ಐಪಿಎಸ್ ರೂಪಾಗೆ ಮಾನಸಿಕ ಕಾಯಿಲೆ ಚಿಕಿತ್ಸೆ ಅಗತ್ಯ ಐಎಎಸ್ ರೋಹಿಣಿ ಚಾಟಿ.

ಮಾನಸಿಕ ಕಾಯಿಲೆ ಬಹುದೊಡ್ಡ ಸಮಸ್ಯೆಯಾಗಿದ್ದು,ಇದಕ್ಕೆ ಔಷಧಿ ಹಾಗೂ ಕೌನ್ಸಿಲಿಂಗ್ ಅವಶ್ಯಕತೆಯಿದೆ. ಜವಾಬ್ದಾರಿ ಸ್ಥಾನದಲ್ಲಿರುವವರಿಗೆ ಈ ರೀತಿಯ ಸಮಸ್ಯೆ ಬಂದರೇ ತುಂಬಾ ಅಪಾಯ ಎಂದು ಐಜಿಪಿ ಆಗಿರುವ ಐಪಿಎಸ್ ರೂಪಾ ಆರೋಪಗಳಿಗೆ ಹೇಳಿಕೆಗೆ ಐಎಎಸ್ ರೋಹಿಣಿ ಸಿಂಧೂರಿ ತಿರುಗೇಟು ನೀಡಿದಾರೆ.ರೂಪಾ ಆರೋಪಗಳ ಪಟ್ಟಿ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಐಪಿಎಸ್  ರೂಪಾ  ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನನ್ನ ಮೇಲೆ ಹಬ್ಬಿಸುತ್ತಿರುವ ಸುಳ್ಳು ಆಪಾದನೆಗಳೆಲ್ಲ ವ್ಯವಸ್ಥಿತ ಪಿತೂರಿಯಾಗಿದೆ.ಎಲ್ಲಾ ಕಡೆಯೂ ಹೀಗೆ ಸುಳ್ಳು ಆಪಾದನೆಗಳನ್ನು ಹಬ್ಬಿಸಲಾಗುತ್ತಿದೆ. ಸದ್ಯ ಈಗ ಕೆಲಸ ಮಾಡುತ್ತಿರುವ ಹಾಗೂ ನಾನ್ ಕೇಡರ್ ಪೋಸ್ಟ್‌ನಲ್ಲೂ ಕೂಡ ಈ ರೀತಿ ಮಾಡಲಾಗಿದ್ದು ಐಪಿಸಿ ಸೆಕ್ಷನ್ ಅಡಿಯಲ್ಲಿ ರೂಪಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.ರೂಪಾ ಯಾವಾಗಲೂ ಮಾಧ್ಯಮದ ಗಮನವನ್ನು ತನ್ನೆಡೆಗೆ ಸೆಳೆದುಕೊಳ್ಳಲು ಬಯಸುವ ವ್ಯಕ್ತಿ. ಆಕೆಯ ಸಾಮಾಜಿಕ ಜಾಲತಾಣದ ಪ್ರೊಫೈಲ್ ಅವಳ ಕೆಲಸದ ಪುರಾವೆಯಾಗಿದೆ.ಅವಳು ಯಾವಾಗಲೂ ಒಬ್ಬರನ್ನು ಗುರಿಯಾಗಿಸಿಕೊಳ್ಳುವುದೇ ಅವಳ ನೆಚ್ಚಿನ ಟೈಮ್ ಪಾಸ್ ಕೆಲಸವಾಗಿದೆ. ಫೋಟೊಗಳು ಸೋಷಿಯಲ್ ಮೀಡಿಯಾದಿಂದ ತೆಗೆದುಕೊಳ್ಳಲಾಗಿದೆ. ಆಕೆ ನಾನು ಯಾರಿಗೆ ಫೋಟೋ ಕಳಿಸಿದ್ದೆ ಎಂದು ಹೆಸರು ಹೇಳಲಿ ಎಂದು ಸವಾಲು ಹಾಕಿದರು.ಮಾನಸಿಕ ಅಸ್ವಸ್ಥತೆ ಒಂದು ಬಹುದೊಡ್ಡ ಸಮಸ್ಯೆ. ಅದನ್ನ ಸೂಕ್ತ ವೈದ್ಯಕೀಯ ಚಿಕಿತ್ಸೆ ಮತ್ತು ಕೌನ್ಸಿಲಿಂಗ್‌ ಮೂಲಕ ಗುಣಪಡಿಸಬೇಕು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಮಾನಸಿಕ ಅಸ್ವಸ್ಥತೆಗೆ ಒಳಗಾದರೆ, ಅದು ಸಮಾಜಕ್ಕೆ ಬಹುದೊಡ್ಡ `ಅಪಾಯಕಾಲಿ ಬೆಳವಣಿಗೆಯಾಗಿದೆ. ರೂಪಾ ಐಪಿಎಸ್ ಅವರು, ಜವಾಬ್ದಾರಿಯುತ ಸ್ಥಾನದಲ್ಲಿದ್ದು, ನನ್ನ ಮೇಲೆ ವೈಯಕ್ತಿಕ ಹಗೆಯನ್ನ ಸಾಧಿಸಲು ಮಾನಸಿಕ ಸ್ಥಿಮಿತೆಯನ್ನು ಕಳೆದುಕೊಂಡಿರುವವರ ರೀತಿಯಲ್ಲಿ ವರ್ತಿಸುತ್ತಿದ್ದಾರೆ.