ರಷ್ಯಾ ಭಾರತಕ್ಕೆ ಮಿಲಿಟರಿ ಸರಬರಾಜು ನೀಡುವುದನ್ನು ಮುಂದುವರಿಸಿದೆ.

ನವದೆಹಲಿ ರಷ್ಯಾ-ಉಕ್ರೇನ್ ಯುದ್ಧದ ನಡುವೆಯೂ ರಷ್ಯಾ ಭಾರತಕ್ಕೆ ಮಿಲಿಟರಿ ಸರಬರಾಜು ನೀಡುವುದನ್ನು ಮುಂದುವರಿಸಿದೆ.

 
ಈಗಾಗಲೇ ಭಾರತ ಮಾಸ್ಕೋದಿಂದ ಎಸ್-400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯನ್ನು ಸ್ವೀಕರಿಸಿದೆ ಎಂದು ವರದಿಯಾಗಿದೆ.

ಯುದ್ಧದ ನಡುವೆಯೂ ರಷ್ಯಾ ಭಾರತಕ್ಕೆ ಮಿಲಿಟರಿ ಸರಬರಾಜುಗಳನ್ನು ಕಳುಹಿಸುತ್ತಿದೆ. ಇಲ್ಲಿವರೆಗೆ ರಷ್ಯಾ ಯಾವುದೇ ವಸ್ತುಗಳ ರವಾನೆಯಲ್ಲಿ ವಿಳಂಬ ಮಾಡಿಲ್ಲ.

ಎಸ್-400 ಕ್ಷಿಪಣಿ ವ್ಯವಸ್ಥೆಯನ್ನು ಹಡಗಿನ ಮೂಲಕ ಭಾರತಕ್ಕೆ ಕಳುಹಿಸಿದೆ. ಕ್ಷಿಪಣಿ ವ್ಯವಸ್ಥೆಯ ಇತರ ಭಾಗಗಳು ವಿಮಾನ ಹಾಗೂ ಸಮುದ್ರ ಮಾರ್ಗಗಳ ಮೂಲಕ ಆಗಮಿಸಿವೆ ಎಂದು ಮೂಲಗಳು ತಿಳಿಸಿವೆ.

ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾಗಿ 45 ದಿನಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ರಷ್ಯಾದಿಂದ ಖರೀದಿ ಮಾಡಿದ್ದ ಸರಬರಾಜುಗಳನ್ನು ಭಾರತ ಸ್ವೀಕರಿಸಲು ಕಷ್ಟವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿತ್ತು. ಆದರೂ ಭಾರತ ಇದೀಗ ರಷ್ಯಾದಿಂದ ಮಿಲಿಟರಿ ವಸ್ತುಗಳನ್ನು ಯಾವುದೇ ಸಮಸ್ಯೆಗಳಿಲ್ಲದೇ ಸ್ವೀಕರಿಸಿದೆ.ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಈಶ್ವರಪ್ಪ ಅವರು ಇಂದು ಸಂಜೆ ರಾಜೀನಾಮೆ ನೀಡಲಿದ್ದು,

Fri Apr 15 , 2022
ಹುಬ್ಬಳ್ಳಿ : ಸಚಿವ ಕೆ.ಎಸ್. ಈಶ್ವರಪ್ಪ ಅವರು ಇಂದು ಸಂಜೆ ರಾಜೀನಾಮೆ ನೀಡಲಿದ್ದು, ಸ್ವಪ್ರೇರಣೆಯಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಚಿವ ಈಶ್ವರಪ್ಪ ಅವರು ತೀರ್ಮಾನ ಮಾಡಿದ್ದಾರೆ. ಈ ಬಗ್ಗೆ ನಿನ್ನೆ ರಾತ್ರಿ ಅವರ ಜೊತೆ ಮಾತನಾಡಿದ್ದೇನೆ. ಸ್ವಪ್ರೇರಣೆಯಿಂದ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾಗಿ ತಿಳಿಸಿದ್ದಾರೆ. ಜೊತೆಗೆ ಪ್ರಕರಣವನ್ನು ಆದಷ್ಟು ಬೇಗ ತನಿಖೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ. ಆದಷ್ಟು […]

Advertisement

Wordpress Social Share Plugin powered by Ultimatelysocial