ಪಾಕಿಸ್ತಾನದ ಕಡೆಯಿಂದ ಬಂದ ಡ್ರೋನ್ ಹೊಡೆದುರುಳಿಸಿದ ಭಾರತ!

 ಪಂಜಾಬ್‌ನ ಫಿರೋಜ್‌ಪುರ ಸೆಕ್ಟರ್‌ನಲ್ಲಿ ಪಾಕಿಸ್ತಾನದ ಕಡೆಯಿಂದ ಬಂದ ಡ್ರೋನ್ ಅನ್ನು ಹೊಡೆದುರುಳಿಸಿರುವುದಾಗಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸೋಮವಾರ ತಿಳಿಸಿದೆ.

ಬಿಎಸ್‌ಎಫ್ ಅಧಿಕಾರಿಗಳ ಪ್ರಕಾರ, ಫಿರೋಜ್‌ಪುರ ಸೆಕ್ಟರ್‌ನಲ್ಲಿ ಯೋಧರಿಗೆ ಅನುಮಾನಾಸ್ಪದವಾಗಿ ಏನೋ ಹಾರಾಟ ನಡೆಸುತ್ತಿದ್ದ ಶಬ್ದ ಕೇಳಿಸಿದೆ.

ಬಳಿಕ ಪಾಕಿಸ್ತಾನ ಕಡೆಯಿಂದ ಭಾರತದ ಕಡೆಗೆ ಬರುತ್ತಿದ್ದ ಡ್ರೋನ್ ಅನ್ನು ಕಂಡಿದ್ದಾರೆ. ಕೂಡಲೇ ಎಚ್ಚೆತ್ತ ಪಡೆ ಡ್ರೋನ್ ಅನ್ನು ಹೊಡೆದುರುಳಿಸಿದೆ.

ಡ್ರೋನ್‌ಗೆ ಸಣ್ಣ ಚೀಲವನ್ನು (ಹಸಿರು ಬಣ್ಣ) ಅಳವಡಿಸಲಾಗಿತ್ತು. ಅದರಲ್ಲಿ ೪ ಹಳದಿ ಮತ್ತು ಒಂದು ಕಪ್ಪು ಬಣ್ಣದ ಚಿಕ್ಕ ಪ್ಯಾಕೆಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಇದು ನಿಷಿದ್ಧ ಸರಕು ಎಂದು ಶಂಕಿಸಲಾಗಿದೆ ಎಂದು ಬಿಎಸ್‌ಎಫ್ ಸಿಬ್ಬಂದಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ!

Mon Mar 7 , 2022
ಶಿವರಾತ್ರಿ ಆದ್ಮೇಲೆ ಚಳಿಗಾಲ ಶಿವಶಿವ ಅನ್ಕೊಂಡು ಓಡಿಹೋಗತ್ತೆ ಅನ್ನೋ ಮಾತಿದೆ. ಆದ್ರೆ ಬೆಂಗಳೂರಲ್ಲಿ ಆದ್ಯಾಕೋ ಇನ್ನು ಚಳಿ ಎಫೆಕ್ಟ್ ಕಮ್ಮಿಯಾಗಿಲ್ಲ. ಹೀಗಿರುವಾಗ ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಇನ್ನೆರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ‌. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ, ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ‌. ದಕ್ಷಿಣ ಒಳನಾಡು, ಕರಾವಳಿಯಲ್ಲಿ […]

Advertisement

Wordpress Social Share Plugin powered by Ultimatelysocial