ROCKING STAR :36ನೇ ಹುಟ್ಟುಹಬ್ಬದ ಸಂಭ್ರಮ;

ಬೆಂಗಳೂರು : ಸ್ಯಾಂಡಲ್‍ವುಡ್ ನಟ ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 36ನೇ ವಸಂತಕ್ಕೆ ಕಾಲಿಟ್ಟಿರುವ ಅವರು ಕುಟುಂಬದವರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಓಮಿಕ್ರಾನ್‌, ಕೊರೊನಾ ಸೋಂಕಿನ ಭೀತಿ ಎಲ್ಲೆಡೆ ಇರುವುದರಿಂದ ಮನೆಯಲ್ಲಿಯೇ ಆಚರಿಸಿಕೊಳ್ಳುತ್ತಿದ್ದಾರೆ.

ಯಶ್ ಜನ್ಮದಿನವಾದ ಇಂದು ಕರ್ನಾಟಕದಲ್ಲಿ ವಾರಾಂತ್ಯದ ಕರ್ಫ್ಯೂ ಇದೆ.

ಈ ಕಾರಣಕ್ಕೆ ಯಶ್ ಮನೆ ಸಮೀಪ ತೆರಳೋಕೆ ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸೋಶಿಯಲ್ ಮೀಡಿಯಾ ಮೂಲಕವಾಗಿ ಶುಭಕೋರುತ್ತಿದ್ದಾರೆ. ಯಶ್ ಜನ್ಮದಿನಕ್ಕೆ ಕೇವಲ ಕರ್ನಾಟಕದ ಫ್ಯಾನ್ಸ್ ಮಾತ್ರವಲ್ಲದೆ, ಆಂಧ್ರ ಪ್ರದೇಶ, ತಮಿಳು ನಾಡು, ಮಹಾರಾಷ್ಟ್ರ ಮೊದಲಾದ ರಾಜ್ಯಗಳ ಅಭಿಮಾನಿಗಳು ವಿಶ್‌ ಮಾಡುತ್ತಿದ್ದಾರೆ. ಯಶ್ ಹೆಸರು ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

COVID:2022 ರಲ್ಲಿ ಬಿಡುಗಡೆಗೆ ಸಿದ್ಧವಾಗಿದ್ದ ಹಲವು ಚಿತ್ರಗಳಿಗೆ ಓಮಿಕ್ರಾನ್ ಬ್ರೇಕ್;

Wed Jan 12 , 2022
ಮುಂಬೈ: ದೇಶದಲ್ಲಿ ದಿನದಿಂದ ದಿನಕ್ಕೆ ಓಮಿಕ್ರಾನ್ ಹೆಚ್ಚುತ್ತಿದ್ದು, ಮಹಾಮಾರಿ ನಿಯಂತ್ರಿಸಲು ಹಲವು ರಾಜ್ಯಗಳು ಥಿಯೇಟರ್‌ಗಳನ್ನು ಬಂದ್ ಮಾಡಿವೆ ಅಥವಾ ಶೇ. 50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಿವೆ. ಈ ಮಧ್ಯೆ 2022ರ ಆರಂಭದಲ್ಲಿ ಬಿಡುಗಡೆಗೆ ಸಿದ್ಧವಾಗಿರುವ ದೊಡ್ಡ ಬಜೆಟ್ ಚಿತ್ರಗಳ ಪಟ್ಟಿ ಸಹ ದೊಡ್ಡದಿದ್ದು, ಓಮಿಕ್ರಾನ್ ನಿಂದಾಗಿ ಪ್ರೇಕ್ಷಕರು ಸಹ ಚಿತ್ರಮಂದಿರಕ್ಕೆ ಬರಲು ಭಯಪಡುತ್ತಿರುವುದರಿಂದ ಬಿಡುಗಡೆ ಮುಂದೂಡಲು ಮುಂದಾಗಿವೆ. ಇದು ಈಗಾಗಲೇ ಸಂಕಷ್ಟದಲ್ಲಿರುವ ಚಿತ್ರೋದ್ಯಮಕ್ಕೆ ಮತ್ತೊಂದು ಹೊಡೆತ ನೀಡುತ್ತಿದೆ. ಎಸ್‌ಎಸ್ […]

Advertisement

Wordpress Social Share Plugin powered by Ultimatelysocial