ರಸ್ತೆ ಸಾರಿಗೆ ನಿಗಮ ಬಸ್‌ಗಳನ್ನು ಓಡಿಸುತ್ತಿದೆ.

 

ಲಬುರಗಿ, ಫೆಬ್ರವರಿ 23; ಕಲ್ಯಾಣ ಕರ್ನಾಟಕ ಉತ್ಸವ-2023ರಲ್ಲಿ ಜನರು ಭಾವಹಿಸಲು ಅನುಕೂಲವಾಗುವಂತೆ ಕಲ್ಯಾಣ ಕರ್ನಾಟಕರಸ್ತೆ ಸಾರಿಗೆ ನಿಗಮ ಬಸ್‌ಗಳನ್ನು ಓಡಿಸುತ್ತಿದೆ. ಜನರು ಈ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಈ ಉತ್ಸವದಲ್ಲಿ ಪಾಲ್ಗೊಳ್ಳಲು ಕಲಬುರಗಿ ನಗರ, ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಪ್ರತಿ ಜಿಲ್ಲೆಯಿಂದ ಒಟ್ಟು 91 ಬಸ್‍ಗಳನ್ನು ಓಡಿಸಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕರು ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ಸಮಿತಿಯ ಅಧ್ಯಕ್ಷರಾದ ಎಂ. ರಾಚಪ್ಪ ತಿಳಿಸಿದ್ದಾರೆ. ಕಲಬುರಗಿ ನಗರ (ಕೇಂದ್ರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಸುಪರ ಮಾರ್ಕೆಟ್, ಗಂಜ್, ರಾಮಮಂದಿರ, ಆಳಂದ ಚೆಕ್ ಪೋಸ್ಟ್, ಹೈಕೋರ್ಟ್) ಹಾಗೂ ಸುತ್ತಮುತ್ತಲಿನ ವಿವಿಧ ಭಾಗ (ಫರಹತಾಬಾದ ಮಾರ್ಗದ ಹಳ್ಳಿಗಳು, ಪಟ್ಟಣ ವೃತ್ತದ ಹಾಗೂ ಮೆಳಕುಂದ ವೃತ್ತದ ಹಳ್ಳಿಗಳು) ಗಳಿಂದ 65 ಬಸ್‍ಗಳು ಸಂಚಾರ ನಡೆಸಲಿವೆ. ಕಲಬುರಗಿ ಜಿಲ್ಲೆಯ ಪ್ರತಿ ತಾಲೂಕಿನಿಂದ 2 ಬಸ್‍ಗಳಂತೆ ಒಟ್ಟು 20 ಬಸ್‍ಗಳು ಹಾಗೂ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಪ್ರತಿ ಜಿಲ್ಲೆಯಿಂದ 1 ಬಸ್‌ನಂತೆ 6 ಬಸ್‍ಗಳು ಕಾರ್ಯಾಚರಣೆ ಮಾಡಲಿವೆ. ಜನರು ಈ ಬಸ್‌ಗಳಲ್ಲಿ ಉಚಿತವಾಗಿ ಸಂಚಾರ ನಡೆಸಬಹುದು. ಹೆಚ್ಚುವರಿ ಬಸ್ ಸಂಚಾರ ಜನರ ಬೇಡಿಕೆಗನುಗುಣವಾಗಿ ನಿಗಮದಿಂದ ಟಿಕೆಟ್ ಆಧಾರದ ಮೇಲೆ ಹೆಚ್ಚುವರಿ ಬಸ್ಸುಗಳನ್ನು ಸಹ ಕಾರ್ಯಾಚರಣೆ ಮಾಡಲಾಗುತ್ತದೆ. ಕಲ್ಯಾಣ ಕರ್ನಾಟಕ ಉತ್ಸವವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಬಸ್ ಸೇವೆ ಸದುಪಯೋಗ ಪಡೆಯಬೇಕೆಂದು ಮನವಿ ಮಾಡಲಾಗಿದೆ.  ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಫೆಬ್ರವರಿ 24, 25 ಹಾಗೂ 26 ರವರೆಗೆ ಮೂರು ದಿನಗಳ ಕಾಲ ಕಲ್ಯಾಣ ಕರ್ನಾಟಕ ಉತ್ಸವ-2023 ನಡೆಯಲಿದೆ. ಉತ್ಸವದ ಅಂಗವಾಗಿ ವಿವಿಧ ಸ್ಪರ್ಧೆ, ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ವಿವಿಧ ಪ್ರದರ್ಶನ, ಸ್ಪರ್ಧೆ 2023ನೇ ಸಾಲಿನ ಕಲ್ಯಾಣ ಕರ್ನಾಟಕ ಉತ್ಸವ ಅಂವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 26ರಂದು ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಶ್ವಾನ ಪ್ರದರ್ಶನ ಆಯೋಜನೆ ಮಾಡಲಾಗಿದೆ. ಫೆಬ್ರವರಿ 24 ರಿಂದ 26ರ ವರೆಗೆ ಗುಲಬರ್ಗಾ ವಿವಿಯ ರಂಗಾಯಣ ಬಯಲು ರಂಗಮಂದಿರದಲ್ಲಿ ಸಂಜೆ‌ 4 ರಿಂದ‌ ರಾತ್ರಿ‌ 8.30ರ ಸಂಗೀತ, ನಾಟಕ ಪ್ರದರ್ಶನ ಹಾಗೂ ಜಾನಪದ ಕಾರ್ಯಕ್ರಮಗಳು ನಡೆಯಲಿದೆ. ಕಲ್ಯಾಣ ಕರ್ನಾಟಕದ ಕಲೆ, ಸಂಸ್ಕೃತಿ ಹಾಗೂ ಸ್ಥಳೀಯ ಪರಂಪರೆ ಅನಾವರಣಗೊಳಿಸುವ ಮೂರು ದಿನಗಳ ಕಲ್ಯಾಣ ಕರ್ನಾಟಕ ಉತ್ಸವ 2023 ಕಲಬುರಗಿಯ ವಿವಿ ಆವರಣದಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದ ಸ್ಥಳದಲ್ಲಿ ಆಯೋಜನೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಉತ್ಸವದ ಸಂಪೂರ್ಣ ಖರ್ಚು-ವೆಚ್ಚವನ್ನು ಭರಿಸಲಿದೆ. ಮಂಡಳಿಯ ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ. ಉತ್ಸವದ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ವಿವಿಧ ಸಮಿತಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದ್ದಾರೆ. ವಾಹನಗಳ ನೋಂದಣಿ ಮಾಡಿಸಿ ಕಲ್ಯಾಣ ಕರ್ನಾಟಕ ಉತ್ಸವ ಸಂದರ್ಭದಲ್ಲಿ ಉತ್ಸವಕ್ಕೆ ಆಗಮಿಸುವ ವಿವಿಧ ಕಲಾವಿದರ ಹಾಗೂ ಗಣ್ಯ ವ್ಯಕ್ತಿಗಳನ್ನು ಪ್ರಯಾಣಿಸಲು (ಶಿಷ್ಟಾಚಾರಕ್ಕಾಗಿ) ವಾಹನ ಹಾಗೂ ಚಾಲಕನ್ನೊಳಗೊಂಡಂತೆ ವಿವಿಧ ಜಿಲ್ಲೆಗಳ ತಲಾ 100 ಸರ್ಕಾರಿ ಕಚೇರಿ ಹಾಗೂ ಖಾಸಗಿ ವಾಹನಗಳನ್ನು ನಿಯೋಜಿಸಲಾಗಿದೆ. ಕಲಬುರಗಿ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಉಪ ಸಾರಿಗೆ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ಸಾರಿಗೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ. ಉತ್ಸವಕ್ಕೆ ನಿಯೋಜಿಸಿದ ವಾಹನ ಚಾಲಕರು ತಮ್ಮ ವಾಹನಗಳೊಂದಿಗೆ ಕಲಬುರಗಿ ನೂತನ ವಿದ್ಯಾಲಯ ಆವರಣದಲ್ಲಿನ ಮೈದಾನದಲ್ಲಿರುವ ಕಲಬುರಗಿ ಉಪ ಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಸಿಬ್ಬಂದಿಗಳಲ್ಲಿ ವರದಿ ಮಾಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚೀನಾ-ತಜಕಿಸ್ತಾನ್ ಗಡಿಯಲ್ಲಿ ಪ್ರಬಲ ಭೂಕಂಪ; 7.3 ತೀವ್ರತೆ ದಾಖಲು | earthquake

