ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ : 93 ಲಕ್ಷ ಮನೆಗಳಿಗೆ ನಳ ಸಂಪರ್ಕ

Jaljeevan Mission Yojana : ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ : 93 ಲಕ್ಷ ಮನೆಗಳಿಗೆ ನಳ ಸಂಪರ್ಕ

ಬೆಳಗಾವಿ : ಜಲಜೀವನ ಮಿಶನ್ ಯೋಜನೆ (Jaljeevan Mission Yojana) ಅಡಿ ರಾಜ್ಯದಲ್ಲಿ 2023-24ರೊಳಗೆ 93ಲಕ್ಷ ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಗುರಿ ಹಾಕಿಕೊಳ್ಳಲಾಗಿದ್ದು,ನಿತ್ಯವೂ 10 ಸಾವಿರ ಮನೆಗಳಿಗೆ ನಳ ಸಂಪರ್ಕ ಒದಗಿಸಲಾಗುತ್ತಿದ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಸದಸ್ಯ ಎನ್.ರವಿಕುಮಾರ ಅವರ ಚುಕ್ಕೆಗುರುತಿನ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಜಲಜೀವ ಮಿಶನ್ ಯೋಜನೆ ಅಡಿ ಇದುವರೆಗೆ 17.40ಲಕ್ಷ ಮನೆಗಳಿಗೆ ನಳಸಂಪರ್ಕ ಕಲ್ಪಿಸಲಾಗಿದೆ ಎಂದರು.

ಜಲಜೀವನ್ ಮಿಶನ್ ಯೋಜನೆಯಡಿ ನಳಸಂಪರ್ಕ ಒದಗಿಸಲು ಯಾವುದೇ ಅರ್ಜಿ ಒದಗಿಸುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿ ಸಚಿವ ಈಶ್ವರಪ್ಪ ಅವರು ರಾಜ್ಯದಲ್ಲಿ ಈವರೆಗೆ 41.91ಲಕ್ಷ ಮನೆಗಳಿಗೆ ಟ್ಯಾಪ್ ಮೂಲಕ ನೀರಿನ ಸಂಪರ್ಕ ಒದಗಿಸಲಾಗಿದೆ ಎಂದರು. ರಾಜ್ಯದಲ್ಲಿ 2019ರವರೆಗೆ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ ಜಾರಿಯಲ್ಲಿತ್ತು;ನಂತರ ಜಲಜೀವನ ಮಿಶನ್ ಯೋಜನೆಯೊಂದಿಗೆ ವಿಲೀನ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೋಲಾರ ಮೆಡಿಕಲ್‌ ಕಾಲೇಜ್‌ ವಿದ್ಯಾರ್ಥಿಗಳಿಗೆ ಕೋರೊನಾ: 33 ವಿದ್ಯಾರ್ಥಿಗಳಲ್ಲಿ ಸೋಂಕು ದೃಡ

Sat Dec 25 , 2021
ಕೋಲಾರದ ಒಂದೇ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಸದ್ಯ ಕಾಲೇಜಿನ ಹಾಸ್ಟೆಲ್ ಅನ್ನು ಕಂಟೇನ್ಮೆಂಟ್ ಮಾಡಲಾಗಿದೆ  ಎಂದು ಕೋಲಾರ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಕೋಲಾರದ ದೇವರಾಜ ಅರಸ ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada       Please follow and like us:

Advertisement

Wordpress Social Share Plugin powered by Ultimatelysocial