ಯಳಂದೂರು ಪಟ್ಟಣದಲ್ಲಿ ಗಣರಾಜ್ಯೋತ್ಸವ ಆಚರಣೆ ..

ಯಳಂದೂರು ಪಟ್ಟಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಗಣರಾಜ್ಯೋತ್ಸವನ್ನು ಆಚರಣೆ ಮಾಡಲಾಯಿತು. ಜೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು,ವಿವಿಧ ಶಾಲಾ ಮಕ್ಕಳು ನೃತ್ಯ ಮಾಡುವ ಮೂಲಕ ಕಾರ್ಯಕ್ರಮವನ್ನು ಮನರಂಜಿಸಿದರು.

ಕಾರ್ಯಕ್ರಮವನ್ನು ಶಾಸಕ ಎನ್. ಮಹೇಶ್ ರವರು ಉದ್ಘಾಟಿಸಿ ಮಾತನಾಡಿ ಜನವರಿ 26 ಭಾರತವು ಸಾರ್ವಭೌಮ ಘನತಂತ್ರ ದೇಶ ಎಂದು ಘೋಷಿಸಿಕೊಂಡು ಇಂದಿಗೆ 73 ವರ್ಷಗಳು ಸಂದಿದೆ. ಸಂವಿಧಾನವನ್ನು ಅಳವಡಿಸಿಕೊಂಡ ಉದ್ದೇಶವು ದೇಶದ ಪ್ರತಿಯೊಬ್ಬ ನಾಗರಿಕರಿಗೂ ಮೂಲಭೂತ ಹಕ್ಕುಗಳನ್ನು ನೀಡುವುದಾಗಿದೆ.

ಬಲಿಷ್ಠ ಒಕ್ಕೂಟ ಸರ್ಕಾರವನ್ನು ರೂಪಿಸುವ ಅತ್ಯುತ್ತಮ ಸಂವಿಧಾನವನ್ನು ಅಳವಡಿಸಿ ಕೊಂಡಿರುವುದು ನಮ್ಮ ದೇಶದ ಹೆಮ್ಮೆಯ ಸಂಕೇತ, ಸ್ವತಂತ್ರದ ನಂತರ ನಮಗೆ ಯಾವುದೇ ನೀತಿ ನಿಯಮಗಳು ಇರಲಿಲ್ಲ ಇದನ್ನು ಅರಿತ ಭಾರತ ಸರ್ಕಾರ ಡಾ.ಬಿ.ಆರ್.ಅಂಬೇಡ್ಕರ್ ರವರ ನೇತೃತ್ವದಲ್ಲಿ ಕರಡು ಸಮಿತಿಯನ್ನು ರಚನೆ ಮಾಡಿ, ಒಂದು ಕಾನೂನು ನಿಯಮಗಳನ್ನು ಒಳಗೊಂಡ ಸಂವಿಧಾನವನ್ನು ರಚನೆ ಮಾಡಿದರು….

ಅಂಬೇಡ್ಕರ್ ರವರು ರಚಿಸಿದ ಸಂವಿಧಾನದ ಫಲವಾಗಿ ನಮ್ಮ ಸಮಾಜದಲ್ಲಿ ಎಲ್ಲಾ ಸಮುದಾಯದ ಮತ್ತು ವರ್ಗದವರಿಗೆ ಸಮಾನತೆ ದೊರಕಿದೆ, ಸಂವಿಧಾನವನ್ನು ಅಳವಡಿಸಿಕೊಂಡ ದಿನವನ್ನಾಗಿ ಗಣರಾಜ್ಯೋತ್ಸವ ಆಚರಿಸುತ್ತಿದ್ದೇವೆ, ಹಾಗಾಗಿ ನಾವೆಲ್ಲರೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಪಾಲಿಸೋಣ ಎಂದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಗವಾಡ:ಡಾ ಬಿ ಆರ್ ಅಂಬೇಡ್ಕರ್ ಅವರು ಕೊಡುಗೆ ಅಪಾರವಾದದ್ದು: ಶಾಸಕ ಶ್ರೀಮಂತ ಪಾಟೀಲ.

Thu Jan 26 , 2023
ಕಾಗವಾಡ:ಡಾ ಬಿ ಆರ್ ಅಂಬೇಡ್ಕರ್ ಅವರು ಬರೆದ ಭಾರತದ ಸಂವಿಧಾನ ಅಪಾರವಾದದ್ದು ಅವರು ಬರೆದ ಸಂವಿಧಾನದಿಂದಲೇ ನಾವೇಲ್ಲ ಬದುಕುತ್ತಿದ್ದೇವೆ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಅವರು ಹೇಳಿದರು ಅವರು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಾ ಪಟ್ಟಣದಲ್ಲಿರುವ ಶಿವಾನಂದ ಮಹಾವಿದ್ಯಾಲಯದಲ್ಲಿ ತಾಲೂಕಾ ಆಡಳಿತ ಆಯೋಜನೆ ಮಾಡಿದ್ದ 74 ನೇ ಗಣರಾಜ್ಯೋತ್ಸವ ದಿನಾಚರಣೆಯ ಸಮಾರಂಭವನ್ನು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಹಾಗೂ ಮಹಾತ್ಮಾ ಗಾಂಧೀಜಿ ಅವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ […]

Advertisement

Wordpress Social Share Plugin powered by Ultimatelysocial