Thu Feb 23 , 2023
  ಬೀಜಿಂಗ್: ಚೀನಾದ ಕ್ಸಿನ್‌ಜಿಯಾಂಗ್ ಪ್ರದೇಶ ಮತ್ತು ತಜಕಿಸ್ತಾನದ ಗಡಿಯಲ್ಲಿ ಸುಮಾರು 8:37 am (0037 GMT) ಕ್ಕೆ ಸುಮಾರು 7.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಚೀನಾದ ರಾಜ್ಯ ದೂರದರ್ಶನ ಸಿಸಿಟಿವಿ ಇಂದು (ಗುರುವಾರ) ವರದಿ ಮಾಡಿದೆ. ಚೀನಾದ ರಾಜ್ಯ ಮಾಧ್ಯಮವೂ ವರದಿಗಳನ್ನು ದೃಢಪಡಿಸಿದೆ. ಚೀನಾ ಭೂಕಂಪ ನೆಟ್‌ವರ್ಕ್ಸ್ ಸೆಂಟರ್ (ಸಿಇಎನ್‌ಸಿ) ಪ್ರಕಾರ, ಚೀನಾದ ಕ್ಸಿನ್‌ಜಿಯಾಂಗ್ ಉಯ್ಗುರ್ ಸ್ವಾಯತ್ತ ಪ್ರದೇಶದ ಬಳಿ ಗುರುವಾರ 7.3 ತೀವ್ರತೆಯ ಭೂಕಂಪ ಸಂಭವಿಸಿದೆ […]

Advertisement

Wordpress Social Share Plugin powered by Ultimatelysocial