ರಿಷಭ್ ಪಂತ್ ಚೇತರಿಕೆ ಬಗ್ಗೆ ಪ್ರಮುಖ ಮಾಹಿತಿ

ಟೀಮ್ ಇಂಡಿಯಾದ ಯುವ ಆಟಗಾರ ರಿಷಭ್ ಪಂತ್ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಂತ್ ಅವರ ಇತ್ತೀಚಿನ ಆರೋಗ್ಯದ ಪರಿಸ್ಥಿತಿಯ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಸಾಕಷ್ಟು ಚೇತರಿಕೆ ಕಂಡು ಬಂದಿದೆ ಎನ್ನಲಾಗಿದೆ. ಹೀಗಾಗಿ ತಕ್ಷಣಕ್ಕೆ ಅವರನ್ನು ಬೇರೆ ಆಸ್ಪತ್ರೆಗೆ ವರ್ಗಾಯಿಸುವ ಯೋಜನೆಯಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.ಕಳೆದ ಶುಕ್ರವಾರ ಡಿಸೆಂಬರ್ 30ರ ಮುಂಜಾನೆ ರಿಷಭ್ ಪಂತ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಕುಟುಂಬಸ್ಥರಿಗೆ ಅರ್ಪ್ರೈಸ್ ನೀಡುವ ಹಿನ್ನೆಲೆಯಲ್ಲಿ ಬೆಳಗಿನ ಜಾವ ಕಾರಿನಲ್ಲಿ ಪಂತ್ ಒಂಟಿಯಾಗಿ ಪ್ರಯಾಣಿಸುತ್ತಿದ್ದರು. ಈ ಭೀಕರ ಅಪಘಾತದಲ್ಲಿ ಕಾರು ಬೆಂಕಿಗೆ ಆಹುತಿಯಾಗಿದ್ದರು ಕೂಡ ಪಂತ್ ಅದೃಷ್ಟವಶಾತ್ ದೊಡ್ಡ ಅನಾಹುತದಿಂದ ಪಾರಾಗಿದ್ದರು.ಪಂತ್ ಆರೋಗ್ಯದಲ್ಲಿ ಭಾರೀ ಚೇತರಿಕೆ ಕಾರು ಅಪಘಾತಕ್ಕೆ ಒಳಗಾದ ಬಳಿಕ ಅವರನ್ನು ತಕ್ಷಣವೇ ಸಾಕ್ಷಮ್ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಅದಶದ ಬಳಿಕ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಇಲ್ಲಿಯೇ ಪಂತ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರದ ವೇಳೆ ಪಂತ್ ಆರೋಗ್ಯದಲ್ಲಿ ಭಾರೀ ಚೇತರಿಕೆ ಕಂಡು ಬಂದಿದೆ ಎಂದು ಪಂತ್ ಅವರ ಕುಟುಂಬದ ಆಪ್ತರೊಬ್ಬರು ಮಾಹಿತಿ ನೀಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಈ ಮೂರು ಪ್ರಮುಖ ಪಂದ್ಯಾವಳಿಗಳಲ್ಲಿ ಗೆಲ್ಲಲೇಬೇಕಿದೆ ಟೀಂ ಇಂಡಿಯಾ

Sun Jan 1 , 2023
2022ರಲ್ಲಿ ಟೀಂ ಇಂಡಿಯಾ ಪ್ರಮುಖವಾಗಿ ದ್ವಿಪಕ್ಷೀಯ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೂ, ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್‌ನಲ್ಲಿ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಯಿತು. ಪ್ರಮುಖ ಆಟಗಾರರು ಗಾಯಗೊಂಡಿದ್ದು ತಂಡಕ್ಕೆ ಪ್ರಮುಖ ಹಿನ್ನಡೆಯಾಯಿತು.2022ರಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ಕೊನೆಯ ಏಕದಿನ ಮತ್ತು ಟೆಸ್ಟ್ ಸರಣಿಯನ್ನು ಆಡಿತು.ಏಕದಿನ ಸರಣಿಯನ್ನು ಸೋಲುವ ಮೂಲಕ ಮುಖಭಂಗ ಅನುಭವಿಸಿದ ಟೀಂ ಇಂಡಿಯಾ, ಟೆಸ್ಟ್ ಸರಣಿಯನ್ನು ವೈಟ್ ವಾಶ್ ಮಾಡುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ತಲುಪುವ […]

Advertisement

Wordpress Social Share Plugin powered by Ultimatelysocial