ರಾಜ್ಯ ಸರ್ಕಾರದಿಂದ ರೋಹಿಣಿ, ರೂಪಾಗೆ ನೋಟಿಸ್ ನಲ್ಲಿ ಖಡಕ್ ಎಚ್ಚರಿಕೆ!

ಬೆಂಗಳೂರು: ಐಪಿಎಸ್ ಅಧಿಕಾರಿ ರೂಪ.ಡಿ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯಾದ ನಿಮ್ಮಗಳ ನಡೆಯಿಂದ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ನೀವು ಮಾಧ್ಯಮಗಳ ಮುಂದೆ ಆರೋಪ, ಪ್ರತ್ಯಾರೋಪ ಮಾಡಿದ್ದು ಸರಿಯಲ್ಲ. ಇಬ್ಬರು ಅಖಿಲ ಭಾರತ ಸೇವಾ ನಿಯಮಕ್ಕೆ ಬದ್ಧರಾಗಿರುವಂತೆ ರಾಜ್ಯ ಸರ್ಕಾರ ನೋಟಿಸ್ ನಲ್ಲಿ ರೂಪಾ ಹಾಗೂ ಸಿಂಧೂರಿಗೆ ಖಡಕ್ ಎಚ್ಚರಿಕೆ ನೀಡಿದೆ.

ಈ ಕುರಿತಂತೆ ಇಂದು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಅವರು ಐಪಿಎಸ್ ಅಧಿಕಾರಿ ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಿಎಂ ಬೊಮ್ಮಾಯಿ ಅವರ ಸೂಚನೆ ಮೇರೆಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಅವರು ಐಪಿಎಸ್ ರೂಪ ಹಾಗೂ ಐಎಎಸ್ ರೋಹಿಣಿ ಸಿಂಧೂರಿ ಅವರಿಗೆ ನೀಡಿರುವಂತ ನೋಟಿಸ್ ನಲ್ಲಿ ನಿಮ್ಮ ದೂರುಗಳನ್ನು ಸರ್ಕಾರದ ಮುಂದೆ ಹೇಳಿ. ಅದರನ್ನು ಬಿಟ್ಟು ಬಹಿರಂಗವಾಗಿ ಆರೋಪ-ಪ್ರತ್ಯಾರೋಹ ಮಾಡುತ್ತಿರೋದಕ್ಕೆ ಆಕ್ಷೇಪವನ್ನು ವ್ಯಕ್ತ ಪಡಿಸಿದೆ.

ನಿಮ್ಮ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರ ತಂದಿದೆ. ಇಬ್ಬರು ಅಖಿಲ ಭಾರತ ಸೇವಾ ನಿಯಮಕ್ಕೆ ಬದ್ಧರಾಗಿರಬೇಕು. ಇಲ್ಲವಾದಲ್ಲಿ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆಯನ್ನು ನೀಡಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜಾಮೀನಿನ ಮೇಲೆ ಹೊರ ಬರುತ್ತಿದ್ದಂತೆ ಪೃಥ್ವಿ ಶಾ ವಿರುದ್ಧ ಕೇಸ್ ದಾಖಲಿಸಿದ್ದಾರೆ.

Tue Feb 21 , 2023
  ಮುಂಬೈನ ಐಷಾರಾಮಿ ರೆಸ್ಟೋರೆಂಟ್ ಬಳಿ ಕ್ರಿಕೆಟಿಗ ಪೃಥ್ವಿ ಶಾ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ನಟಿ ಹಾಗೂ ಸೋಶಿಯಲ್ ಮೀಡಿಯಾ ಇನ್ಫ್ಲುಯನ್ಸರ್ ಸಪ್ನಾ ಗಿಲ್, ಜಾಮೀನಿನ ಮೇಲೆ ಹೊರ ಬರುತ್ತಿದ್ದಂತೆ ಪೃಥ್ವಿ ಶಾ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಮಹಿಳೆಯೊಬ್ಬರ ಘನತೆಗೆ ಧಕ್ಕೆ ತಂದಿರುವುದೂ ಸೇರಿದಂತೆ ವಿವಿಧ ಕಲಂಗಳ ಅಡಿ ಪ್ರಕರಣ ದಾಖಲಿಸಲಾಗಿದ್ದು, ಕ್ರಮ ಕೈಗೊಳ್ಳುವಂತೆ ಮನವಿ […]

Advertisement

Wordpress Social Share Plugin powered by Ultimatelysocial