ರವಿ ಚನ್ನಣ್ಣವರ್​ ವಿರುದ್ಧ ಭ್ರಷ್ಟಾಚಾರ ಆರೋಪ; ತಾಯಿ-ತಂದೆ ಹೇಳಿದ್ದೇನು?

 

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣವರ್ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪ ಪ್ರಕರಣ ಭಾರಿ ಸದ್ದು ಮಾಡುತ್ತಿದ್ದು, ಇದೀಗ ಅವರ ತಾಯಿ-ತಂದೆ ಕೂಡ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದಾರೆ.ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣವರ್ ಅಕ್ರಮವಾಗಿ ಆದಾಯಕ್ಕೂ ಮೀರಿ ಆಸ್ತಿ ಹೊಂದಿದ್ದಾರೆ ಎಂಬುದಾಗಿ ಕೆಲವರು ಆರೋಪಿಸಿದ್ದು, ಆ ಬಗ್ಗೆ ಪರ-ವಿರೋಧ ಪ್ರತಿಕ್ರಿಯೆಗಳು ಕೂಡ ಕೇಳಿ ಬರುತ್ತಿವೆ. ಈ ಮಧ್ಯೆ ಆರೋಪದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿರುವ ರವಿ ಚನ್ನಣ್ಣವರ್ ಮಾನನಷ್ಟ ಮೊಕದ್ದಮೆಯನ್ನು ಕೂಡ ಹೂಡಿದ್ದಾರೆ.ತಂದೆ ದ್ಯಾಮಪ್ಪ ಚನ್ನಣ್ಣವರ್ ಹಾಗೂ ತಾಯಿ ರತ್ನವ್ವ ಚನ್ನಣ್ಣವರ್ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದ್ದು, ತಮ್ಮ ಕಿರಿಯ ಮಗ ರಾಘವೇಂದ್ರ ಚನ್ನಣ್ಣವರ್​ ಗುತ್ತಿಗೆದಾರರ ಲೈಸೆನ್ಸ್ ಹೊಂದಿದ್ದು, ಸಣ್ಣಪುಟ್ಟ ವ್ಯವಹಾರಗಳಲ್ಲಿ ತೊಡಗಿಕೊಂಡಿದ್ದಾನೆ. ನಾವು ವ್ಯವಸಾಯ ಮತ್ತು ಕಿರಿಯ ಮಗನ ವ್ಯವಹಾರದ ಲಾಭದಲ್ಲಿ ಕೆಲವು ಆಸ್ತಿಗಳನ್ನ ಗಳಿಸಿದ್ದೇವೆ‌. ಜತೆಗೆ ವಿವಿಧ ಬ್ಯಾಂಕುಗಳಲ್ಲಿ ನಮ್ಮ ಸಾಲ ಕೂಡ ಇದೆ. ಇವೆಲ್ಲದರ ಬಗ್ಗೆ ಆಯಾ ಕಾಲಕ್ಕೆ ತಕ್ಕಂತೆ ಆದಾಯ ಇಲಾಖೆಗೆ ಮಾಹಿತಿ ಕೂಡ ನೀಡಲಾಗಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿರುವುದೆಲ್ಲ ಸುಳ್ಳು. ಅಂಥ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇವೆ ಎಂಬುದಾಗಿ ಹೇಳಿದ್ದಾರೆ. ಮಾತ್ರವಲ್ಲ ತಮ್ಮ ಆಸ್ತಿ ವಿವರದ ಪಟ್ಟಿಯನ್ನೂ ಬಿಡುಗಡೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ 7 ಜನರಲ್ ಮ್ಯಾನೇಜರ್, ಮುಖ್ಯ ವ್ಯವಸ್ಥಾಪಕರು, ಹೆಚ್‌ಆರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳನ್ನು ಭರ್ತಿ!

Sat Feb 5 , 2022
  ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ 7 ಜನರಲ್ ಮ್ಯಾನೇಜರ್, ಮುಖ್ಯ ವ್ಯವಸ್ಥಾಪಕರು, ಹೆಚ್‌ಆರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 16,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ […]

Advertisement

Wordpress Social Share Plugin powered by Ultimatelysocial