ಐಪಿಎಸ್ ರೂಪಾ ಅವರಿಗೆ, ಇದೊಂದು ಅಭ್ಯಾಸವಾಗಿ ಬಿಟ್ಟಿದೆ. ಅವರು ಇತ್ತೀಚಿನ ವರ್ಷಗಳಲ್ಲಿದ್ದ ಎಲ್ಲಾ ಹುದ್ದೆಗಳಲ್ಲಿ ಇದೇ ರೀತಿಯ ಆಧಾರ ರಹಿತ ಆರೋಪಗಳನ್ನು ಮಾಡುವ ಮೂಲಕ ಮಾಧ್ಯಮಗಳ ಗಮನ ಸೆಳೆಯುವ ಹಾಗೂ ತಾವು ದ್ವೇಷಿಸುವ ವ್ಯಕ್ತಿಗಳ ಮೇಲೆ ವೈಯಕ್ತಿಕವಾಗಿ ಹಗೆತನ ಸಾಧಿಸಲು ಕೀಳು ಮಟ್ಟದ ಪ್ರವೃತ್ತಿಯನ್ನು ಪ್ರದರ್ಶಿಸುತ್ತಿದ್ದಾರೆ.ಅವರು ಯಾವಾಗಲೂ ಸುದ್ದಿಯಲ್ಲಿರಬೇಕು ಎನ್ನುವುದನ್ನು ಬಯಸುತ್ತಾರೆ ಹಾಗೂ ಅದಕ್ಕೆ ಬೇಕಾದಂತಹ ಪೋಸ್ಟ್‌ಗಳನ್ನು ತಮ್ಮ ಸಾಮಾಜಿಕ ಮಾಧ್ಯಮದ ಪುಟಗಳಲ್ಲಿ ಹಾಕುವ ಮೂಲಕ ಸುದ್ದಿಯ ಕೇಂದ್ರ ಬಿಂದುವಾಗಲು ಯತ್ನಿಸುತ್ತಿದ್ದಾರೆ.ಜವಾಬ್ದಾರಿಯುತ ಸ್ಥಾನದಲ್ಲಿದ್ದು ಒಳ್ಳೆಯ ಕೆಲಸಗಳ ಕಡೆ ಗಮನ ಹರಿಸುವುದನ್ನು ಬಿಟ್ಟು ಒಬ್ಬ ವ್ಯಕ್ತಿ ಅಥವಾ ಇನ್ನೊಬ್ಬರನ್ನು ಗುರಿಯಾಗಿಸಿಕೊಂಡು ಅವರ ತೇಜೋವಧೆ ಮಾಡುವುದೇ ಅವರ ಪ್ರಾಥಮಿಕ ಕೆಲಸ ಎಂದು ತೋರುತ್ತದೆ. ಅದರಲ್ಲೂ ನನ್ನ ವಿರುದ್ಧ ಯಾವುದೋ ವೈಯಕ್ತಿಕ ಹಗೆಯನ್ನಿಟ್ಟುಕೊಂಡು ಸುಳ್ಳು, ವೈಯಕ್ತಿಕ ನಿಂದನೆಯ ಅಭಿಯಾನವನ್ನು ನಡೆಸುತ್ತಿದ್ದಾರೆ.ಸಾಮಾಜಿಕ ಮಾಧ್ಯಮಗಳಿಂದ ಹಾಗೂ ವಾಟ್ಸ್‌ಆಪ್ ಸ್ಟೇಟಸ್‌ಗಳಿಂದ ಸ್ಕ್ರೀನ್‌ಶಾಟ್‌ಗಳ ಮೂಲಕ ಸಂಗ್ರಹಿಸಿರುವ ಫೋಟೋಗಳನ್ನು ನನ್ನ ತೇಜೋವಧೆ ಮಾಡಲು ರೂಪಾ ಐಪಿಎಸ್ ಅವರು ಬಳಸಿದ್ದಾರೆ. ಈ ಫೋಟೋಗಳನ್ನು ನಾನು ಕೆಲ ಅಧಿಕಾರಿಗಳಿಗೆ ಕಳುಹಿಸಿದ್ದೇನೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಯಾರದ್ದು ಚಡ್ಡಿ ಗಟ್ಟಿ ಇದೆಯೋ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

Mon Feb 20 , 2023
ಸತೀಶ್ ಜಾರಕಿಹೊಳಿ ಬೆಳಗಾವಿ: ಒಂದು ವಾರ ಅಥವಾ ಮಾರ್ಚ್ ತಿಂಗಳ ಮೊದಲನೆ ವಾರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಲಿದ್ದು, ಯಾರದ್ದು ಚಡ್ಡಿ ಗಟ್ಟಿ ಇದೆಯೋ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ರವಿವಾರ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರಿಗೆ ಟಿಕೆಟ್ ನೀಡಿದರೂ ಎಲ್ಲರೂ ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸೋಣ. […]

Advertisement

Wordpress Social Share Plugin powered by Ultimatelysocial