ಲಹರಿಗೆ ನಲವತ್ತೆಂಟು ವರುಷ. ರಿಕ್ಕಿಕೇಜ್ ಗೆ ಮತ್ತೆ ಗ್ರ್ಯಾಮಿ ಬಂದ ಹರುಷ.

ಇಬ್ಬರ ಈ ಸಾಧನೆಗೆ ಸನ್ಮಾನ್ಯ ಮುಖ್ಯಮಂತ್ರಿಗಳು ಸೇರಿದಂತೆ ಅನೇಕ ಗಣ್ಯರಿಂದ ಅಭಿನಂದನೆ.

ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ ಲಹರಿ ಸಂಸ್ಥೆ ಆರಂಭವಾಗಿ ನಲವತ್ತೆಂಟು ವರ್ಷಗಳು ಕಳೆದಿದೆ. ಈಗ ಮತ್ತೊಂದು ವಿಶೇಷವೆಂದರೆ ಈ ಸಂಸ್ಥೆಯ ಮೂಲಕ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿಕೇಜ್ ನೇತೃತ್ವದಲ್ಲಿ “ಡಿವೈನ್ ಟೈಡ್ಸ್” ಎಂಬ ಅದ್ಭುತ
ಆಲ್ಬಂ ಮೂಡಿಬಂದಿದೆ. ಈ ಆಲ್ಬಂ ಗಾಗಿ ರಿಕ್ಕಿಕೇಜ್ ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್ ಪಡೆದುಕೊಂಡಿದ್ದಾರೆ. ರಿಕ್ಕಿಕೇಜ್ ಅವರಿಗೆ ಗ್ರ್ಯಾಮಿ ಅವಾರ್ಡ್ ಬಂದಿರುವುದು ಇದು ಎರಡನೇ ಬಾರಿ.

ಈ ಸಂತಸ ಹಂಚಿಕೊಳ್ಳಲು ಲಹರಿ ಸಂಸ್ಥೆ ಆತ್ಮೀಯ ಸಮಾರಂಭ ಏರ್ಪಡಿಸಿತ್ತು. ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವರಾದ ಸುಧಾಕರ್, ಪಬ್ಲಿಕ್ ಟಿವಿ ಮುಖ್ಯಸ್ಥರಾದ ರಂಗನಾಥ್, ಕ್ರೇಜಿಸ್ಟಾರ್ ರವಿಚಂದ್ರನ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಾಜೇಂದ್ರ ಸಿಂಗ್ ಬಾಬು, ವಸಿಷ್ಠ ಸಿಂಹ, ಗುರುಕಿರಣ್, ಉದಯ್ ಕೆ ಮೆಹ್ತಾ, ಕೆ.ಪಿ. ಶ್ರೀಕಾಂತ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ನಾನು ಲಹರಿ ಸಂಸ್ಥೆಯ ಮನೋಹರ್ ನಾಯ್ಡು ಹಾಗೂ ವೇಲು ಅವರನ್ನು ಮೊದಲಿನಿಂದಲೂ ಬಲ್ಲೆ. ನಮ್ಮ ಪಕ್ಕದ ಮನೆಯವರು ಅವರು. ಲಹರಿ ಸಂಸ್ಥೆ ಈ ಎತ್ತರಕ್ಕೆ ಬೆಳೆದಿರುವುದು ಖುಷಿ ತಂದಿದೆ. ಇಲ್ಲಿಗೆ ಬಂದಾಗ ಈ ಆಲ್ಬಂ ನ ಒಂದು ಹಾಡು ನೋಡಿ ತುಂಬಾ ಸಂತೋಷವಾಯಿತು. ಗ್ರ್ಯಾಮಿ ಬಗ್ಗೆ ಅಷ್ಟು ಗೊತ್ತಿರಲಿಲ್ಲ. ಅದರ ಬಗ್ಗೆ ತಿಳಿದು ಆಶ್ಚರ್ಯವಾಯಿತು. ರಿಕ್ಕಿಕೇಜ್ ಎರಡು ಸಲ ಈ ಪ್ರಶಸ್ತಿ ಪಡೆದಿರುವುದು ನಿಜಕ್ಕೂ ಅಭಿನಂದನಾರ್ಹ. ಅವರ ಸಾಧನೆ ಇಡೀ ಕನ್ನಡಿಗರು ಹೆಮ್ಮೆ ಪಡುವಂತದು. ಅವರಿಂದ ಇನ್ನಷ್ಟು ಈ ರೀತಿಯ ಸಾಧನೆಯಾಗಲಿ. ಅದು ಎಲ್ಲರಿಗೂ ಸ್ಪೂರ್ತಿಯಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜಾನಿ ಡೆಪ್ ಮಾನನಷ್ಟ ವಿಚಾರಣೆಯ ನಂತರ ಅಂಬರ್ ಹರ್ಡ್ PR ತಂಡವನ್ನು ವಜಾಗೊಳಿಸಿದರು!

Mon May 2 , 2022
ಅಂಬರ್ ಹರ್ಡ್ ತನ್ನ ಮಾಜಿ ಪತಿ ತಂದ ಮಾನನಷ್ಟ ವಿಚಾರಣೆಯ ನಂತರ “ಕೆಟ್ಟ ಮುಖ್ಯಾಂಶಗಳು” ತನ್ನ PR ತಂಡವನ್ನು ವಜಾಗೊಳಿಸಿದಳು ಜಾನಿ ಡೆಪ್.ಅಂಬರ್ ಹರ್ಡ್ ಈ ಹಿಂದೆ ನಿಖರವಾದ ತಂತ್ರಗಳಿಂದ ಪ್ರತಿನಿಧಿಸಲ್ಪಟ್ಟರು, ಆದರೆ ಈಗ ಅವರು LA- ಆಧಾರಿತ ಸಲಹಾ ಸಂಸ್ಥೆ ಶೇನ್ ಕಮ್ಯುನಿಕೇಷನ್ಸ್‌ಗೆ ಬದಲಾಯಿಸಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ಹೆಸರಿಸದ ಮೂಲವು ನ್ಯೂಯಾರ್ಕ್ ಪೋಸ್ಟ್‌ಗೆ, “ಅವಳು ಕೆಟ್ಟ ಮುಖ್ಯಾಂಶಗಳನ್ನು ಇಷ್ಟಪಡುವುದಿಲ್ಲ” ಎಂದು ಹೇಳಿದರು. ಇನ್ನೊಂದು ಮೂಲವು […]

Advertisement

Wordpress Social Share Plugin powered by Ultimatelysocial