ರೋಹಿತ್ ನಿರ್ಧಾರಕ್ಕೆ ವೆಂಕಟೇಶ್ ಪ್ರಸಾದ್ ಕಿಡಿ

ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಏಕದಿನ ಸರಣಿ ಮಂಗಳವಾರದಿಂದ ಆರಂಭವಾಗಲಿದ್ದು ಎರಡು ತಂಡಗಳು ಕೂಡ ಈ ಪಂದ್ಯಕ್ಕೆ ಸಜ್ಜಾಗಿದೆ. ಮೊದಲ ಏಕದಿನ ಪಂದ್ಯ ಗುವಾಹಟಿಯಲ್ಲಿ ನಡೆಯಲಿದ್ದು ಅಹರ್ನಿಶಿಯಾಗಿ(Day-night) ನಡೆಯಲಿದೆ. ಈ ಪಂದ್ಯಕ್ಕೂ ಮುನ್ನಾ ದಿನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.ಈ ಸಂದರ್ಭದಲ್ಲಿ ರೋಹಿತ್ ಶರ್ಮಾ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕರಾಗಿ ತಮ್ಮ ಜೊತೆಗೆ ಶುಬ್ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ ಎಂದಿದ್ದಾರೆ.ಟೀಮ್ ಇಂಡಿಯಾ ನಾಯಕನ ಈ ನಿರ್ಧಾರದ ಬಗ್ಗೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಕನ್ನಡಿದ ವೆಂಕಟೇಶ್ ಪ್ರಸಾದ್ ಪ್ರತಿಕ್ರಿಯೆ ನೀಡಿದ್ದು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಅದ್ಭುತ ಫಾರ್ಮ್‌ನಲ್ಲಿರುವ ಇಶಾನ್ ಕಿಶನ್ ಅವರನ್ನು ತಂಡದಿಂದ ಹೊರಗಿಡುವ ನಿರ್ಧಾರದ ಬಗ್ಗೆ ವೆಂಕಿ ಸಾಮಾಜಿಕ ಜಾಲತಾಣದಲ್ಲಿ ಕಟುವಾಗಿ ಟೀಕಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಆಟಗಾರರ ಆಯ್ಕೆಯ ಕ್ರಮದ ಬಗ್ಗೆಯೂ ಪ್ರಶ್ನೆಯೆತ್ತಿದ್ದಾರೆ.ದ್ವಿಶತಕ ಸಿಡಿಸಿ ಅಬ್ಬರಿಸಿದ್ದ ಇಶಾನ್ ಕಿಶನ್ಯು ವ ಆಟಗಾರ ಇಶಾನ್ ಕಿಶನ್ ಇತ್ತೀಚೆಗಷ್ಟೇ ಅಂತ್ಯವಾದ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿಸಿದ್ದರು. ಸರಣಿಯ ಮೂರನೇ ಪಂದ್ಯದಲ್ಲಿ ಅಮೋಗ ಪ್ರದರ್ಶನ ನೀಡಿದ ಇಶಾನ್ ಕಿಶನ್ ಸ್ಪೋಟಕ ಶತಕ ಸಿಡಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣವಾದರು. ಹೀಗಾಗಿ ಈ ಪಂದ್ಯದಲ್ಲಿ ಭಾರತ 400ಕ್ಕೂ ಅಧಿಕ ರನ್‌ಗಳಿಸಿದ್ದಲ್ಲದೆ ಭಾರೀ ಅಂತರದಿಂದ ಗೆಲುವು ಸಾಧಿಸಲು ಸಾಧ್ಯವಾಗಿತ್ತು. ಈ ಭರ್ಜರಿ ಆಟಗಾರ ಬಳಿಕ ಟೀಮ್ ಇಂಡಿಯಾದ ಏಕದಿನ ತಂಡದಲ್ಲಿ ಆರಂಭಿಕನಾಗಿ ಮುಂದುವರಿಯಲು ಇಶಾನ್ ಕಿಶನ್ ಸೂಕ್ತ ಆಟಗಾರ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದವು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಗಳನ್ನು ಕೊಂದು ರಾತ್ರೋರಾತ್ರಿ ಸುಟ್ಟು ಹಾಕಿದ ತಂದೆ-ತಾಯಿ

Tue Jan 10 , 2023
ತಂದೆ ಮತ್ತು ಮಲ ತಾಯಿ ಸೇರಿಕೊಂಡು 17 ವರ್ಷದ ಮಗಳನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಒಡಿಶಾದ ಪುರಿ ಜಿಲ್ಲೆಯ ಗೋಪ್​ ಪ್ರದೇಶದಲ್ಲಿ ನಿನ್ನೆ (ಜ.9) ರಾತ್ರಿ ನಡೆದಿದೆ. ಸಾಕ್ಷಿಯನ್ನು ನಾಶ ಮಾಡಲು ಮಗಳ ಶವವನ್ನು ಸುಟ್ಟು ಹಾಕಿರುವುದಾಗಿ ವರದಿಯಾಗಿದೆ.ಮೃತಳನ್ನು ಸೊನಾಲಿ ಮೊಹರಾಣ ಎಂದು ಗುರುತಿಸಲಾಗಿದೆ. ಹಿರಿಯ ಸಹೋದರಿ ರಂಜಿತಾ ಮೊಹರಾಣ ನೀಡಿದ ದೂರಿನ ಆಧಾರದ ಮೇಲೆ ಗೋಪ್​ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ದುರ್ಗಾಚರಣ ಮೊಹರಾಣ ಎಂಬುವರನ್ನು […]

Advertisement

Wordpress Social Share Plugin powered by Ultimatelysocial