ಹಸುವಿನ ಸಗಣಿಯ ಭರಣಿಯನ್ನು ಮಾಡುವುದು ಹೇಗೆ ಎಂಬ ಬಗ್ಗೆ ಪ್ರಾಧ್ಯಪಕರೊಬ್ಬರು ವಿದ್ಯಾರ್ಥಿಗಳಿಗೆ ಕಲಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಹಸುವಿನ ಸಗಣಿಯ ಭರಣಿಯನ್ನು ಮಾಡುವುದು ಹೇಗೆ ಎಂಬ ಬಗ್ಗೆ ಪ್ರಾಧ್ಯಪಕರೊಬ್ಬರು ವಿದ್ಯಾರ್ಥಿಗಳಿಗೆ ಕಲಿಸುತ್ತಿರುವ ವಿಡಿಯೋ ವೈರಲ್ ಆಗಿದೆ.ಟ್ವಿಟ್ಟರ್ ನಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ಪ್ರತಿಷ್ಠಿತ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದಲ್ಲಿ ಇತ್ತೀಚೆಗೆ ಕಾರ್ಯಾಗಾರವನ್ನು ಆಯೋಜಿಸಿತ್ತು.ವಿದ್ಯಾರ್ಥಿಗಳಿಗೆ ಪ್ರಾಧ್ಯಾಪಕರು ಸಗಣಿ ಭರಣಿಯನ್ನು ಮಾಡುವುದು ಹೇಗೆ ಎಂದು ತೋರಿಸಿಕೊಟ್ಟಿದ್ದಲ್ಲದೆ, ಇವುಗಳನ್ನು ಪೂಜೆ, ಹವನ ಸಮಯದಲ್ಲಿ ಹಾಗೂ ಅಡುಗೆ ಇಂಧನವಾಗಿಯೂ ಬಳಸಬಹುದು ಎಂದು ಮಾಹಿತಿ ನೀಡಿದ್ದಾರೆ.ವಿದ್ಯಾರ್ಥಿಗಳು ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ಜನರಿಗೆ ಹಸುವಿನ ಸಗಣಿಯ ಭರಣಿಯನ್ನು ತಯಾರಿಸುವ ತರಬೇತಿಯನ್ನು ನೀಡಲಿದ್ದಾರೆ. ಗೋವಿನ ಸಗಣಿಯಿಂದ ತಯಾರಿಸಬಹುದಾದ ಉತ್ಪನ್ನಗಳನ್ನು ಮಾರಾಟ ಮಾಡಲು ಸರ್ಕಾರ ವ್ಯವಸ್ಥೆ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ. ವಿಶ್ವವಿದ್ಯಾನಿಲಯದ ಸಮಗ್ರ ಗ್ರಾಮಾಭಿವೃದ್ಧಿ ಕೇಂದ್ರದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಬಿಎಚ್‌ಯು ವಿಡಿಯೋವನ್ನು ಟ್ವೀಟ್ ಮಾಡಿದೆ.ಟ್ವಿಟ್ಟರ್ ನಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಅನೇಕ ಜನರು ಮೀಮ್‌ಗಳು ಮತ್ತು ಹಾಸ್ಯಗಳೊಂದಿಗೆ ಪ್ರತಿಕ್ರಿಯಿಸಿದ್ದಾರೆ. ಹಳ್ಳಿಗಳ ಜನರಿಗೆ ಈಗಾಗಲೇ ಹಸುವಿನ ಸಗಣಿಯ ಭರಣಿಯನ್ನು ಮಾಡುವುದು ಹೇಗೆ ಎಂಬುದು ತಿಳಿದಿದೆ ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ. ಇತರರು ವಿಶ್ವವಿದ್ಯಾನಿಲಯಗಳು ಉನ್ನತ ಶಿಕ್ಷಣದ ಸ್ಥಳಗಳಾಗಬೇಕು. ಆದರೆ, ಹಸುವಿನ ಸಗಣಿಯ ಭರಣಿ ಹೇಗೆ ಮಾಡುವುದನ್ನು ಕಲಿಯಲು ಅಲ್ಲ ಅಂತಾ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತು ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್!

Tue Feb 8 , 2022
  ನವದೆಹಲಿ : ಅಮೆರಿಕ ಅಧ್ಯಕ್ಷ ಜೋ ಬಿಡೆನ್ , ಯುಕೆ ಪ್ರಧಾನಿ ಬೋರಿಸ್ ಜಾನ್ಸನ್  ಮತ್ತು ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್  ಅವರಂತಹ ಜಾಗತಿಕ ನಾಯಕರನ್ನ ಸೋಲಿಸಿ ಪ್ರಧಾನಿ ನರೇಂದ್ರ ಮೋದಿ  ಮತ್ತೊಮ್ಮೆ ‘ಜಾಗತಿಕ ನಾಯಕರ ಅನುಮೋದನೆ ರೇಟಿಂಗ್ ಪಟ್ಟಿಯಲ್ಲಿ ಶೇ.72ರಷ್ಟು ಗರಿಷ್ಠ ರೇಟಿಂಗ್ಪ ಡೆದು ಅಗ್ರಸ್ಥಾನದಲ್ಲಿದ್ದಾರೆ.ಅಮೆರಿಕದ ಸಂಶೋಧನಾ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್  ಬಿಡುಗಡೆ ಮಾಡಿದ ಪಟ್ಟಿಯ ಪ್ರಕಾರ, ಪ್ರಧಾನಿ ಮೋದಿ ಅವರು 13 ವಿಶ್ವ ನಾಯಕರ ಪಟ್ಟಿಯಲ್ಲಿ […]

Advertisement

Wordpress Social Share Plugin powered by Ultimatelysocial