡ ಕಳೆದುಹೋಗಿರುವುದಿಲ್ಲ. ಉಳಿದಂತೆ ಸಣ್ಣಜ್ವರ, ಸುಸ್ತು, ಗಂಟಲು ಕೆರೆತವೂ ಇರಬಹುದು. ಆದರೆ ಒಮಿಕ್ರಾನ್​​ಗೆ ಸಂಬಂಧಿಸಿದಂತೆ ಎಲ್ಲಕ್ಕಿಂತಲೂ ಮುಖ್ಯವಾದ ರೋಗಲಕ್ಷಣವೆಂದರೆ ರಾತ್ರಿಯ ಹೊತ್ತಿನಲ್ಲಿ ವಿಪರೀತ ಮೈಕೈನೋವು ಬಂದು ಬೆವರುವುದು. ಇದರ ಜೊತೆಗೆ ಉಸಿರಾಟದ ಸಮಸ್ಯೆ, ಎದೆನೋವು, ರಕ್ತದಲ್ಲಿನ ಆಮ್ಲಜನಕದ ಪ್ರಮಾಣ ಕುಸಿತ ಕಂಡುಬಂದರೆ ತಕ್ಷಣ ಮುಂಜಾಗ್ರತೆ ವಹಿಸಿ ವೈದ್ಯರನ್ನು ಸಂಪರ್ಕಿಸಬೇಕು ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಮಹಿಳೆ ಮೇಲೆ ಅತ್ಯಾಚಾರ

Wed Dec 22 , 2021
ಸೂರತ್: ಉದ್ಯೋಗ ಕೊಡಿಸುವ ಆಮಿಷವೊಡ್ಡಿ, ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ನಗ್ನ ಚಿತ್ರಗಳ ಮೂಲಕ ಬ್ಲಾಕ್‌ಮೇಲ್ ಮಾಡಿದ ಯುವಕನ ವಿರುದ್ಧ ಕೇಸ್ ದಾಖಲಾಗಿದೆ. ಗುಜರಾತ್ ನ ಸೂರತ್ ನಲ್ಲಿ ಈ ಘಟನೆ ನಡೆದಿದ್ದು, 23 ವರ್ಷದ ಯುವಕ ನಿಲೇಶ್ ಲಾಥಿಯಾ ವಿರುದ್ಧ 35 ವರ್ಷದ ಸಂತ್ರಸ್ಥೆ ಆರೋಪಿಸಿದ್ದಾರೆ. ಕೆಲಸ ಕೊಡಿಸುವ ನೆಪದಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ದೂರುದಾರರು ತಮ್ಮ ಪತಿ ಮತ್ತು ಮಗುವಿನೊಂದಿಗೆ ವಾಸಿಸುತ್ತಿದ್ದಾರೆ. ಒಂದು […]

Advertisement

Wordpress Social Share Plugin powered by Ultimatelysocial