ಮಾರ್ಚ್ 14ಕ್ಕೆ ಎತ್ತುವ ಜಂಡಾ ಸಾಂಗ್ ರಿಲೀಸ್!ಮತ್ತೆ ‘RRR’ ಪ್ರಮೋಷನ್

ಚಿತ್ರಬ್ರಹ್ಮ ಎಸ್.ಎಸ್ ರಾಜಮೌಳಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಆರ್ ಆರ್ ಆರ್’ ಸಿನಿಮಾಗಾಗಿ ಚಿತ್ರರಸಿಕರು ಕಾತುರದಿಂದ ಎದುರು ನೋಡುತ್ತಿದ್ದಾರೆ. ಬಾಹುಬಲಿ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶಿಸುತ್ತಿರುವ ಸಿನಿಮಾ ಇದಾಗಿದ್ದು ಭಾರಿ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಜೂ.ಎನ್ ಟಿಆರ್ ಮತ್ತು ರಾಮ್ ಚರಣ್ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದು, ಬಾಲಿವುಡ್ ನಟರಾದ ಅಜಯ್ ದೇವಗನ್, ಆಲಿಯಾ ಭಟ್ ಸೇರಿದಂತೆ ಹಲವು ಪ್ರಮುಖ ನಟರು ಆರ್ ಆರ್ ಆರ್ ಸಿನಿಮಾದಲ್ಲಿ ನಟಿಸಿದ್ದಾರೆ.ಡಿವಿವಿ ಎಂಟರ್‌ಟೈನ್ಮೆಂಟ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಆರ್ ಆರ್ ಆರ್ ಸಿನಿಮಾಗೆ ವಿ.ವಿಜಯೇಂದ್ರ ಪ್ರಸಾದ್ ಕಥೆ, ಮತ್ತು ಶ್ರೀಕರ್ ಪ್ರಸಾದ್ ಸಂಕಲನವಿದೆ. ಕನ್ನಡ, ತೆಲುಗು, ಮಲಯಾಳಂ ಮತ್ತು ತಮಿಳು ಹಾಗೂ ಹಿಂದಿಯಲ್ಲಿ ರಿಲೀಸ್ ಆಗಲಿರುವ ‘ಆರ್‌ಆರ್‌ಆರ್‌’ ಚಿತ್ರವು ಇಂಗ್ಲಿಷ್, ಪೋರ್ಚುಗೀಸ್, ಕೊರಿಯನ್, ಟರ್ಕಿಷ್, ಸ್ಪ್ಯಾನಿಶ್‌ ಭಾಷೆಗಳಿಗೆ ಡಬ್ ಆಗಲಿದೆ. ಬಿಗ್‌ ಬಜೆಟ್‌ನಲ್ಲಿ ತಯಾರಾದ ಈ ಚಿತ್ರಕ್ಕೆ ಎಂ.ಎಂ.ಕೀರವಾಣಿ ಸಂಗೀತ ಸಂಯೋಜಿಸಿದ್ದಾರೆ. ಮಾರ್ಚ್ 25ರಂದು 2022ರಂದು ವಿಶ್ವದಾದ್ಯಂತ ‘ಆರ್‌ಆರ್‌ಆರ್‌’ ಬಿಡುಗಡೆಯಾಗಲಿದೆ. ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾ ವಿತರಣೆ ಹಾಗೂ ನಿರ್ಮಾಣದ ಪ್ರತಿಷ್ಠಿತ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಹೌಸ್ ಆರ್ ಆರ್ ಆರ್ ಸಿನಿಮಾವನ್ನು ಕರ್ನಾಟಕಲ್ಲಿ ಹಂಚಿಕೆ ಮಾಡಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವರ್ಲ್ಡ್ ವೈಡ್ ವೆಬ್ನಿಂದ ಸಂಪರ್ಕ ಕಡಿತಗೊಳಿಸಲು ರಷ್ಯಾ ಯೋಜಿಸುತ್ತಿದೆಯೇ?

Sat Mar 12 , 2022
ರಷ್ಯಾದ ಡಿಜಿಟಲ್ ಅಭಿವೃದ್ಧಿ ಸಚಿವಾಲಯ ಹೊರಡಿಸಿದ ದೇಶವು ಜಾಗತಿಕ ಇಂಟರ್ನೆಟ್‌ನಿಂದ ತನ್ನನ್ನು ತಾನೇ ಕಡಿತಗೊಳಿಸಬಹುದು ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ಉಕ್ರೇನ್ ಅನ್ನು ಆಕ್ರಮಿಸಲು ರಷ್ಯಾ ಪಾಶ್ಚಿಮಾತ್ಯ ನಿರ್ಬಂಧಗಳನ್ನು ಎದುರಿಸುತ್ತಿರುವಾಗ ಇದು ಬರುತ್ತದೆ. ಸಚಿವಾಲಯವು ಹಕ್ಕುಗಳನ್ನು ನಿರಾಕರಿಸಿದೆ, ಆದರೆ ಇತ್ತೀಚಿನ ಬೆಳವಣಿಗೆಗಳು ನಮಗೆ ತಿಳಿದಿರುವಂತೆ ಇಂಟರ್ನೆಟ್‌ಗೆ ಒಳ್ಳೆಯದನ್ನು ನೀಡುವುದಿಲ್ಲ. ಉದಾಹರಣೆಗೆ, ಯುನೈಟೆಡ್ ಸ್ಟೇಟ್ಸ್ (ಯುಎಸ್) ಮೂಲದ ಕೊಜೆಂಟ್ ಕಮ್ಯುನಿಕೇಷನ್ಸ್, ವಿಶ್ವದ ಅತಿದೊಡ್ಡ ಇಂಟರ್ನೆಟ್ ಬೆನ್ನೆಲುಬು ಪೂರೈಕೆದಾರರಲ್ಲಿ ಒಂದಾಗಿದೆ, ದಿ ವಾಷಿಂಗ್ಟನ್ ಪೋಸ್ಟ್ […]

Advertisement

Wordpress Social Share Plugin powered by Ultimatelysocial